ಇಂದು ಏರ್ಪೋರ್ಟ್ನಲ್ಲಿ (Airport) ಪ್ರಯಾಣಿಕರಿಗೆ ಸುಲಭವಾಗಿ ಪ್ರಯಾಣ ಮಾಡಲು ಅನೇಕ ತಂತ್ರಜ್ಞಾನಗಳನ್ನು ಪ್ರಯೋಗಿಸಲಾಗುತ್ತಿದೆ. ಅವುಗಳಲ್ಲಿ ಡಿಜಿಯಾತ್ರಾ (DigiYatra App) ಕೂಡ ಒಂದು. ಈ ಹಿಂದೆ ವಿಮಾನ ನಿಲ್ದಾಣಗಳಲ್ಲಿ ಸಾಕಷ್ಟು ಪ್ರವೇಶಾತಿ ಪ್ರಕ್ರಿಯೆಗಳನ್ನು ಭೌತಿಕವಾಗಿ ಮಾಡಬೇಕಾಗಿತ್ತು. ಇದಕ್ಕೆ ಸಾಕಷ್ಟು ಸಮಯವೂ ಹಾಳಗುತ್ತಿತ್ತು. ಆದರೀಗ ಇದನ್ನೆಲ್ಲ ನಿವಾರಿಸುವಲ್ಲಿ ಡಿಜಿಯಾತ್ರಾ ಡಿಜಿಟಲ್ ಸೇವೆ ಸಹಕಾರಿ ಆಗಿದೆ. ಮುಖ ಗುರುತಿಸುವಿಕೆಯ ವ್ಯವಸ್ಥೆಯನ್ನು ಆಧರಿಸಿ ಪ್ರಯಾಣಿಕರ ಪ್ರವೇಶವನ್ನು ಡಿಜಿಯಾತ್ರಾ ಅನುಮತಿಸುತ್ತದೆ. ಇದರೊಂದಿಗೆ ವಿಮಾನ ನಿಲ್ದಾಣಗಳಲ್ಲಿ ಬೋರ್ಡಿಂಗ್ ಪಾಸ್ ಹಾಗೂ ಗುರುತಿನ ಪುರಾವೆಗೆ ಮುಕ್ತಿ ಸಿಕ್ಕಂತಾಗಿದೆ. ದೆಹಲಿ, ವಾರಾಣಸಿ ಮತ್ತು ಬೆಂಗಳೂರಿಗರಿನಲ್ಲಿ (Bengaluru) ಡಿಜಿಯಾತ್ರಾದ ಮೂಲಕ ವಿಮಾನದ ಪ್ರಯಾಣಿಕರು ಯಾವುದೇ ಅಡೆತಡೆಯಿಲ್ಲದೆ ಪ್ರಯಾಣ ಮಾಡುತ್ತಿದ್ದಾರೆ. ಹಾಗಾದರೆ ಈ ಡಿಜಿಯಾತ್ರಾ ಆ್ಯಪ್ ಅನ್ನು ಬಳಸುವುದು ಹೇಗೆ?, ಇದು ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ನೋಡೋಣ.
ಡಿಜಿಯಾತ್ರಾದೊಂದಿಗೆ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಕಾಗದರಹಿತ ಪ್ರವೇಶವಾಗಿರುತ್ತದೆ. ಮತ್ತು ಭದ್ರತಾ ತಪಾಸಣೆ ಸೇರಿದಂತೆ ವಿವಿಧ ಚೆಕ್ಕಿಂಗ್ ಬೋರ್ಡ್ಗಳಲ್ಲಿ ಮುಖ ಗುರುತಿಸುವಿಕೆಯ ವ್ಯವಸ್ಥೆಯನ್ನು ಆಧರಿಸಿ ಪ್ರಯಾಣಿಕರ ಡೇಟಾವನ್ನು ಸ್ವಯಂಚಾಲಿತವಾಗಿ ಪ್ರಕ್ರಿಯೆಗೊಳಿಸಲು ಸಹಾಯಕವಾಗಿದೆ. ಇದರಿಂದ ಪ್ರಯಾಣಿಕರು ಬೋರ್ಡಿಂಗ್ ಪಾಸ್ ಅಥವಾ ಸೆಕ್ಯೂರಿಟಿ ಚೆಕ್ಕಿಂಗ್ಗಾಗಿ ಗಂಟೆಗಟ್ಟಲೇ ಕ್ಯೂನಲ್ಲಿ ನಿಲ್ಲುವ ತಾಪತ್ರಯ ಇರುವುದಿಲ್ಲ. ಅಂದರೆ ಈ ಆ್ಯಪ್ ಮೂಲಕ ವಿಮಾನ ನಿಲ್ದಾಣದ ಪ್ರವೇಶ, ಭದ್ರತಾ ತಪಾಸಣೆ, ಏರ್‌ಪ್ಲೇನ್ ಬೋರ್ಡಿಂಗ್ ಮುಂತಾದ ಎಲ್ಲಾ ಚೆಕ್‌ಪಾಯಿಂಟ್‌ಗಳು ಮುಖ ಗುರುತಿಸುವಿಕೆ ತಂತ್ರಜ್ಞಾನದ ಆಧಾರದ ಮೇಲೆ ಪ್ರಯಾಣಿಕರ ನಮೂದುಗಳನ್ನು ಸ್ವಯಂಚಾಲಿತವಾಗಿ ಪ್ರಕ್ರಿಯೆಗೊಳಿಸುತ್ತವೆ.
Adani Group: ಈಗ ಅದಾನಿ ಸಮೂಹ ಕಂಪನಿಗಳ ಷೇರು ಖರೀದಿಸುವುದು ಉತ್ತಮವೇ? ಚಾಟ್ ಜಿಪಿಟಿ ಕೊಟ್ಟ ಉತ್ತರ ಹೀಗಿದೆ ನೋಡಿ!
ಡಿಜಿಯಾತ್ರವನ್ನು ಹೇಗೆ ಬಳಸುವುದು?:
ಹೇಗೆ ಕಾರ್ಯ ನಿರ್ವಹಿಸುತ್ತದೆ?:
ವಿಮಾನ ನಿಲ್ದಾಣದ ಪ್ರವೇಶ ದ್ವಾರದಲ್ಲಿ ಕಿಯೋಸ್ಕ್ ಯಂತ್ರಗಳನ್ನು ಅಳವಡಿಸಲಾಗುತ್ತದೆ. ಅವುಗಳ ಮೂಲಕ ಬಯೋಮೆಟ್ರಿಕ್ ಸೆಲ್ಫ್ ಬೋರ್ಡಿಂಗ್ ತಂತ್ರಜ್ಞಾನ ಕಾರ್ಯ ನಿರ್ವಹಿಸಲಿದೆ. ಪ್ರಯಾಣಿಕರು ಮೊದಲು ದ್ವಾರದ ಬಳಿ ಇರುವ ಕಿಯೋಸ್ಕ್ ಯಂತ್ರದಲ್ಲಿ ದಾಖಲೆಗಳ ಮಾಹಿತಿ ನಮೂದಿಸಬೇಕು. ಮುಖ ಹಾಗೂ ಕಣ್ಣಿನ ಗುರುತನ್ನು ಯಂತ್ರದಲ್ಲಿ ದಾಖಲಿಸಬೇಕು. ನಂತರ ನಿಲ್ದಾಣದ ಒಳಗೆ ಇರುವ ಕಿಯೋಸ್ಕ್ ಯಂತ್ರಗಳಲ್ಲಿ ಮುಖವನ್ನಷ್ಟೇ ತೋರಿಸಿ, ಸರಾಗವಾಗಿ ಮುಂದೆ ಹೋಗಬಹುದು. ನಿಲ್ದಾಣದಿಂದ ಪ್ರಯಾಣಿಸುವ ಪ್ರತಿಯೊಬ್ಬ ಪ್ರಯಾಣಿಕರು ಒಂದು ಬಾರಿ ನೋಂದಣಿ ಮಾಡುವುದು ಕಡ್ಡಾಯ. ಅದಾದ ನಂತರ ಜೀವನ ಪರ್ಯಂತ ಬೋರ್ಡಿಂಗ್ ಪಾಸ್ ಇಲ್ಲದೇ ನಿಲ್ದಾಣದಲ್ಲಿ ಓಡಾಡಬಹುದು. ನೂತನ ತಂತ್ರಜ್ಞಾನದ ಸೌಲಭ್ಯ ದೇಶೀಯ ವಿಮಾನಗ,ಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಮಾತ್ರ ಸಿಗಲಿದೆ ಹಾಗೂ ವಿದೇಶಿ ಪ್ರಜೆಗಳಿಗೆ ಈ ಸೌಲಭ್ಯ ಅನ್ವಯವಾಗುವುದಿಲ್ಲ.
ವಿಮಾನ ನಿಲ್ದಾಣದಲ್ಲಿ ಇ ಗೇಟ್ ಪ್ರವೇಶ:
ಭದ್ರತಾ ತಪಾಸಣೆ ವೇಳೆ ಅನುಸರಿಸಬೇಕಾದ ಕ್ರಮಗಳು
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ