AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tech Tips: ಇನ್​ಸ್ಟಾಗ್ರಾಮ್​ನಲ್ಲಿ ಸ್ಟೇಟಸ್ ಹೈಡ್ ಮಾಡುವ ಟ್ರಿಕ್ ನಿಮಗೆ ಗೊತ್ತೇ?

Instagram Tricks: ಇನ್‌ಸ್ಟಾಗ್ರಾಮ್‌ ಅಪ್ಲಿಕೇಶನ್‌ನಲ್ಲಿ ನೀವು ಚಾಟ್‌ ಮಾಡುವಾಗ ಅವರು ಯಾವಾಗ ಆನ್​ಲೈನ್​ನಲ್ಲಿದ್ದರು ಎಂಬುದನ್ನು ಸಹ ತಿಳಿಯಲು ಅವಕಾಶ ನೀಡಲಿದೆ.

Tech Tips: ಇನ್​ಸ್ಟಾಗ್ರಾಮ್​ನಲ್ಲಿ ಸ್ಟೇಟಸ್ ಹೈಡ್ ಮಾಡುವ ಟ್ರಿಕ್ ನಿಮಗೆ ಗೊತ್ತೇ?
Instagram
Follow us
Vinay Bhat
|

Updated on: Jun 03, 2023 | 6:55 AM

ಇನ್​ಸ್ಟಾಗ್ರಾಮ್ (Instagram) ಅನ್ನು ಇಂದು ಬಳಕೆ ಮಾಡುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ತನ್ನ ಆಕರ್ಷಕ ಫೀಚರ್ಸ್‌ನಿಂದ ಬಳಕೆದಾರರ ನೆಚ್ಚಿನ ವಿಡಿಯೋ ಶೇರಿಂಗ್‌, ಚಾಟಿಂಗ್ ಅಪ್ಲಿಕೇಶನ್‌ ಆಗಿ ಗುರುತಿಸಿಕೊಂಡಿರುವ ಇನ್‌ಸ್ಟಾಗ್ರಾಮ್‌ ಬಳಕೆದಾರರ ಅನುಕೂಲಕ್ಕಾಗಿ ಹಲವು ಪ್ರೈವೆಸಿ ಆಯ್ಕೆಯನ್ನು ಕೂಡ ನೀಡಿದೆ. ಇದರಲ್ಲಿ ಕೆಲವೇ ಜನರೊಂದಿಗೆ ಅಂದರೆ ನಿಮಗೆ ಇಷ್ಟವಿರುವ ಜನರೊಂದಿಗೆ ಮಾತ್ರ ನಿಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಗಳನ್ನು (Inst Story) ಹಂಚಿಕೊಳ್ಳುವ ಆಯ್ಕೆ ಕೂಡ ಇದೆ. ಹಾಗಾದರೆ, ಇನ್​ಸ್ಟಾಗ್ರಾಮ್​ನಲ್ಲಿ ನೀವು ಅನೇಕ ಸ್ನೇಹಿತರನ್ನು ಒಳಗೊಂಡಿದ್ದರೆ ಇದರಲ್ಲಿ ಆಯ್ದ ಫಾಲೋವರ್ಸ್​ಗೆ ಮಾತ್ರ ಇನ್​ಸ್ಟಾಗ್ರಾಮ್​ ಸ್ಟೋರಿಗಳನ್ನು ಅಥವಾ ಸ್ಟೇಟಸ್ ಅನ್ನು ಹಂಚಿಕೊಳ್ಳುವುದು ಹೇಗೆ? ಇಲ್ಲಿದೆ ನೋಡಿ ಟ್ರಿಕ್ (Tricks).

  • ಮೊದಲು ನಿಮ್ಮ ಆಂಡ್ರಾಯ್ಡ್ ಅಥವಾ ಐಒಎಸ್ ಸಾಧನದಲ್ಲಿ ಇನ್​ಸ್ಟಾಗ್ರಾಮ್ ಅಪ್ಲಿಕೇಶನ್ ತೆರೆಯಿರಿ.
  • ಈಗ ಸ್ಕ್ರೀನ್​ನ ಕೆಳಗಿರುವ ನಿಮ್ಮ ಪ್ರೊಫೈಲ್ ಚಿತ್ರದ ಮೇಲೆ ಟ್ಯಾಪ್ ಮಾಡಿ.
  • ಪ್ರೊಫೈಲ್ ಪುಟದಲ್ಲಿ ಮೇಲಿನ ಬಲ ಮೂಲೆಯಲ್ಲಿರುವ ಮೂರು ಅಡ್ಡ ಸಾಲುಗಳು ಮೇಲೆ ಕ್ಲಿಕ್ ಮಾಡಿ.
  • ಇಲ್ಲಿ ಕಾಣಿಸಿಕೊಳ್ಳುವ ಆಯ್ಕೆಗಳ ಪಟ್ಟಿಯಿಂದ, ನಿಕಟ ಸ್ನೇಹಿತರ ಮೇಲೆ ಟ್ಯಾಪ್ ಮಾಡಿ.
  • ನಂತರ ಕ್ಲೋಸ್ ಫ್ರೆಂಡ್ಸ್ ಪುಟದಲ್ಲಿ, ಆಪ್ತ ಸ್ನೇಹಿತರ ಲಿಸ್ಟ್​ನಲ್ಲಿ ನಿಮಗೆ ಬೇಕಾದ ಸ್ನೇಹಿತರನ್ನು ಮಾತ್ರ ಆಯ್ಕೆ ಮಾಡಿ.

ಲಾಸ್ಟ್‌ ಸೀನ್‌ ನೋಡುವುದು ಹೇಗೆ?:

ಇನ್‌ಸ್ಟಾಗ್ರಾಮ್‌ ಅಪ್ಲಿಕೇಶನ್‌ನಲ್ಲಿ ನೀವು ಚಾಟ್‌ ಮಾಡುವಾಗ ಅವರು ಯಾವಾಗ ಆನ್​ಲೈನ್​ನಲ್ಲಿದ್ದರು ಎಂಬುದನ್ನು ಸಹ ತಿಳಿಯಲು ಅವಕಾಶ ನೀಡಲಿದೆ. ಹಾಗಂತ ನೀವು ಸ್ಟೇಟಸ್‌ ನೋಡುವುದಕ್ಕೆ ಇಬ್ಬರೂ ಒಬ್ಬರನ್ನೊಬ್ಬರು ಅನುಸರಿಸುತ್ತಾರೆಯೇ ಎಂಬುದರ ಮೇಲೆ ಅವಲಂಬಿತವಾಗಿರುವುದಿಲ್ಲ. ಆದರೆ ಎರಡೂ ಕಡೆಯವರು ಪರಸ್ಪರ ಸಂದೇಶಗಳನ್ನು ವಿನಿಮಯ ಮಾಡಿಕೊಳ್ಳುತ್ತಿರುವಾಗ ಮಾತ್ರ ಲಾಸ್ಟ್‌ ಸೀನ್‌ ನೋಡುವುದಕ್ಕೆ ಸಾದ್ಯವಾಗಲಿದೆ.

ಇದನ್ನೂ ಓದಿ
Image
ಒಂದು ದಿನದ ಅಂತರದಲ್ಲಿ ನಾಲ್ಕನೇ ಸ್ಮಾರ್ಟ್​ಫೋನ್ ಬಿಡುಗಡೆ ಮಾಡಿದ ವಿವೋ
Image
WhatsApp Ban: ಏಪ್ರಿಲ್ ತಿಂಗಳಲ್ಲಿ ಭಾರತದ 74 ಲಕ್ಷ ವಾಟ್ಸ್​ಆ್ಯಪ್ ಖಾತೆ ಬ್ಯಾನ್ ಮಾಡಿದ ಕಂಪನಿ
Image
ChatGPT: ಚಾಟ್​ಜಿಪಿಟಿಯಲ್ಲಿ ಬಂದಿದೆ ಹೊಸ ಫೀಚರ್: ಬಳಕೆದಾರರು ಫುಲ್ ಖುಷ್
Image
Redmi K50i Offer: ಭಾರತದಲ್ಲಿ ಇದೇ ಮೊದಲ ಬಾರಿ ಅತಿ ಕಡಿಮೆ ಬೆಲೆಗೆ ಸೇಲ್ ಆಗುತ್ತಿದೆ ರೆಡ್ಮಿ K50i 5G ಸ್ಮಾರ್ಟ್‌ಫೋನ್

Samsung Galaxy A14: ಸ್ಯಾಮ್​ಸಂಗ್ ಲೇಟೆಸ್ಟ್ ಗ್ಯಾಲಕ್ಸಿ ಸ್ಮಾರ್ಟ್​ಫೋನ್ ಭಾರತದಲ್ಲಿ ಬಿಡುಗಡೆ

  • ಮೊದಲು ನಿಮ್ಮ ಆಂಡ್ರಾಯ್ಡ್ ಅಥವಾ ಐಒಎಸ್ ಸಾಧನದಲ್ಲಿ ಇನ್​ಸ್ಟಾಗ್ರಾಮ್ ಅಪ್ಲಿಕೇಶನ್ ತೆರೆಯಿರಿ.
  • ನಂತರ ಮೇಲಿನ ಬಲ ಮೂಲೆಯಲ್ಲಿರುವ ಪೇಪರ್ ಐಕಾನ್ ಮೇಲೆ ಟ್ಯಾಪ್ ಮಾಡಿ.
  • ಇದು ಇನ್‌ಸ್ಟಾಗ್ರಾಮ್‌ನ ಡಿಎಂ ವಿಭಾಗವಾಗಿದ್ದು, ಇದರಲ್ಲಿ ನೀವು ಚಾಟ್‌ ಮಾಡಿದವರ ಲಾಸ್ಟ್‌ ಸೀನ್‌ ಅನ್ನು ನೋಡಬಹುದು.

ಹಾಗೆಯೇ ಒಂದು ವೇಳೆ ನೀವು ನಿಮ್ಮ ಲಾಸ್ಟ್‌ ಸೀನ್‌ ಆಕ್ಟಿವಿಟಿಯನ್ನು ಬೇರೆಯವರು ನೋಡದಂತೆ ಮಾಡುವ ಅವಕಾಶ ಕೂಡ ಇದೆ. ಇದಕ್ಕಾಗಿ ನೀವು ನಿಮ್ಮ ಪ್ರೊಫೈಲ್ ಟ್ಯಾಬ್‌ಗೆ ಹೋಗಬೇಕು, ಇದರಲ್ಲಿ ಕಾಗ್ವೀಲ್ ಐಕಾನ್ ಅನ್ನು ಟ್ಯಾಪ್ ಮಾಡಿ ಮತ್ತು ಆಯ್ಕೆಗಳ ಸ್ಕ್ರೀನ್‌ಗೆ ಹೋಗಬೇಕಾಗುತ್ತದೆ. ಈ ಟ್ಯಾಬ್ ಒಳಗೆ, ಸೆಟ್ಟಿಂಗ್‌ಗಳಿಗೆ ಕೆಳಗೆ ಸ್ಕ್ರಾಲ್ ಮಾಡಿ ಮತ್ತು “ಶೋ ಆಕ್ಟಿವಿಟಿ ಸ್ಟೇಟಸ್‌” ಆಯ್ಕೆಯನ್ನು ಆಫ್ ಮಾಡಿದರೆ ನಿಮ್ಮ ಲಾಸ್ಟ್ ಸೀನ್ ಯಾರಿಗೂ ಕಾಣಿಸುವುದಿಲ್ಲ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ
ಗೋಕರ್ಣದಲ್ಲಿ ಮತಾಂತರ ಶಂಕೆ: ಬಡವರು, ರೋಗ ಪಿಡಿತರೇ ಟಾರ್ಗೆಟ್!
ಗೋಕರ್ಣದಲ್ಲಿ ಮತಾಂತರ ಶಂಕೆ: ಬಡವರು, ರೋಗ ಪಿಡಿತರೇ ಟಾರ್ಗೆಟ್!
ಬಿಜೆಪಿ ಮತ್ತು ನಾನು ಪರಸ್ಪರ ಅವಲಂಬಿತರಾಗಿದ್ದೇವೆ: ಬಸನಗೌಡ ಯತ್ನಾಳ್
ಬಿಜೆಪಿ ಮತ್ತು ನಾನು ಪರಸ್ಪರ ಅವಲಂಬಿತರಾಗಿದ್ದೇವೆ: ಬಸನಗೌಡ ಯತ್ನಾಳ್
ರಾಷ್ಟ್ರಪತಿ ಭೇಟಿಗೆ ತೆರಳುವೆ, ಮೋದಿ ಭೇಟಿಗೂ ಸಮಯ ಕೇಳಿದ್ದೇನೆ: ಸಿಎಂ
ರಾಷ್ಟ್ರಪತಿ ಭೇಟಿಗೆ ತೆರಳುವೆ, ಮೋದಿ ಭೇಟಿಗೂ ಸಮಯ ಕೇಳಿದ್ದೇನೆ: ಸಿಎಂ
ರಾಜ್ಯ ರಾಜ್ಯಕಾರಣದಲ್ಲಿ ಯಡಿಯೂರಪ್ಪ ಸಕ್ರಿಯರಾಗುವ ಹಿಂದೆ ಕಾರಣವಿದೆಯೇ?
ರಾಜ್ಯ ರಾಜ್ಯಕಾರಣದಲ್ಲಿ ಯಡಿಯೂರಪ್ಪ ಸಕ್ರಿಯರಾಗುವ ಹಿಂದೆ ಕಾರಣವಿದೆಯೇ?