Tech Tips: ನಿಮ್ಮ ಸ್ಮಾರ್ಟ್​ಫೋನ್ ಡಿಸ್ ಪ್ಲೇ ಸ್ಕ್ರಾಚ್​ ಆಗಿದ್ದರೆ ಬದಲಾಯಿಸಬೇಕಿಲ್ಲ: ಜಸ್ಟ್ ಹೀಗೆ ಮಾಡಿ

|

Updated on: Jun 04, 2023 | 6:55 AM

ಇಂದು ಕಡಿಮೆ ಬೆಲೆಗೆ ಸ್ಮಾರ್ಟ್​ಫೋನ್ಸ್ ಸುಲಭದಿಂದ ಸಿಗುತ್ತಿರುವ ಕಾರಣ ಅದನ್ನು ಜೋಪಾನವಾಗಿ ಕಾಪಾಡಿಕೊಳ್ಳುವವರು ಕಮ್ಮಿ. ಹೆಚ್ಚಿನವರ ಮೊಬೈಲ್ ಡಿಸ್ ಪ್ಲೇ ಒಂದಲ್ಲ ಒಂದು ರೀತಿಯಲ್ಲಿ ಹಾನಿಯಾಗಿರುತ್ತದೆ.

Tech Tips: ನಿಮ್ಮ ಸ್ಮಾರ್ಟ್​ಫೋನ್ ಡಿಸ್ ಪ್ಲೇ ಸ್ಕ್ರಾಚ್​ ಆಗಿದ್ದರೆ ಬದಲಾಯಿಸಬೇಕಿಲ್ಲ: ಜಸ್ಟ್ ಹೀಗೆ ಮಾಡಿ
Smartphone
Follow us on

ಇಂದು ಸ್ಮಾರ್ಟ್​ಫೋನ್ ಮಾರುಕಟ್ಟೆಯಲ್ಲಿ ನಾನಾ ನಮೂನೆಯ ಮೊಬೈಲ್​ಗಳಿವೆ. ಮಡಚುವ ಫೋನ್​ನಿಂದ ಹಿಡಿದು ಕೀಪೈಡ್ ಮೊಬೈಲ್ ವರೆಗೆ ಖರೀದಿ ಮಾಡುತ್ತಾರೆ. ಮುಖ್ಯವಾಗಿ ಈಗ ಕಡಿಮೆ ಬೆಲೆಗೆ ಸ್ಮಾರ್ಟ್​ಫೋನ್ಸ್ ಸುಲಭದಿಂದ ಸಿಗುತ್ತಿರುವ ಕಾರಣ ಅದನ್ನು ಜೋಪಾನವಾಗಿ ಕಾಪಾಡಿಕೊಳ್ಳುವವರು ಕಮ್ಮಿ. ಹೆಚ್ಚಿನವರ ಮೊಬೈಲ್ ಡಿಸ್ ಪ್ಲೇ ಒಂದಲ್ಲ ಒಂದು ರೀತಿಯಲ್ಲಿ ಹಾನಿಯಾಗಿರುತ್ತದೆ. ಡಿಸ್ ಪ್ಲೇಗೆ (Display) ಸ್ಕ್ರೀನ್ ಕವರ್ ಹಾಕಿದ್ದರೂ ಅದು ಕೆಲವೊಂದು ಬಾರಿ ಉಪಯೋಗಕ್ಕೆ ಬರುವುದಿಲ್ಲ. ಹಾಗಾಗಿ ದಿನನಿತ್ಯದ ಬಳಕೆಯ ನಡುವೆ ಸ್ಮಾರ್ಟ್‌ಫೋನ್‌ ಸ್ಕ್ರಾಚ್ ಆಗಿಯೇ ಆಗುತ್ತದೆ. ಆದ್ದರಿಂದ ನಿಮ್ಮ ಫೋನ್​ನಲ್ಲಾದ ಸ್ಕ್ರಾಚ್ ಅನ್ನು ಸುಲಭವಾಗಿ ಹೇಗೆ ತೆಗೆಯಬಹುದು ಎಂದು ಲೇಖನದಲ್ಲಿ ತಿಳಿಸಲಾಗಿದೆ.

ಮೊಟ್ಟೆಯ ಬಿಳಿಭಾಗ: ಹೌದು, ಮೊಟ್ಟೆಯ ಬಿಳಿಭಾಗ ಮತ್ತು ಪೊಟ್ಯಾಶಿಯಮ್ ಸಲ್ಫೇಟ್ ಬಳಸಿ ಫೋನ್‌ ಸ್ಕ್ರಾಚ್ ನಿವಾರಣೆ ಮಾಡಿಕೊಳ್ಳಬಹುದಾಗಿದೆ. ಇವೆರಡನ್ನು ಮಿಶ್ರಣ ಮಾಡಿ. ಮತ್ತು ಈ ಮಿಶ್ರಣದಿಂದ ಸ್ಮಾರ್ಟ್‌ಫೋನ್ ಪರದೆಯನ್ನು ಒರೆಸಿ.

ಬೇಕಿಂಗ್ ಸೋಡಾ: ಸ್ಕ್ರಾಚ್ ನಿವಾರಣೆಗಾಗಿ ಬೇಕಿಂಗ್ ಸೋಡಾ ಉತ್ತಮ ವಿಧಾನ. ಒಂದು ಪಾತ್ರೆಗೆ ನೀರು ಮತ್ತು ಸೋಡಾವನ್ನು ಬೆರೆಸಿಕೊಳ್ಳಿ. ಇವೆರಡನ್ನು ನುಣ್ಣನೆ ಪೇಸ್ಟ್ ಮಾಡಿ ಮತ್ತು ಹತ್ತಿ ಬಟ್ಟೆ ಬಳಸಿ ಸ್ಕ್ರಾಚ್ ನಿವಾರಣೆ ಮಾಡಿ.

ಇದನ್ನೂ ಓದಿ
Nokia C300: ನೋಕಿಯಾದಿಂದ ಎರಡು ಜಬರ್ದಸ್ತ್ ಸ್ಮಾರ್ಟ್​ಫೋನ್ಸ್ ಬಿಡುಗಡೆ: ಯಾವುದು?, ಬೆಲೆ ಎಷ್ಟು?
Flipkart: ಫ್ಲಿಪ್​​ಕಾರ್ಟ್​ನಲ್ಲಿ ಶುರುವಾಗಿದೆ ಬಿಗ್ ಎಂಡ್ ಆಫ್ ಸೀಸನ್ ಸೇಲ್: ಅನೇಕ ಪ್ರಾಡಕ್ಟ್​ಗಳಿಗೆ ಬಂಪರ್ ಡಿಸ್ಕೌಂಟ್
Tech Tips: ಇನ್​ಸ್ಟಾಗ್ರಾಮ್​ನಲ್ಲಿ ಸ್ಟೇಟಸ್ ಹೈಡ್ ಮಾಡುವ ಟ್ರಿಕ್ ನಿಮಗೆ ಗೊತ್ತೇ?
Oppo K11x: ಲೇಟೆಸ್ಟ್ ಸ್ಮಾರ್ಟ್​ಫೋನ್ ಬಿಡುಗಡೆ ಮಾಡಿದ ಒಪ್ಪೊ

ಒಂದು ದಿನದ ಅಂತರದಲ್ಲಿ ನಾಲ್ಕನೇ ಸ್ಮಾರ್ಟ್​ಫೋನ್ ಬಿಡುಗಡೆ ಮಾಡಿದ ವಿವೋ

ಸ್ಕ್ರಾಚ್ ರಿಮೂವಲ್ ಕ್ರೀಮ್‌: ಮಾರುಕಟ್ಟೆಯಲ್ಲಿ ಹಲವಾರು ಕಾರು ಸ್ಕ್ರಾಚ್ ರಿಮೂವಲ್ ಕ್ರೀಮ್‌ಗಳಿವೆ. ಅವುಗಳಲ್ಲಿ ಯಾವುದಾದರೂ ಒಂದನ್ನು ಬಳಸಿ ನಿಮ್ಮ ಫೋನ್ ಡಿಸ್‌ಪ್ಲೇ ಸ್ಕ್ರಾಚ್ ಹೋಗಲಾಡಿಸಿ.

ಬೇಬಿ ಪೌಡರ್: ಬೇಬಿ ಪೌಡರ್ ಮೂಲಕವೂ ಡಿಸ್‌ಪ್ಲೇ ಸ್ಕ್ರಾಚ್ ರಿಮೂವ್ ಮಾಡಬಹುದು ಎಂಬುದು ನಿಮಗೆ ಗೊತ್ತೆ. ಒಂದು ಪಾತ್ರೆಗೆ ನೀರು ಮತ್ತು ಬೇಬಿ ಪೌಡರ್ ಬೆರೆಸಿಕೊಳ್ಳಿ. ಇವೆರಡನ್ನು ನುಣ್ಣನೆ ಪೇಸ್ಟ್ ಮಾಡಿ ಮತ್ತು ಹತ್ತಿ ಬಟ್ಟೆ ಬಳಸಿ ಸ್ಕ್ರಾಚ್ ಆದ ಜಾಗದಲ್ಲಿ ಹಚ್ಚಿರಿ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ