iQOO Neo 6: ಭಾರತಕ್ಕೆ ಬಂದೇ ಬಿಡ್ತು ಐಕ್ಯೂ ನಿಯೋ 6 5G: ಇಷ್ಟು ಕಡಿಮೆ ಬೆಲೆಗೆ ಎಂಥಾ ಸ್ಮಾರ್ಟ್​​ಫೋನ್

ವಿಶೇಷ ಫೀಚರ್​ಗಳ ಜೊತೆ ಸ್ಟೈಲಿಶ್ ಸ್ಮಾರ್ಟ್​​ಫೋನನ್ನು ಮಾರುಕಟ್ಟೆಗೆ ಪರಿಚಯಿಸುವ ಈ ಬ್ರ್ಯಾಂಡ್ ಇದೀಗ ಭಾರತದಲ್ಲಿ ತನ್ನ ಹೊಸ ಐಕ್ಯೂ ನಿಯೋ 6 5G (iQoo Neo 6) ಸ್ಮಾರ್ಟ್‌ಫೋನ್ ಅನ್ನು ಲಾಂಚ್‌ ಮಾಡಿದೆ.

iQOO Neo 6: ಭಾರತಕ್ಕೆ ಬಂದೇ ಬಿಡ್ತು ಐಕ್ಯೂ ನಿಯೋ 6 5G: ಇಷ್ಟು ಕಡಿಮೆ ಬೆಲೆಗೆ ಎಂಥಾ ಸ್ಮಾರ್ಟ್​​ಫೋನ್
iQOO Neo 6
Follow us
TV9 Web
| Updated By: Vinay Bhat

Updated on: May 31, 2022 | 1:56 PM

ಈಗಂತು ಮಾರುಕಟ್ಟೆಗೆ ದಿನಕ್ಕೊಂದರಂತೆ ಹೊಸ ಹೊಸ ಸ್ಮಾರ್ಟ್​​ಫೋನ್​ಗಳು (Smartphone) ಲಗ್ಗೆಯಿಡುತ್ತವೆ. ಪ್ರತಿ ಫೋನ್​ನಲ್ಲೂ ತನ್ನದೇ ಆದ ವಿಶೇಷ ಫೀಚರ್​ಗಳು ಒಳಗೊಂಡಿರುತ್ತವೆ. ಇವುಗಳ ನಡುವೆ ವಿಭಿನ್ನವಾಗಿ ನಿಲ್ಲುವುದು ಐಕ್ಯೂ (iQoo) ಕಂಪನಿ. ವಿಶೇಷ ಫೀಚರ್​ಗಳ ಜೊತೆ ಸ್ಟೈಲಿಶ್ ಸ್ಮಾರ್ಟ್​​ಫೋನನ್ನು ಮಾರುಕಟ್ಟೆಗೆ ಪರಿಚಯಿಸುವ ಈ ಬ್ರ್ಯಾಂಡ್ ಇದೀಗ ಭಾರತದಲ್ಲಿ ತನ್ನ ಹೊಸ ಐಕ್ಯೂ ನಿಯೋ 6 5G (iQoo Neo 6) ಸ್ಮಾರ್ಟ್‌ಫೋನ್ ಅನ್ನು ಲಾಂಚ್‌ ಮಾಡಿದೆ. ಈಗಾಗಲೇ ವಿದೇಶದಲ್ಲಿ ರಿಲೀಸ್ ಆಗಿ ಧೂಳೆಬ್ಬಿಸಿರುವ ಈ ಫೋನ್ ಇಂದು ದೇಶದಲ್ಲಿ ಅನಾವರಣಗೊಂಡಿದೆ. ಐಕ್ಯೂ ನಿಯೋ 6  ಅತ್ಯಂತ ಬಲಿಷ್ಠವಾದ ಸ್ನಾಪ್‌ಡ್ರಾಗನ್‌ 870 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌, ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್​ನಿಂದ ಕೂಡಿದೆ. ಹಾಗಾದ್ರೆ ಈ ಫೋನಿನ ಬೆಲೆ ಎಷ್ಟು?, ಏನು ವಿಶೇಷತೆ? ಎಂಬುದನ್ನ ನೋಡೋಣ.

  1. ಐಕ್ಯೂ ನಿಯೋ 6 5G ಸ್ಮಾರ್ಟ್‌ಫೋನ್ ಭಾರತದಲ್ಲಿ ಎರಡು ಸ್ಟೋರೆಜ್ ಆಯ್ಕೆಯಲ್ಲಿ ಬಿಡುಗಡೆ ಆಗಿದೆ. ಇದರ 8GB RAM ಮತ್ತು 128GB ಮಾದರಿಯ ಆಯ್ಕೆಗೆ 29,999 ರೂ. ನಿಗದಿ ಮಾಡಲಾಗಿದೆ. ಜೊತೆಗೆ ಟಾಪ್-ಎಂಡ್ 12GB RAM ಮತ್ತು 256GB ಆಯ್ಕೆಗೆ 33,999 ರೂ. ಇದೆ. ಈ ಫೋನ್ ಇಂದಿನಿಂದಲೇ ಅಮೆಜಾನ್ ಮೂಲಕ ಖರೀದಿಗೆ ಸಿಗುತ್ತಿದೆ.
  2. ಈ ಸ್ಮಾರ್ಟ್‌ಫೋನ್ 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.62 ಇಂಚಿನ ಫುಲ್‌ HD+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ.
  3. ಬಲಿಷ್ಠವಾದ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್ 12 ನಲ್ಲಿ OriginOS ಓಷನ್ ಕಸ್ಟಮ್ ಸ್ಕಿನ್‌ನೊಂದಿಗೆ ಕಾರ್ಯನಿರ್ವಹಿಸುತ್ತದೆ.
  4. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್‌ ISOCELL ಪ್ಲಸ್‌ GW1P ಸೆನ್ಸಾರ್‌ ಕ್ಯಾಮೆರಾವನ್ನು ಹೊಂದಿದೆ.
  5. ಇದನ್ನೂ ಓದಿ
    Image
    Airtel vs Jio: ಏರ್ಟೆಲ್​​ನಿಂದ ಹೊಸ ಆಲ್-ಇನ್-ಒನ್ ಬ್ರಾಡ್‌ಬ್ಯಾಂಡ್‌ ಯೋಜನೆ: ಜಿಯೋ-ಏರ್ಟೆಲ್​ ಪ್ಲಾನ್​ನಲ್ಲಿ ಯಾವುದು ಬೆಸ್ಟ್?
    Image
    Jio Game Controller: ಜಿಯೋ ಗೇಮ್ ಕಂಟ್ರೋಲರ್ ಬಿಡುಗಡೆ: ಗೇಮಿಂಗ್ ಪ್ರಿಯರು ಫುಲ್ ಫಿದಾ
    Image
    Vivo Y33e 5G: ಸದ್ದಿಲ್ಲದೆ ಬಜೆಟ್ ಬೆಲೆಗೆ ಬಿಡುಗಡೆ ಆಗಿದೆ ವಿವೋ Y33e 5G ಸ್ಮಾರ್ಟ್‌ಫೋನ್‌: ಏನು ವಿಶೇಷತೆ?
    Image
    ಫ್ಲಿಪ್‌ಕಾರ್ಟ್‌ನ ನವೀಕರಿಸಿದ ಸ್ಮಾರ್ಟ್‌ಫೋನ್ ಮಾರಾಟ ಪುನರಾರಂಭ, ಇಲ್ಲಿವೆ ಕೆಲವು ಕೈಗೆಟಕುವ ದರದಲ್ಲಿ ಲಭ್ಯವಾಗುವ ಐಫೋನ್​ಗಳು
  6. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ವೈಡ್ ಆ್ಯಂಗಲ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮೊನೊಕ್ರೋಮ್ ಲೆನ್ಸ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
  7. ದೀರ್ಘ ಸಮಯ ಬಾಳಿಕೆ ಬರುವ 4,700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 80W ಫ್ಲ್ಯಾಶ್ ಚಾರ್ಜ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.
  8. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS, NFC, ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಅಳವಡಿಸಲಾಗಿದೆ.

ತಂತ್ರಜ್ಞಾನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ