Huawei Nova 10 SE: ಮಾರುಕಟ್ಟೆಗೆ ಬಂತು 108MP ಕ್ಯಾಮೆರಾದ ಮತ್ತೊಂದು ಸ್ಮಾರ್ಟ್​ಫೋನ್: ಯಾವುದು?, ಬೆಲೆ ಎಷ್ಟು?

ಸ್ಮಾರ್ಟ್‌ಫೋನ್‌ ಉತ್ಪಾದನಾ ಕಂಪನಿ ಹುವೈ ಇದೀಗ ತನ್ನ ಹೊಸ ಹುವೈ ನೋವಾ 10 ಎಸ್​ಇ (Huawei Nova 10 SE) ಫೋನ್‌ ಅನ್ನು ಅನಾವರಣ ಮಾಡಿದೆ. ಸಾಕಷ್ಟು ವಿಶೇಷತೆಗಳಿಂದ ಕೂಡಿರುವ ಈ ಹೊಸ ಸ್ಮಾರ್ಟ್‌ಫೋನ್​ನ ಪ್ರಮುಖ ಹೈಲೇಟ್ ಕ್ಯಾಮೆರಾ.

Huawei Nova 10 SE: ಮಾರುಕಟ್ಟೆಗೆ ಬಂತು 108MP ಕ್ಯಾಮೆರಾದ ಮತ್ತೊಂದು ಸ್ಮಾರ್ಟ್​ಫೋನ್: ಯಾವುದು?, ಬೆಲೆ ಎಷ್ಟು?
Huawei Nova 10 SE
TV9kannada Web Team

| Edited By: Vinay Bhat

Sep 26, 2022 | 2:49 PM

ಸ್ಮಾರ್ಟ್​ಫೋನ್ ಮಾರುಕಟ್ಟೆಯಲ್ಲೀಗ ಕ್ಯಾಮೆರಾ ​ಫೋನ್​ಗಳದ್ದೇ ಹಾವಳಿ. ಅದರಲ್ಲೂ 108 ಮೆಗಾಫಿಕ್ಸೆಲ್​ನ ಫೋನ್​ಗಳು (108MP Camera Phone) ಮಾರುಕಟ್ಟೆಗೆ ಪ್ರವೇಶಿಸಿದ್ದೇ ತಂಡ ಭರ್ಜರಿ ಸೇಲ್ ಆಗುತ್ತಿದೆ. ಇದನ್ನೆ ಗಮನದಲ್ಲಿಟ್ಟುಕೊಂಡಿರುವ ಕಂಪನಿ ಒಂದರ ಹಿಂದೆ ಒಂದರಂತೆ ಆಕರ್ಷಕ ಕ್ಯಾಮೆರಾಗಳ ಮೊಬೈಲ್​ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿವೆ. ಇತ್ತೀಚೆಗಷ್ಟೆ 200 ಮೆಗಾಫಿಕ್ಸೆಲ್ ಕ್ಯಾಮೆರಾದ ಫೋನ್ ಕೂಡ ಬಿಡುಗಡೆ ಆಗಿದೆ. ಇದರ ನಡುವೆ ಜಾಗತಿಕ ಮಟ್ಟದಲ್ಲಿ ಭರ್ಜರಿ ಸದ್ದು ಮಾಡುತ್ತಿರುವ ಚೀನಾದ ಪ್ರಮುಖ ಸ್ಮಾರ್ಟ್‌ಫೋನ್‌ ಉತ್ಪಾದನಾ ಕಂಪನಿ ಹುವೈ ಇದೀಗ ತನ್ನ ಹೊಸ ಹುವೈ ನೋವಾ 10 ಎಸ್​ಇ (Huawei Nova 10 SE) ಫೋನ್‌ ಅನ್ನು ಅನಾವರಣ ಮಾಡಿದೆ. ಸಾಕಷ್ಟು ವಿಶೇಷತೆಗಳಿಂದ ಕೂಡಿರುವ ಈ ಹೊಸ ಸ್ಮಾರ್ಟ್‌ಫೋನ್​ನ ಪ್ರಮುಖ ಹೈಲೇಟ್ ಕ್ಯಾಮೆರಾ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಫಿಕ್ಸೆಲ್ (108MP Camera) ಸೆನ್ಸಾರ್ ಹೊಂದಿದೆ.

ಸದ್ಯಕ್ಕೆ ಈ ಫೋನ್ ವಿದೇಶದಲ್ಲಿ ಬಿಡುಗಡೆ ಆಗಿದ್ದು ಕೆಲವು ತಿಂಗಳಲ್ಲಿ ಭಾರತಕ್ಕೂ ಕಾಲಿಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈಗ ಒಂದು ಮಾದರಿಯಲ್ಲಿ ಬಿಡುಗಡೆ ಆಗಿರುವ ಈ ಫೋನಿನ 8GB RAM ಮತ್ತು 256GB ಸ್ಟೋರೇಜ್ ರೂಪಾಂತರದ ಆಯ್ಕೆಯ ಬೆಲೆ ಬಹಿರಂಗಗೊಂಡಿಲ್ಲ. ಆದರೆ, ಇತ್ತೀಚೆಗಷ್ಟೆ ಬಿಡುಗಡೆ ಆದ ಹುವೈ ನೋವಾ 10 ಬೆಲೆ CNY 2,699, ಅಂದರೆ ಇದರ ಬೆಲೆ ಭಾರತದಲ್ಲಿ ಅಂದಾಜು 31,000 ರೂ. ಎನ್ನಬಹುದು. ಇದಕ್ಕಿಂತ ಕೊಂಚ ಬೆಲೆ ಹೆಚ್ಚಿರಬಹುದೆಂದು ಹೇಳಬಹುದು.

ಈ ಫೋನಿನ ವಿಶೇಷತೆ ಬಗ್ಗೆ ಗಮನಿಸುವುದಾದರೆ, ಹುವೈ ನೋವಾ 10 SE ಸ್ಮಾರ್ಟ್‌ಫೋನ್‌ 6.67 ಇಂಚಿನ ಫ್ಲಾಟ್ OLED ಡಿಸ್‌ಪ್ಲೇಯನ್ನು ಹೊಂದಿದೆ. 90Hz ರಿಫ್ರೆಶ್​ರೇಟ್​ನಿಂದ ಕೂಡಿದೆ. ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ EMUI 12 ಔಟ್ಆಫ್ದಿಬಾಕ್ಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ.

ಇನ್ನು ಈ ಸ್ಮಾರ್ಟ್‌ಫೋನ್‌ ತ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಿಂದ ಕೂಡಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ಆಂಗಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಒಳಗೊಂಡಿರುತ್ತದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮೈರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಇದನ್ನೂ ಓದಿ

ಹುವೈ ನೋವಾ 10 SE ಸ್ಮಾರ್ಟ್​ಫೋನ್​ನಲ್ಲಿ ದೀರ್ಘ ಸಮಯ ಬಾಳಿಕೆ ಬರುವಂತಹ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದೆ. ಇದು 66W ಹುವೈ ಸೂಪರ್‌ ಚಾರ್ಜ್‌ ಬೆಂಬಲವನ್ನು ಪಡೆದುಕೊಂಡಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ ಇರುವ ಸಾಧ್ಯತೆ ಇದೆ. 4G LTE, ಡ್ಯುಯಲ್ಬ್ಯಾಂಡ್ Wi-Fi, ಬ್ಲೂಟೂತ್ v5, USB ಟೈಪ್ C ಯನ್ನು ಬೆಂಬಲಿಸಲಿದೆ. ಇದಲ್ಲದೆ ಆಂಬಿಯೆಂಟ್‌ ಲೈಟ್‌ ಸೆನ್ಸಾರ್‌, GPS, AGPS, ಗ್ಲೋನಾಸ್ ಗ್ರಾವಿಟಿ ಸೆನ್ಸಾರ್, ಕಂಪಾಸ್‌, ಒಳಗೊಂಡಿದೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada