iQOO Neo 6
ಈಗಂತು ಮಾರುಕಟ್ಟೆಗೆ ದಿನಕ್ಕೊಂದರಂತೆ ಹೊಸ ಹೊಸ ಸ್ಮಾರ್ಟ್ಫೋನ್ಗಳು (Smartphone) ಲಗ್ಗೆಯಿಡುತ್ತವೆ. ಪ್ರತಿ ಫೋನ್ನಲ್ಲೂ ತನ್ನದೇ ಆದ ವಿಶೇಷ ಫೀಚರ್ಗಳು ಒಳಗೊಂಡಿರುತ್ತವೆ. ಇವುಗಳ ನಡುವೆ ವಿಭಿನ್ನವಾಗಿ ನಿಲ್ಲುವುದು ಐಕ್ಯೂ (iQoo) ಕಂಪನಿ. ವಿಶೇಷ ಫೀಚರ್ಗಳ ಜೊತೆ ಸ್ಟೈಲಿಶ್ ಸ್ಮಾರ್ಟ್ಫೋನನ್ನು ಮಾರುಕಟ್ಟೆಗೆ ಪರಿಚಯಿಸುವ ಈ ಬ್ರ್ಯಾಂಡ್ ಇದೀಗ ಭಾರತದಲ್ಲಿ ತನ್ನ ಹೊಸ ಐಕ್ಯೂ ನಿಯೋ 6 5G (iQoo Neo 6) ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. ಈಗಾಗಲೇ ವಿದೇಶದಲ್ಲಿ ರಿಲೀಸ್ ಆಗಿ ಧೂಳೆಬ್ಬಿಸಿರುವ ಈ ಫೋನ್ ಇಂದು ದೇಶದಲ್ಲಿ ಅನಾವರಣಗೊಂಡಿದೆ. ಐಕ್ಯೂ ನಿಯೋ 6 ಅತ್ಯಂತ ಬಲಿಷ್ಠವಾದ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್, ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ನಿಂದ ಕೂಡಿದೆ. ಹಾಗಾದ್ರೆ ಈ ಫೋನಿನ ಬೆಲೆ ಎಷ್ಟು?, ಏನು ವಿಶೇಷತೆ? ಎಂಬುದನ್ನ ನೋಡೋಣ.
- ಐಕ್ಯೂ ನಿಯೋ 6 5G ಸ್ಮಾರ್ಟ್‌ಫೋನ್ ಭಾರತದಲ್ಲಿ ಎರಡು ಸ್ಟೋರೆಜ್ ಆಯ್ಕೆಯಲ್ಲಿ ಬಿಡುಗಡೆ ಆಗಿದೆ. ಇದರ 8GB RAM ಮತ್ತು 128GB ಮಾದರಿಯ ಆಯ್ಕೆಗೆ 29,999 ರೂ. ನಿಗದಿ ಮಾಡಲಾಗಿದೆ. ಜೊತೆಗೆ ಟಾಪ್-ಎಂಡ್ 12GB RAM ಮತ್ತು 256GB ಆಯ್ಕೆಗೆ 33,999 ರೂ. ಇದೆ. ಈ ಫೋನ್ ಇಂದಿನಿಂದಲೇ ಅಮೆಜಾನ್ ಮೂಲಕ ಖರೀದಿಗೆ ಸಿಗುತ್ತಿದೆ.
- ಈ ಸ್ಮಾರ್ಟ್‌ಫೋನ್ 1,080×2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.62 ಇಂಚಿನ ಫುಲ್ HD+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ.
- ಬಲಿಷ್ಠವಾದ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 12 ನಲ್ಲಿ OriginOS ಓಷನ್ ಕಸ್ಟಮ್ ಸ್ಕಿನ್‌ನೊಂದಿಗೆ ಕಾರ್ಯನಿರ್ವಹಿಸುತ್ತದೆ.
- ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ISOCELL ಪ್ಲಸ್ GW1P ಸೆನ್ಸಾರ್ ಕ್ಯಾಮೆರಾವನ್ನು ಹೊಂದಿದೆ.
- ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ವೈಡ್ ಆ್ಯಂಗಲ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮೊನೊಕ್ರೋಮ್ ಲೆನ್ಸ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
- ದೀರ್ಘ ಸಮಯ ಬಾಳಿಕೆ ಬರುವ 4,700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 80W ಫ್ಲ್ಯಾಶ್ ಚಾರ್ಜ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.
- ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS, NFC, ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಅಳವಡಿಸಲಾಗಿದೆ.
ತಂತ್ರಜ್ಞಾನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ