Tech Tips: ವಾಟ್ಸ್ಆ್ಯಪ್ನಲ್ಲಿ ಚಾಟ್ ತೆರೆಯದೆ ಮೆಸೇಜ್ ಓದುವ ಟ್ರಿಕ್ ನಿಮಗೆ ಗೊತ್ತೇ?
WhatsApp Tricks: ನಿಮ್ಮ ಸ್ಮಾರ್ಟ್ಫೋನ್ನಲ್ಲಿ ಕೆಲವೊಂದು ಸೆಟ್ಟಿಂಗ್ಗಳನ್ನು ಬದಲಾವಣೆ ಮಾಡಿಕೊಳ್ಳುವ ಮೂಲಕ ವಾಟ್ಸ್ಆ್ಯಪ್ ಚಾಟ್ ಅನ್ನು ತೆರೆಯದೆ ಓದಬಹುದು.
ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್ಆ್ಯಪ್ (WhatsApp) ಅನ್ನು ಇಂದು ದೊಡ್ಡ ಮಟ್ಟಕ್ಕೆ ಬೆಳೆದು ನಿಂತಿದೆ. ವಿಶ್ವದಲ್ಲಿ 2 ಬಿಲಿಯನ್ ಬಳಕೆದಾರರನ್ನು ಹೊಂದಿದೆ. ವಾರಕ್ಕೊಂದು ಹೊಸ ಹೊಸ ಫೀಚರ್ಗಳನ್ನು ಬಿಡುಗಡೆ ಮಾಡುತ್ತಿರುವ ವಾಟ್ಸ್ಆ್ಯಪ್ನಲ್ಲಿ ಅಚ್ಚರಿಯ ಆಯ್ಕೆಗಳು ಬರಲಿಕ್ಕಿದೆ. ವಾಟ್ಸ್ಆ್ಯಪ್ ಹೊಸ ಅಪ್ಡೇಟ್ಗಳನ್ನು ಬಿಡುಗಡೆ ಮಾಡುತ್ತಿದ್ದಂತೆ ಅದಕ್ಕೆ ಸಂಬಂಧಿಸಿದಂತೆ ಇತರೆ ಥರ್ಡ್ ಪಾರ್ಟಿ ಆ್ಯಪ್ಗಳು (Third Party App) ಹುಟ್ಟಿಗೊಳ್ಳುತ್ತವೆ. ಈಗಾಗಲೇ ಡಿಲೀಟ್ ಆಗಿರುವ ಮೆಸೇಜ್ ಅನ್ನು ನೋಡುವಂತಹ ಆಯ್ಕೆ, ಡಿಪಿ ಯಾರು ನೋಡಿದ್ದಾರೆಂದು ತಿಳಿಯಲು ಹೀಗೆ ಕೆಲ ಥರ್ಡ್ ಪಾರ್ಟಿ ಆ್ಯಪ್ ಮೂಲ ವಾಟ್ಸ್ಆ್ಯಪ್ನ ಕೆಲ ಟ್ರಿಕ್ ತಿಳಿದುಕೊಳ್ಳಬಹುದು. ಅದರಂತೆ ವಾಟ್ಸ್ಆ್ಯಪ್ನಲ್ಲಿ ಚಾಟ್ ಓಪನ್ ಮಾಡದೇ ಮೆಸೇಜ್ ಓದುವುದು ಹೇಗೆ ಎಂಬುದಕ್ಕೂ ಒಂದು ಟ್ರಿಕ್ (Tricks) ಇದೆ.
ವಾಟ್ಸ್ಆ್ಯಪ್ನಲ್ಲಿ ಆ್ಯಪ್ ತೆರೆಯದೆ ಚಾಟ್ ಅನ್ನು ಓದಬಹುದು. ಇದಕ್ಕೆ ಕೆಲವೊಂದು ಟ್ರಿಕ್ಗಳಿವೆ. ಹಾಗಂತ ಇದಕ್ಕಾಗಿ ನೀವು ಯಾವುದೇ ಥರ್ಡ್ ಪಾರ್ಟಿ ಆ್ಯಪ್ ಇನ್ಸ್ಟಾಲ್ ಮಾಡಿಕೊಳ್ಳಬೇಕಾಗಿಲ್ಲ. ಸಾಮಾನ್ಯವಾಗಿ ನೋಟಿಫಿಕೇಶನ್ ಪ್ಯಾನೆಲ್ನಲ್ಲಿ ಈ ಮೆಸೇಜ್ ಒದಬಹುದು. ಆದರೆ, ಇಲ್ಲಿ ತೀರಾ ಉದ್ದವಿದ್ದ ಮೆಸೇಜ್ ಓದಲು ಸಾಧ್ಯವಿಲ್ಲ. ಬದಲಾಗಿ ನಿಮ್ಮ ಸ್ಮಾರ್ಟ್ಫೋನ್ನಲ್ಲಿ ಕೆಲವೊಂದು ಸೆಟ್ಟಿಂಗ್ಗಳನ್ನು ಬದಲಾವಣೆ ಮಾಡಿಕೊಳ್ಳುವ ಮೂಲಕ ವಾಟ್ಸ್ಆ್ಯಪ್ ಚಾಟ್ ಅನ್ನು ತೆರೆಯದೆ ಓದಬಹುದು. ಅದು ಆಂಡ್ರಾಯ್ಡ್ ಸ್ಮಾರ್ಟ್ಫೋನ್ನಲ್ಲಿ ಹೇಗೆ ಎಂಬುದಕ್ಕೆ ಇಲ್ಲಿದೆ ನೋಡಿ ಟ್ರಿಕ್.
Tech Tips: ಸಿಮ್ ಕಾರ್ಡ್ ಅನ್ನು ಜಸ್ಟ್ ಹೀಗೆ ಮಾಡಿ: ನಿಮ್ಮ ಇಂಟರ್ನೆಟ್ ಹೈ-ಸ್ಪೀಡ್ ಆಗುತ್ತದೆ
- ಆಂಡ್ರಾಯ್ಡ್ ಸ್ಮಾರ್ಟ್ಫೋನ್ನಲ್ಲಿ ಮೈನ್ ಸ್ಕ್ರೀನ್ನಲ್ಲಿರುವ ಹೋಮ್ ಪೇಜ್ ಅನ್ನು ಲಾಂಗ್ ಪ್ರೆಸ್ ಮಾಡಿ
- ಈಗ ಅಲ್ಲಿ ಕಾಣಿಸುವ Widgets ಆಯ್ಕೆ ಮೇಲೆ ಒತ್ತಿರಿ
- ನಂತರ ಮೈನ್ ಸ್ಕ್ರೀನ್ನಲ್ಲಿ ಎಲ್ಲ Widgets ಕಾಣಿಸುತ್ತದೆ. ಇದರಲ್ಲಿ ವಾಟ್ಸ್ಆ್ಯಪ್ ಆಯ್ಕೆ ಮಾಡಿ
- ವಾಟ್ಸ್ಆ್ಯಪ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ಮೈನ್ ಸ್ಕ್ರೀನ್ನಲ್ಲಿ ಕಾಣಿಸುತ್ತದೆ
- ನಂತರ ಡನ್ ಆಯ್ಕೆಯನ್ನು ಒತ್ತಿರಿ. ಈ ಸಂದರ್ಭ ಬೇಕಾದಲ್ಲಿ ಫುಲ್ ಸ್ಕ್ರೀನ್ ವರೆಗೂ ಸೆಲೆಕ್ಟ್ ಮಾಡಬಹುದು.
- ಈ ಸೆಟ್ಟಿಂಗ್ ನಂತರ ಸ್ಕ್ರಾಲ್ ಮಾಡುವ ಮೂಲಕ ವಾಟ್ಸ್ಆ್ಯಪ್ ತೆರೆಯದೆ ಮೆಸೇಜ್ ಓದಬಹುದು
- ಯಾವುದೇ ಕಾರಣಕ್ಕೂ ಮೆಸೇಜ್ ಮೇಲೆ ಕ್ಲಿಕ್ ಮಾಡಬೇಡಿ, ಮಾಡಿದರೆ ವಾಟ್ಸ್ಆ್ಯಪ್ ಓಪನ್ ಆಗಿ ನೇರವಾಗಿ ಚಾಟ್ಗೆ ಪ್ರವೇಶಿಸುತ್ತದೆ.
ಒಂದೇ ಸ್ಮಾರ್ಟ್ಫೋನ್ನಲ್ಲಿ ಎರಡು ಅಕೌಂಟ್:
ವಾಟ್ಸ್ಆ್ಯಪ್ ತನ್ನ ಬಳಕೆದಾರರಿಗೆ ಒಂದೇ ಅಪ್ಲಿಕೇಶನ್‌ನಲ್ಲಿ ಎರಡು ಪ್ರತ್ಯೇಕ ವಾಟ್ಸ್ಆ್ಯಪ್ ಖಾತೆಗಳನ್ನು ತೆರೆಯುವ ಆಯ್ಕೆ ನೀಡುತ್ತಿದೆ. ಅಂದರೆ ನಿಮ್ಮ ಸ್ಮಾರ್ಟ್ಫೋನ್ನಲ್ಲಿ ಎರಡು ಸಿಮ್ಗಳಿದ್ದರೆ ಈ ಎರಡೂ ಸಿಮ್ಗೆ ಒಂದೇ ಮೊಬೈಲ್ನಲ್ಲಿ ಎರಡು ವಾಟ್ಸ್ಆ್ಯಪ್ ಅಕೌಂಟ್ ತೆರೆಯಬಹುದು. ಸದ್ಯ ವಾಟ್ಸ್ಆ್ಯಪ್ ಈ ಫೀಚರ್ ಮೇಲೆ ಕಾರ್ಯ ನಿರ್ವಹಿಸುತ್ತಿದ್ದು, ಕೆಲವೇ ದಿನಗಳಲ್ಲಿ ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗೆ ಸಿಗುವ ನಿರೀಕ್ಷೆ ಇದೆ.
ವಾಟ್ಸ್ಆ್ಯಪ್ ಪರಿಚಯಿಸಲಿರುವ ಈ ಹೊಸ ಆಯ್ಕೆ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ಮುಖ್ಯ ಡಿವೈಸ್‌ಗೆ ಲಿಂಕ್ ಮಾಡಲಾದ ಕಂಪ್ಯಾನಿಯನ್ ಡಿವೈಸ್‌ಗಳಲ್ಲಿ ಅವರು ಡ್ಯುಯಲ್ ಖಾತೆಗಳನ್ನು ಬಳಸಲು ಸಾಧ್ಯವಾಗುತ್ತದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ನೂತನ ಫೀಚರ್ ವಾಟ್ಸ್ಆ್ಯಪ್ ಅಪ್ಲಿಕೇಶನ್‌ನ ಬಿಸಿನೆಸ್ ಆವೃತ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸಾಮಾನ್ಯ ಆವೃತ್ತಿಗೆ ಸಹ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದೆ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ