Lava Blaze 5G: ವಿದೇಶಿ ಕಂಪನಿಗಳ ಹುಟ್ಟಡಗಿಸಿದ ಭಾರತದ ಲಾವಾ: ಕೇವಲ 9,999ರೂ.ಗೆ 5G ಫೋನ್ ಬಿಡುಗಡೆ

ಭಾರತದ ಪ್ರಸಿದ್ಧ ಲಾವಾ (Lava) ಕಂಪನಿ ಇದೀಗ ದೇಶದಲ್ಲಿ ಊಹಿಸಲಾಗದ ಬೆಲೆಗೆ ಆಕರ್ಷಕ 5ಜಿ ಫೋನನ್ನು ಔಪಚಾರಿಕವಾಗಿ ಪರಿಚಯಿಸಿದೆ. ಇದರ ಹೆಸರು ಲಾವಾ ಬ್ಲೆಂಜ್‌ 5ಜಿ (Lava Blaze 5G).

Lava Blaze 5G: ವಿದೇಶಿ ಕಂಪನಿಗಳ ಹುಟ್ಟಡಗಿಸಿದ ಭಾರತದ ಲಾವಾ: ಕೇವಲ 9,999ರೂ.ಗೆ 5G ಫೋನ್ ಬಿಡುಗಡೆ
Lava Blaze 5G
Follow us
TV9 Web
| Updated By: Vinay Bhat

Updated on: Nov 13, 2022 | 2:34 PM

ಮಾರುಕಟ್ಟೆಯಲ್ಲಿ ಸದಾ ಬಜೆಟ್ ಬೆಲೆಯ ಸ್ಮಾರ್ಟ್​ಫೋನ್​ಗಳನ್ನು (Smartphones) ಬಿಡುಗಡೆ ಮಾಡಿ ಸುದ್ದಿಯಾಗುವ ಭಾರತದ ಪ್ರಸಿದ್ಧ ಲಾವಾ (Lava) ಕಂಪನಿ ಇದೀಗ ದೇಶದಲ್ಲಿ ಊಹಿಸಲಾಗದ ಬೆಲೆಗೆ ಆಕರ್ಷಕ 5ಜಿ ಫೋನನ್ನು ಔಪಚಾರಿಕವಾಗಿ ಪರಿಚಯಿಸಿದೆ. ಇದರ ಹೆಸರು ಲಾವಾ ಬ್ಲೆಂಜ್‌ 5ಜಿ (Lava Blaze 5G). ಕಳೆದ ತಿಂಗಳು ಅಕ್ಟೋಬರ್​ನಲ್ಲಿ ನಡೆದ ಇಂಡಿಯಾ ಮೊಬೈಲ್ ಕಾಂಗ್ರೆಸ್ 2022 (India Mobile Congress-2022) ಸಮಾವೇಶದಲ್ಲಿ ಕಂಪನಿಯು ಈ ಫೋನ್ ಅನ್ನು ಅನಾವರಣ ಮಾಡಿತ್ತು. ಈ ಸ್ಮಾರ್ಟ್​ಫೋನ್ ದೇಶದ ಅತಿ ಅಗ್ಗದ 5ಜಿ ಫೋನ್ ಎನಿಸಿಕೊಂಡಿದೆ. ಪ್ರಸಿದ್ಧ ಇ ಕಾಮರ್ಸ್ ತಾಣ ಅಮೆಜಾನ್‌ ಮೂಲಕ ಸದ್ಯದಲ್ಲೇ ಮಾರಾಟ ಪ್ರಾರಂಭಿಸಲಿದೆ ಎಂದು ಲಾವಾ ಹೇಳಿಕೆ ನೀಡಿದೆ. ಈ ಫೋನಿನ ಬೆಲೆ, ವಿಶೇಷತೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

  • ಲಾವಾ ಬ್ಲೇಜ್‌ 5G ಸ್ಮಾರ್ಟ್‌ಫೋನ್‌ ಭಾರತದಲ್ಲಿ ಕೇವಲ ಒಂದು ಮಾದರಿಯಲ್ಲಷ್ಟೆ ಖರೀದಿಗೆ ಸಿಗಲಿದೆ. ಇದರ 4GB RAM + 128GB ಸ್ಟೋರೇಜ್ ಮಾದರಿಗೆ ಕೇವಲ 9,999ರೂ. ಬೆಲೆಯನ್ನು ನಿಗದಿ ಮಾಡಲಾಗಿದೆ.
  • ನವೆಂಬರ್ 15 ರಂದು ಅಮೆಜಾನ್‌ನಲ್ಲಿ ಮೊದಲ ಸೇಲ್ ಶುರು ಮಾಡಲಿದೆ. ಇದು ಗ್ಲಾಸ್ ಬ್ಲೂ ಮತ್ತು ಗ್ಲಾಸ್ ಗ್ರೀನ್ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಸಿಗಲಿದೆ.
  • ಇದನ್ನೂ ಓದಿ
    Image
    Google Pixel 7: ಹೊಚ್ಚ ಹೊಸ ಗೂಗಲ್‌ ಪಿಕ್ಸಲ್‌ 7 ಸ್ಮಾರ್ಟ್​ಫೋನ್ ಮೇಲೆ ಬಂಪರ್ ಡಿಸ್ಕೌಂಟ್: ಈ ಆಫರ್ ಮಿಸ್ ಮಾಡ್ಬೇಡಿ
    Image
    Tech Tips: ನೀವು WhatsApp Web ಉಪಯೋಗಿಸುತ್ತೀರಾ?: ಹಾಗಿದ್ರೆ ಈ ಟ್ರಿಕ್ ಫಾಲೋ ಮಾಡಿ ನೋಡಿ
    Image
    Vande Bharat Express: ವಂದೇ ಭಾರತ್ ಎಕ್ಸ್​ಪ್ರೆಸ್, ಆನ್​ಲೈನ್​ ಟಿಕೆಟ್ ಬುಕಿಂಗ್ ವಿಧಾನ ಇಲ್ಲಿದೆ ನೋಡಿ
    Image
    Cyber Fraud: ವಿದ್ಯುತ್ ಬಿಲ್ ಬಾಕಿ ಹೆಸರಲ್ಲಿ ನಡೆಯುತ್ತಿದೆ ಬಹುದೊಡ್ಡ ವಂಚನೆ: ನಿಮಗೂ ಕರೆ ಬರಬಹುದು ಎಚ್ಚರ
  • ಈ ಫೋನಿನ ಫೀಚರ್ಸ್ ಬಗ್ಗೆ ನೋಡುವುದಾದರೆ, ಇದು 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.51 ಇಂಚಿನ HD+ IPS ಡಿಸ್‌ಪ್ಲೇಯನ್ನು ಹೊಂದಿದೆ. 90Hz ರಿಫ್ರೆಶ್ ದರಕ್ಕೆ ಬೆಂಬಲಿಸುತ್ತದೆ. ವೈಡ್‌ವೈನ್‌ L1 ಬೆಂಬಲವನ್ನು ಕೂಡ ಪಡೆದುಕೊಂಡಿದೆ.
  • 7nm ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 4 GB RAM ಮತ್ತು 128GB ಇನ್‌ಬಿಲ್ಟ್‌ ಸ್ಟೋರೇಜ್‌ ಅನ್ನು ಹೊಂದಿದೆ.
  • ಲಾವಾ ಬ್ಲೇಜ್‌ 5G ಸ್ಮಾರ್ಟ್‌ಫೋನ್‌ AI- ಬೆಂಬಲಿತ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ.
  • ಇದರ ಜೊತೆಗೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಇದರಲ್ಲಿರುವ ಕ್ಯಾಮೆರಾ ಫೀಚರ್ಸ್‌ಗಳಲ್ಲಿ AI, ಬ್ಯೂಟಿ, ಫಿಲ್ಟರ್‌ಗಳು, GIF, HDR, ಮ್ಯಾಕ್ರೋ, ಮೋಷನ್, ನೈಟ್, ಪನೋರಮಾ, ಪೋರ್ಟ್ರೇಟ್, ಸ್ಲೋ ಮೋಷನ್ ಟೈಮ್‌ಲ್ಯಾಪ್ಸ್ ನಂತಹ ವಿಭಿನ್ನ ಫೀಚರ್ಸ್‌ಗಳನ್ನು ಒಳಗೊಂಡಿದೆ.
  • ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಸಿಂಗಲ್‌ ಚಾರ್ಜ್‌ನಲ್ಲಿ 50 ಗಂಟೆಗಳ ಟಾಕ್‌ಟೈಮ್ ಮತ್ತು 25 ದಿನಗಳ ಸ್ಟ್ಯಾಂಡ್‌ಬೈ ಟೈಂ ನೀಡಲಿದೆ.
  • ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ಬ್ಲೂಟೂತ್ V5.1, GLONASS, 3.5mm ಆಡಿಯೋ ಜ್ಯಾಕ್, Wi-Fi 802.11 b/g/n/ac, GPRS ಮತ್ತು USB ಟೈಪ್-ಸಿ ಪೋರ್ಟ್ ಬೆಂಬಲಿಸುತ್ತದೆ ಎಂದು ಕಂಪನಿ ಹೇಳಿಕೊಂಡಿದೆ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ