ಟೆಕ್ ಮಾರುಕಟ್ಟೆಯಲ್ಲಿ ಕ್ಯಾಮೆರಾ ಫೋನ್ಗಳ ನಡುವಣ ಪೈಪೋಟಿ ಹೆಚ್ಚುಲ್ಲೇ ಇದೆ. ಯಾವಾಗ ಮೋಟೋ ಕಂಪನಿ 200 ಮೆಗಾಫಿಕ್ಸೆಲ್ ಕ್ಯಾಮೆರಾದ ಮೊಟ್ಟ ಮೊದಲ ಸ್ಮಾರ್ಟ್‌ಫೋನ್ (Smartphone) ಅನಾವರಣ ಮಾಡಿತೋ ಅಲ್ಲಿಂದ ಹೆಚ್ಚಿನ ಕಂಪನಿಗಳು ಕ್ಯಾಮೆರಾ ಫೋನ್ಗಳ ಮೇಲೆ ಹೆಚ್ಚಿನ ಆಸಕ್ತಿ ತೋರಿಸುತ್ತಿದೆ. ಇದೀಗ ಹಾನರ್ ಸರದಿ. ಮಾರುಕಟ್ಟೆಯಲ್ಲಿ ಅಪರೂಪಕ್ಕೆ ಆಕರ್ಷಕ ಮೊಬೈಲ್ಗಳನ್ನು ಪರಿಚಯಿಸುವ ಪ್ರಸಿದ್ಧ ಹಾನರ್ (Honor) ಕಂಪನಿ ಇದೀಗ ನೂತನ ಫೋನ್ನೊಂದಿಗೆ ಮತ್ತೆ ಬಂದಿದೆ. ಈ ಬಾರಿ ಹಾನರ್ ಕಂಪನಿ ಕ್ಯಾಮೆರಾ ಪ್ರಿಯರಿಗಾಗಿ 100 ಮೆಗಾಪಿಕ್ಸೆಲ್ನ ಹೊಸ ಹಾನರ್ X50i (Honor X50i) ಸ್ಮಾರ್ಟ್‌ಫೋನ್ ಅನಾವರಣ ಮಾಡಿದೆ. ಕೇವಲ ಕ್ಯಾಮೆರಾ ಮಾತ್ರವಲ್ಲದೆ ಇದರಲ್ಲಿರುವ ಫೀಚರ್ಗಳು ಅದ್ಭುತವಾಗಿದೆ. ಈ ಫೋನಿನ ಬೆಲೆ, ವಿಶೇಷತೆ ಕುರಿತ ಮಾಹಿತಿ ಇಲ್ಲಿದೆ.
ಬೆಲೆ ಎಷ್ಟು?:
ಹಾನರ್ X50i ಸ್ಮಾರ್ಟ್‌ಫೋನ್ ಸದ್ಯಕ್ಕೆ ವಿದೇಶದಲ್ಲಿ ರಿಲೀಸ್ ಆಗಿದೆ. ಅಲ್ಲಿ ಇದರ 8GB RAM + 256GB ಸ್ಟೋರೇಜ್ ರೂಪಾಂತರದ ಆಯ್ಕೆಗೆ CNY 1,399. ಅಂದರೆ ಭಾರತದಲ್ಲಿ ಇದರ ಬೆಲೆ ಸುಮಾರು 16,600ರೂ. ಇರಬಹುದು. ಅಂತೆಯೆ 12GB RAM + 256GB ಸ್ಟೋರೇಜ್ ಮಾಡೆಲ್ ಆಯ್ಕೆಯು CNY 1,699, ಭಾರತದಲ್ಲಿ ಸುಮಾರು 20,000ರೂ.. ಈ ಸ್ಮಾರ್ಟ್‌ಫೋನ್ ಭಾರತದಲ್ಲಿ ಬಿಡುಗಡೆ ಆಗಿವ ಬಗ್ಗೆ ಕಂಪನಿ ಇನ್ನೂ ಅಧಿಕೃತ ಮಾಹಿತಿ ನೀಡಿಲ್ಲ. ಆದರೆ, ಮೂಲಗಳ ಪ್ರಕಾರ ಮುಂದಿನ ತಿಂಗಳ ಅಂತ್ಯದಲ್ಲಿ ದೇಶಕ್ಕೆ ಬರಬಹುದು ಎನ್ನಲಾಗಿದೆ.
Tech Tips: ಫೇಸ್ಬುಕ್ನಲ್ಲಿರುವ ಫೋಟೋ, ವಿಡಿಯೋಗಳನ್ನು ಗೂಗಲ್ ಫೋಟೋಸ್ಗೆ ವರ್ಗಾಹಿಸುವುದು ಹೇಗೆ?
ಫೀಚರ್ಸ್ ಏನಿದೆ?:
ಹಾನರ್ X50i ಸ್ಮಾರ್ಟ್‌ಫೋನ್ 1,080×2,388 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು 90Hz ರಿಫ್ರೆಶ್ ರೇಟ್ ಬೆಂಬಲಿಸುತ್ತದೆ. ಮೀಡಿಯಾ ಟೆಕ್ ಡೈಮೆನ್ಸಿಟಿ 6020 SoC ಪ್ರೊಸೆಸರ್ ವೇಗವನ್ನು ಪಡೆದುಕೊಂಡಿದ್ದು ಆಂಡ್ರಾಯ್ಡ್ 13 ಆಧಾರಿತ MagicOS 7.1 ನಲ್ಲಿ ಕಾರ್ಯನಿರ್ವಹಿಸಲಿದೆ.
ಈ ಫೋನ್ನಲ್ಲಿ ಪ್ರಮುಖ ಹೈಲೇಟ್ ಆಗಿರುವುದು ಕ್ಯಾಮೆರಾ. ಇದು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 100 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದು f/1.8 ಅಪಾರ್ಚರ್ ಲೆನ್ಸ್ ಆಗಿದೆ. ಹಾಗೆಯೆ ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಜೊತೆಗೆ ಎಲ್ಇಡಿ ಫ್ಲ್ಯಾಷ್ ಅನ್ನು ಒಗೊಂಡಿದೆ. ಮುಂಭಾಗ ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಕ್ಯಾಮೆರಾವನ್ನು ಅಳವಡಿಸಲಾಗಿದೆ.
ಹಾನರ್ X50i ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 35W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G ಬೆಂಬಲ ಪಡೆದುಕೊಂಡಿದೆ. ಇದರ ಜೊತೆಗೆ 4G LTE, Wi-Fi 802.1, ಬ್ಲೂಟೂತ್ 5, ಜಿಪಿಎಸ್ ಮತ್ತು USB Type-C ಪೋರ್ಟ್ ಅನ್ನು ಒಳಗೊಂಡಿದೆ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ