ಜಾಗತಿಕ ಮಟ್ಟದಲ್ಲಿ ಭರ್ಜರಿ ಸದ್ದು ಮಾಡುತ್ತಿರುವ ಚೀನಾದ ಪ್ರಮುಖ ಸ್ಮಾರ್ಟ್‌ಫೋನ್ ಉತ್ಪಾದನಾ ಕಂಪನಿ ಹುವೈ ಇದೀಗ ತನ್ನ ಹೊಸ ಹುವೈ ನೋವಾ 9 ಎಸ್ಇ (Huawei Nova 9 SE) ಫೋನ್ ಅನ್ನು ಅನಾವರಣ ಮಾಡಿದೆ. ಸಾಕಷ್ಟು ವಿಶೇಷತೆಗಳಿಂದ ಕೂಡಿರುವ ಈ ಹೊಸ ಸ್ಮಾರ್ಟ್‌ಫೋನ್ ಕ್ವಾಲ್‌ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ಹೊಂದಿದ್ದು, 8GB RAM ಮತ್ತು 128GB ಇಂಟರ್ ಸ್ಟೋರೇಜ್ ಒಳಗೊಂಡಿದೆ. ಜೊತೆಗೆ 4,000mAh ಸಾಮರ್ಥ್ಯದ ಬ್ಯಾಟರಿ, ಅತ್ಯುತ್ತಮ ಕ್ಯಾಮೆರಾ ಸೌಲಭ್ಯ ನೀಡಲಾಗಿದೆ. ಅಚ್ಚರಿ ಎಂದರೆ ಇದರ ಮುಖ್ಯ ಕ್ಯಾಮೆರಾ 108 ಮೆಗಾಫಿಕ್ಸೆಲ್ (108MP Camera) ಸೆನ್ಸಾರ್ ಹೊಂದಿದೆ. ಅಲ್ಲದೆ ಇದು ಬಜೆಟ್ ಬೆಲೆಗೆ ಲಭ್ಯವಿದೆ. ಸದ್ಯಕ್ಕೆ ಈ ಫೋನ್ ವಿದೇಶದಲ್ಲಿ ಬಿಡುಗಡೆ ಆಗಿದ್ದು ಕೆಲವು ತಿಂಗಳಲ್ಲಿ ಭಾರತಕ್ಕೂ ಕಾಲಿಡುವ ಸಾಧ್ಯತೆ ಇದೆ ಎನ್ನಲಾಗಿದೆ. ಹಾಗಿದ್ದರೆ ಹುವೈ ನೋವಾ 9 SE ಸ್ಮಾರ್ಟ್ಫೋನಿನ (Smartphone) ವಿಶೇಷತೆ ಏನು?, ಬೆಲೆ ಎಷ್ಟು ಎಂಬ ಬಗೆಗಿನ ಮಾಹಿತಿ ತಿಳಿದುಕೊಳ್ಳೋಣ.
ಇದೀಗ ಈ ಸ್ಮಾರ್ಟ್‌ಫೋನ್ ಮೆಲೆಷ್ಯಾದಲ್ಲಿ ಒಂದು ಮಾದರಿಯಲ್ಲಿ ಬಿಡುಗಡೆ ಆಗಿದೆ. ಇದರ 8GB RAM ಮತ್ತು 128GB ಸ್ಟೋರೇಜ್ ರೂಪಾಂತರದ ಆಯ್ಕೆಗೆ MYR 1,099, ಅಂದರೆ ಇದರ ಬೆಲೆ ಭಾರತದಲ್ಲಿ ಅಂದಾಜು 20,000 ರೂ. ಎನ್ನಬಹುದು. ಈ ಸ್ಮಾರ್ಟ್‌ಫೋನ್ ಕ್ರಿಸ್ಟಲ್ ಬ್ಲೂ, ಮಿಡ್‌ನೈಟ್ ಬ್ಲಾಕ್ ಮತ್ತು ಪರ್ಲ್ ವೈಟ್ ಎಂಬ ಮೂರು ಬಣ್ಣದ ಆಯ್ಕೆಗಳಲ್ಲಿ ನೀಡುತ್ತಿದೆ.
ಈ ಫೋನಿನ ವಿಶೇಷತೆ ಬಗ್ಗೆ ಗಮನಿಸುವುದಾದರೆ, ಹುವೈ ನೋವಾ 9 SE ಸ್ಮಾರ್ಟ್‌ಫೋನ್ 1,080×2,388 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.78 ಇಂಚಿನ ಫುಲ್ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಹುವಾವೇ ಫೂಲ್ ವ್ಯೂ TFT LCD ಡಿಸ್‌ಪ್ಲೇ ಆಗಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ EMUI 12 ಔಟ್-ಆಫ್-ದಿ-ಬಾಕ್ಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ.
ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ f/1.9 ಲೆನ್ಸ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್, ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಅನ್ನು ಒಳಗೊಂಡಿರುತ್ತದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮೈರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
ದೀರ್ಘ ಸಮಯ ಬಾಳಿಕೆ ಬರುವಂತಹ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದೆ. ಇದು 66W ಹುವೈ ಸೂಪರ್ ಚಾರ್ಜ್ ಬೆಂಬಲವನ್ನು ಪಡೆದುಕೊಂಡಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ಡ್ಯುಯಲ್-ಬ್ಯಾಂಡ್ Wi-Fi, ಬ್ಲೂಟೂತ್ v5, USB ಟೈಪ್ C ಯನ್ನು ಬೆಂಬಲಿಸಲಿದೆ. ಇದಲ್ಲದೆ ಆಂಬಿಯೆಂಟ್ ಲೈಟ್ ಸೆನ್ಸಾರ್, GPS, AGPS, ಗ್ಲೋನಾಸ್ ಗ್ರಾವಿಟಿ ಸೆನ್ಸಾರ್, ಕಂಪಾಸ್, ಒಳಗೊಂಡಿದೆ.
WhatsApp: ವಾಟ್ಸ್ಆ್ಯಪ್ ಮೂಲಕವೂ ನಿಮ್ಮ ಬ್ಯಾಂಕ್ ಖಾತೆಯ ಬ್ಯಾಲೆನ್ಸ್ ತಿಳಿಯಬಹುದು: ಹೇಗೆ ಗೊತ್ತೇ?