Huawei Nova 9 SE: ಬಿಡುಗಡೆ ಆಗಿದೆ 108MP ಕ್ಯಾಮೆರಾದ ಮತ್ತೊಂದು ಹೊಸ ಸ್ಮಾರ್ಟ್​ಫೋನ್: ಬೆಲೆ ಕೇವಲ …

ಹುವೈ ಇದೀಗ ತನ್ನ ಹೊಸ ಹುವೈ ನೋವಾ 9 SE ಫೋನ್‌ ಅನ್ನು ಅನಾವರಣ ಮಾಡಿದೆ. ಸಾಕಷ್ಟು ವಿಶೇಷತೆಗಳಿಂದ ಕೂಡಿರುವ ಈ ಹೊಸ ಸ್ಮಾರ್ಟ್‌ಫೋನ್ ಕ್ವಾಲ್‌ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ ಹೊಂದಿದ್ದು, ಇದರ ಮುಖ್ಯ ಕ್ಯಾಮೆರಾ 108 ಮೆಗಾಫಿಕ್ಸೆಲ್ ಸೆನ್ಸಾರ್​ನಲ್ಲಿದೆ. ಅಲ್ಲದೆ ಇದು ಬಜೆಟ್​ ಬೆಲೆಗೆ ಲಭ್ಯವಿದೆ.

Huawei Nova 9 SE: ಬಿಡುಗಡೆ ಆಗಿದೆ 108MP ಕ್ಯಾಮೆರಾದ ಮತ್ತೊಂದು ಹೊಸ ಸ್ಮಾರ್ಟ್​ಫೋನ್: ಬೆಲೆ ಕೇವಲ …
Huawei Nova 9 SE
Follow us
| Updated By: Vinay Bhat

Updated on: Mar 12, 2022 | 2:34 PM

ಜಾಗತಿಕ ಮಟ್ಟದಲ್ಲಿ ಭರ್ಜರಿ ಸದ್ದು ಮಾಡುತ್ತಿರುವ ಚೀನಾದ ಪ್ರಮುಖ ಸ್ಮಾರ್ಟ್‌ಫೋನ್‌ ಉತ್ಪಾದನಾ ಕಂಪನಿ ಹುವೈ ಇದೀಗ ತನ್ನ ಹೊಸ ಹುವೈ ನೋವಾ 9 ಎಸ್​ಇ (Huawei Nova 9 SE) ಫೋನ್‌ ಅನ್ನು ಅನಾವರಣ ಮಾಡಿದೆ. ಸಾಕಷ್ಟು ವಿಶೇಷತೆಗಳಿಂದ ಕೂಡಿರುವ ಈ ಹೊಸ ಸ್ಮಾರ್ಟ್‌ಫೋನ್ ಕ್ವಾಲ್‌ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ ಹೊಂದಿದ್ದು, 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಒಳಗೊಂಡಿದೆ. ಜೊತೆಗೆ 4,000mAh ಸಾಮರ್ಥ್ಯದ ಬ್ಯಾಟರಿ, ಅತ್ಯುತ್ತಮ ಕ್ಯಾಮೆರಾ ಸೌಲಭ್ಯ ನೀಡಲಾಗಿದೆ. ಅಚ್ಚರಿ ಎಂದರೆ ಇದರ ಮುಖ್ಯ ಕ್ಯಾಮೆರಾ 108 ಮೆಗಾಫಿಕ್ಸೆಲ್ (108MP Camera) ಸೆನ್ಸಾರ್ ಹೊಂದಿದೆ. ಅಲ್ಲದೆ ಇದು ಬಜೆಟ್​ ಬೆಲೆಗೆ ಲಭ್ಯವಿದೆ. ಸದ್ಯಕ್ಕೆ ಈ ಫೋನ್ ವಿದೇಶದಲ್ಲಿ ಬಿಡುಗಡೆ ಆಗಿದ್ದು ಕೆಲವು ತಿಂಗಳಲ್ಲಿ ಭಾರತಕ್ಕೂ ಕಾಲಿಡುವ ಸಾಧ್ಯತೆ ಇದೆ ಎನ್ನಲಾಗಿದೆ. ಹಾಗಿದ್ದರೆ ಹುವೈ ನೋವಾ 9 SE ಸ್ಮಾರ್ಟ್​ಫೋನಿನ (Smartphone) ವಿಶೇಷತೆ ಏನು?, ಬೆಲೆ ಎಷ್ಟು ಎಂಬ ಬಗೆಗಿನ ಮಾಹಿತಿ ತಿಳಿದುಕೊಳ್ಳೋಣ.

ಇದೀಗ ಈ ಸ್ಮಾರ್ಟ್‌ಫೋನ್‌ ಮೆಲೆಷ್ಯಾದಲ್ಲಿ ಒಂದು ಮಾದರಿಯಲ್ಲಿ ಬಿಡುಗಡೆ ಆಗಿದೆ. ಇದರ 8GB RAM ಮತ್ತು 128GB ಸ್ಟೋರೇಜ್ ರೂಪಾಂತರದ ಆಯ್ಕೆಗೆ MYR 1,099, ಅಂದರೆ ಇದರ ಬೆಲೆ ಭಾರತದಲ್ಲಿ ಅಂದಾಜು 20,000 ರೂ. ಎನ್ನಬಹುದು. ಈ ಸ್ಮಾರ್ಟ್‌ಫೋನ್ ಕ್ರಿಸ್ಟಲ್ ಬ್ಲೂ, ಮಿಡ್‌ನೈಟ್ ಬ್ಲಾಕ್ ಮತ್ತು ಪರ್ಲ್ ವೈಟ್ ಎಂಬ ಮೂರು ಬಣ್ಣದ ಆಯ್ಕೆಗಳಲ್ಲಿ ನೀಡುತ್ತಿದೆ.

ಈ ಫೋನಿನ ವಿಶೇಷತೆ ಬಗ್ಗೆ ಗಮನಿಸುವುದಾದರೆ, ಹುವೈ ನೋವಾ 9 SE ಸ್ಮಾರ್ಟ್‌ಫೋನ್‌ 1,080×2,388 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.78 ಇಂಚಿನ ಫುಲ್‌ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಹುವಾವೇ ಫೂಲ್‌ ವ್ಯೂ TFT LCD ಡಿಸ್‌ಪ್ಲೇ ಆಗಿದೆ. ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ EMUI 12 ಔಟ್-ಆಫ್-ದಿ-ಬಾಕ್ಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ.

ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ f/1.9 ಲೆನ್ಸ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌, ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ ಅನ್ನು ಒಳಗೊಂಡಿರುತ್ತದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮೈರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ದೀರ್ಘ ಸಮಯ ಬಾಳಿಕೆ ಬರುವಂತಹ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದೆ. ಇದು 66W ಹುವೈ ಸೂಪರ್‌ ಚಾರ್ಜ್‌ ಬೆಂಬಲವನ್ನು ಪಡೆದುಕೊಂಡಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ಡ್ಯುಯಲ್-ಬ್ಯಾಂಡ್ Wi-Fi, ಬ್ಲೂಟೂತ್ v5, USB ಟೈಪ್ C ಯನ್ನು ಬೆಂಬಲಿಸಲಿದೆ. ಇದಲ್ಲದೆ ಆಂಬಿಯೆಂಟ್‌ ಲೈಟ್‌ ಸೆನ್ಸಾರ್‌, GPS, AGPS, ಗ್ಲೋನಾಸ್ ಗ್ರಾವಿಟಿ ಸೆನ್ಸಾರ್, ಕಂಪಾಸ್‌, ಒಳಗೊಂಡಿದೆ.

WhatsApp: ವಾಟ್ಸ್​ಆ್ಯಪ್ ಮೂಲಕವೂ ನಿಮ್ಮ ಬ್ಯಾಂಕ್ ಖಾತೆಯ ಬ್ಯಾಲೆನ್ಸ್ ತಿಳಿಯಬಹುದು: ಹೇಗೆ ಗೊತ್ತೇ?

Flipkart Big Saving Days Sale: ಫ್ಲಿಪ್​ಕಾರ್ಟ್​ನಲ್ಲಿ ಬಿಗ್ ಸೇವಿಂಗ್ ಡೇಸ್: ಸಾವಿರಾರು ಪ್ರಾಡಕ್ಟ್​​ಗಳು ಅತಿ ಕಡಿಮೆ ಬೆಲೆಗೆ ಮಾರಾಟ

ತಾಜಾ ಸುದ್ದಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?