ಆಂಡ್ರಾಯ್ಡ್ ಸ್ಮಾರ್ಟ್‌ಫೋನ್ (Smartphone) ಬಳಕೆದಾರರು ಎದುರಿಸುವ ದೊಡ್ಡ ಸಮಸ್ಯೆ ಎಂದರೆ ಬ್ಯಾಟರಿ ಖಾಲಿಯಾದರೆ ಅಥವಾ ಫೋನ್ ಕದ್ದರೆ ಮತ್ತು ಕಳ್ಳರು ಆ ಫೋನನ್ನು ಸ್ವಿಚ್ ಆಫ್ ಮಾಡಿದರೆ ಅನ್ನು ಹುಡುಕುವುದು. ಹೀಗಾದಾಗ ಫೋನ್ ಹುಡುಕುವುದು ಒಂಟೆಯ ಬಾಯಿಯಲ್ಲಿ ಜೀರಿಗೆಯನ್ನು ಕಂಡುಕೊಂಡಂತೆ. ಆದರೆ ಮುಂಬರುವ ಗೂಗಲ್‌ನ ನವೀಕರಣ, ಆಂಡ್ರಾಯ್ಡ್ ಬಳಕೆದಾರರ ಫೋನ್ ಸ್ವಿಚ್ ಆಫ್ ಆಗಿದ್ದರೂ ಅವರ ಸ್ಮಾರ್ಟ್‌ಫೋನ್ ನಿಖರವಾದ ಸ್ಥಳವನ್ನು ಸುಲಭವಾಗಿ ಹುಡುಕಲು ಸಾಧ್ಯವಾಗುತ್ತದೆ. ಇದಕ್ಕಾಗಿ ಬಳಕೆದಾರರು ಯಾವುದೇ ಪ್ರಯತ್ನವನ್ನು ಪಡಬೇಕಾಗಿಲ್ಲ.
ಗೂಗಲ್ ಶೀಘ್ರದಲ್ಲೇ ತನ್ನ ಆಂಡ್ರಾಯ್ಡ್ 15 ಅಪ್ಡೇಟ್ ಅನ್ನು ತರಲಿದೆ. ಇದನ್ನು ಇನ್ಸ್ಟಾಲ್ ಮಾಡಿದ ನಂತರ ಆಂಡ್ರಾಯ್ಡ್ ಬಳಕೆದಾರರು ಸ್ವಿಚ್ ಆಫ್ ಮಾಡಿದ ನಂತರವೂ ತಮ್ಮ ಫೋನ್ ಅನ್ನು ಸುಲಭವಾಗಿ ಹುಡುಕಲು ಸಾಧ್ಯವಾಗುತ್ತದೆ. ಇಲ್ಲಿಯವರೆಗೆ ಈ ವೈಶಿಷ್ಟ್ಯವು ಆಂಡ್ರಾಯ್ಡ್ ಫೋನ್‌ಗಳಲ್ಲಿ ಲಭ್ಯವಿರಲಿಲ್ಲ. ಗೂಗಲ್ ಮೊದಲು ತನ್ನ ಪಿಕ್ಸೆಲ್ ಸರಣಿಯಲ್ಲಿ ಈ ನವೀಕರಣವನ್ನು ಹೊರತರುತ್ತದೆ. ಉಳಿದ ಆಂಡ್ರಾಯ್ಡ್ ಬಳಕೆದಾರರು ಈ ವೈಶಿಷ್ಟ್ಯಕ್ಕಾಗಿ ಸ್ವಲ್ಪ ಸಮಯ ಕಾಯಬೇಕಾಗುತ್ತದೆ.
ನೀವು ಯೂಟ್ಯೂಬ್ ಚಾನೆಲ್ ತೆರೆಯುವ ಪ್ಲಾನ್ನಲ್ಲಿದ್ದೀರಾ?: ಈ ವಿಷಯ ನೆನಪಿನಲ್ಲಿಡಿ
ಗೂಗಲ್ ಕಳೆದ ವರ್ಷ ಆಂಡ್ರಾಯ್ಡ್ 14 ಸಿಸ್ಟಮ್ ಅನ್ನು ಪ್ರಾರಂಭಿಸಿತ್ತು. ಈಗ ಕಂಪನಿಯು ಆಂಡ್ರಾಯ್ಡ್ 15 ಸಿಸ್ಟಮ್‌ನಲ್ಲಿ ಕಾರ್ಯನಿರ್ವಹಿಸುತ್ತಿದೆ, ಇದು ಗೂಗಲ್‌ನ ಮುಂಬರುವ ಮೊಬೈಲ್ ಆಪರೇಟಿಂಗ್ ಸಿಸ್ಟಮ್ ಆಗಿದೆ. ಆಂಡ್ರಾಯ್ಡ್ 15 ಓಎಸ್‌ನಲ್ಲಿ ಸ್ಮಾರ್ಟ್‌ಫೋನ್ ಬಳಕೆದಾರರಿಗೆ ಗೂಗಲ್ ಉತ್ತಮ ವೈಶಿಷ್ಟ್ಯವನ್ನು ನೀಡಲಿದೆ. ಇದರಲ್ಲಿ ಬಳಕೆದಾರರಿಗೆ ಫೋನ್ ಸ್ವಿಚ್ ಆಫ್ ಆಗಿದ್ದರೂ ಅದನ್ನು ಪತ್ತೆ ಮಾಡುವ ಆಯ್ಕೆ ಕೂಡ ಒಂದು.
ಹಾಗೆಯೆ ಆಂಡ್ರಾಯ್ಡ್ 15 ಅಪ್‌ಡೇಟ್‌ನಲ್ಲಿ ಫೈಂಡ್ ಮೈ ವೈಶಿಷ್ಟ್ಯವನ್ನು ಗೂಗಲ್ ನಿಲ್ಲಿಸುತ್ತದೆ. ಈ ವೈಶಿಷ್ಟ್ಯವು ಪಿಕ್ಸೆಲ್ 8 ಮತ್ತು ಪಿಕ್ಸೆಲ್ 8 ಪ್ರೊ ಫೋನ್‌ಗಳು ಮತ್ತು ಗೂಗಲ್‌ನ ಮುಂಬರುವ ಯಾವುದೇ ಫೋನ್‌ಗಳಲ್ಲಿ ಲಭ್ಯವಿರುವುದಿಲ್ಲ.
ಗೂಗಲ್‌ನ ಮುಂಬರುವ OS ಆಂಡ್ರಾಯ್ಡ್ 15 ನಲ್ಲಿ ಪಾಸ್‌ವರ್ಡ್ ಮೂಲಕ ಹುಡುಕುವ ವೈಶಿಷ್ಟ್ಯವು ಲಭ್ಯವಿರುತ್ತದೆ. ಈ ಹೊಸ ವ್ಯವಸ್ಥೆಯು ಪೂರ್ವ ಕಂಪ್ಯೂಟೆಡ್ ಬ್ಲೂಟೂತ್ ಬೀಕನ್ ಆಗಿರುತ್ತದೆ. ಇದು ಸಾಧನದ ಮೆಮೊರಿಯಿಂದ ನಿಯಂತ್ರಿಸಲ್ಪಡುತ್ತದಂತೆ. ಆದಾಗ್ಯೂ, ಇದಕ್ಕಾಗಿ ಫೋನ್ನ ಹಾರ್ಡ್‌ವೇರ್‌ನಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕಾಗುತ್ತದೆ. ಇದರಿಂದಾಗಿ ಫೋನ್ ಸ್ವಿಚ್ ಆಫ್ ಆದಾಗ ಬ್ಲೂಟೂತ್ ನಿಯಂತ್ರಣವು ವಿದ್ಯುತ್ ಪೂರೈಕೆಯನ್ನು ಪಡೆದು ಕೆಲಸ ಮಾಡುತ್ತದೆ. ಇದು ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬ ಕುರಿತು ಸ್ಪಷ್ಟ ಮಾಹಿತಿ ತಿಳಿದುಬಂದಿಲ್ಲ.
ಬಲಿಷ್ಠ ಬ್ಯಾಟರಿ ಬ್ಯಾಕಪ್ ಸ್ಮಾರ್ಟ್‌ಫೋನ್ ಹುಡುಕುತ್ತಿರುವಿರಾ?: ಇಲ್ಲಿದೆ ಅತ್ಯುತ್ತಮ ಆಯ್ಕೆಗಳು
ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಆಂಡ್ರಾಯ್ಡ್ ತಜ್ಞ ಮಿಶಾಲ್ ರೆಹಮಾನ್ ಈ ಬಗ್ಗೆ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಪಿಕ್ಸೆಲ್ 8 ಮತ್ತು ಪಿಕ್ಸೆಲ್ 8 ಪ್ರೊ ಜೊತೆಗೆ ಗೂಗಲ್‌ನ ಮುಂಬರುವ ಸ್ಮಾರ್ಟ್‌ಫೋನ್‌ಗಳಲ್ಲಿ ಈ ವೈಶಿಷ್ಟ್ಯವನ್ನು ಒದಗಿಸಲಾಗುವುದು ಎಂದು ಅವರು ಹೇಳಿದ್ದಾರೆ. ಪ್ರಸ್ತುತ ಆಂಡ್ರಾಯ್ಡ್ 15 ಓಎಸ್ ಬಿಡುಗಡೆಗೆ ಯಾವುದೇ ನಿಖರವಾದ ದಿನಾಂಕವನ್ನು ಗೂಗಲ್ ಬಹಿರಂಗಪಡಿಸಿಲ್ಲ. ಆದರೆ ಗೂಗಲ್ ಈ ವರ್ಷದ ಅಂತ್ಯದಲ್ಲಿ ಈ ಅಪ್ಡೇಟ್ ನೀಡಬಹುದು ಎಂದು ಹೇಳಲಾಗಿದೆ.