AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Huawei Enjoy 20e: ಹುವಾಯೇ ಕಂಪೆನಿಯಿಂದ ಬಜೆಟ್ ಬೆಲೆಗೆ ಭರ್ಜರಿ ಫೀಚರ್​ಗಳ ಹೊಸ ಫೋನ್ ಅನಾವರಣ

ಹುವಾವೇ ಎಂಜಾಯ್ 20e ಸ್ಮಾರ್ಟ್‌ಫೋನ್ ಒಟ್ಟು ಎರಡು ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ. 4GB RAM ಮತ್ತು 64GB ಸ್ಟೋರೇಜ್‌ ವೇರಿಯಂಟ್‌ ಬೆಲೆ ಚೀನಾದಲ್ಲಿ CNY 999 ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜು 11,700 ರೂ. ಎನ್ನಬಹುದು.

Huawei Enjoy 20e: ಹುವಾಯೇ ಕಂಪೆನಿಯಿಂದ ಬಜೆಟ್ ಬೆಲೆಗೆ ಭರ್ಜರಿ ಫೀಚರ್​ಗಳ ಹೊಸ ಫೋನ್ ಅನಾವರಣ
Huawei Enjoy 20e
TV9 Web
| Updated By: Vinay Bhat|

Updated on: Oct 21, 2021 | 2:23 PM

Share

ಹುವಾವೇ (Huawei) ಮೊಬೈಲ್ ತಯಾರಿಕಾ ಸಂಸ್ಥೆ ಹೊಸದಾಗಿ ‘ಎಂಜಾಯ್’ (Huawei Enjoy) ಸರಣಿಯಲ್ಲಿ ಮತ್ತೊಂದು ಸ್ಮಾರ್ಟ್​ಫೋನನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಹುವಾವೇ ಎಂಜಾಯ್ 20ಇ (Huawei Enjoy 20e) ಸ್ಮಾರ್ಟ್‌ಫೋನ್ (Smartphone) ಇದೀಗ ಅನಾವರಣಗೊಂಡಿದ್ದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹೆಲಿಯೊ P35 SoC ಪ್ರೊಸೆಸರ್ ಬಲವನ್ನು ಒಳಗೊಂಡಿದೆ. ಹಾಗೆಯೇ ಈ ಫೋನಿನ ಮುಖ್ಯ ಕ್ಯಾಮೆರಾವು 13 ಮೆಗಾ ಪಿಕ್ಸೆಲ್ ಸೆನ್ಸಾರ್​ನಿಂದ ಕೂಡಿದ್ದು ಬಜೆಟ್ ಬೆಲೆಯನ್ನು ನಿಗದಿ ಮಾಡಲಾಗಿದೆ.

ಹುವಾವೇ ಎಂಜಾಯ್ 20e ಸ್ಮಾರ್ಟ್‌ಫೋನ್ ಒಟ್ಟು ಎರಡು ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ. 4GB RAM ಮತ್ತು 64GB ಸ್ಟೋರೇಜ್‌ ವೇರಿಯಂಟ್‌ ಬೆಲೆ ಚೀನಾದಲ್ಲಿ CNY 999 ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜು 11,700 ರೂ. ಎನ್ನಬಹುದು.

ಈ ಸ್ಮಾರ್ಟ್‌ಫೋನ್ 720×1,600 ಪಿಕ್ಸೆಲ್‌ ರೆಸಲ್ಯೂಶನ್ ಜೊತೆಗೆ 6.3 ಇಂಚಿನ ಹೆಚ್‌ಡಿ ಪ್ಲಸ್‌ TFT IPS LCD ಡಿಸ್‌ಪ್ಲೇ ಹೊಂದಿದೆ. ಆಕ್ಟಾ-ಕೋರ್ ಮೀಡಿಯಾ ಟೆಕ್ ಹೆಲಿಯೊ P35 SoC ಪ್ರೊಸೆಸರ್ ಹೊಂದಿದೆ. ಇದಕ್ಕೆ ಪೂರಕವಾಗಿ ಹಾರ್ಮನಿ ಓಎಸ್‌ 2 ಸಪೋರ್ಟ್‌ ಪಡೆದಿದೆ.

ಹುವಾವೇ ಎಂಜಾಯ್ 20e ಸ್ಮಾರ್ಟ್‌ಫೋನ್ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾವು 13 ಮೆಗಾ ಪಿಕ್ಸಲ್‌ ಸೆನ್ಸಾರ್‌ ಹೊಂದಿದೆ. ಸೆಕೆಂಡರಿ ಕ್ಯಾಮೆರಾವು 2 ಮೆಗಾ ಪಿಕ್ಸೆಲ್ ಸೆನ್ಸಾರ್‌ನಲ್ಲಿದೆ. ಇದರೊಂದಿಗೆ ಸೆಲ್ಫಿ ಕ್ಯಾಮೆರಾವು 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಪಡೆದಿದೆ. ಹಾಗೆಯೇ ಎಡಿಟಿಂಗ್ ಆಯ್ಕೆಗಳನ್ನು ಇದು ಒಳಗೊಂಡಿದೆ.

ಇನ್ನು 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದೆ. ಇದಕ್ಕೆ ಪೂರಕವಾಗಿ 10W ಸಾಮರ್ಥ್ಯ ಚಾರ್ಜಿಂಗ್ ಸೌಲಭ್ಯವನ್ನು ಹೊಂದಿದೆ. ಹಾಗೆಯೇ ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi, ಬ್ಲೂಟೂತ್ v5, 3.5mm ಹೆಡ್‌ಫೋನ್ ಜ್ಯಾಕ್, USB OTG ಮತ್ತು ಮೈಕ್ರೋ-USB ಪೋರ್ಟ್ ಸೇರಿವೆ. ಆನ್‌ಬೋರ್ಡ್ ಸೆನ್ಸರ್‌ಗಳು ಆಂಬಿಯೆಂಟ್ ಲೈಟ್ ಸೆನ್ಸರ್, ಗೈರೊಸ್ಕೋಪ್, ದಿಕ್ಸೂಚಿ, ಸಾಮೀಪ್ಯ ಸೆನ್ಸರ್ ಮತ್ತು ಗ್ರಾವಿಟಿ ಸೆನ್ಸರ್ ಅನ್ನು ಒಳಗೊಂಡಿವೆ.

Oppo K9s: ಬರೋಬ್ಬರಿ 64MP ಕ್ಯಾಮೆರಾ, ಬಲಿಷ್ಠ ಪ್ರೊಸೆಸರ್, ಬ್ಯಾಟರಿ: ಒಪ್ಪೋ K9s ಸ್ಮಾರ್ಟ್​ಫೋನ್ ಬಿಡುಗಡೆ

Amazon Prime: ಪ್ರೈಮ್ ಸದಸ್ಯರಿಗೆ ಬಿಗ್ ಶಾಕ್ ನೀಡಿದ ಅಮೆಜಾನ್: ವಾರ್ಷಿಕ ಯೋಜನೆಯಲ್ಲಿ ದೊಡ್ಡ ಬದಲಾವಣೆ

(Huawei Enjoy 20e With HarmonyOS 2 MediaTek Helio P35 Launched Hers is the Price and Specifications)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ