Infinix Hot 12: ಕೇವಲ 9,499 ರೂ.ಗೆ ಬಂದಿದೆ ಹೊಸ ಸ್ಮಾರ್ಟ್​ಫೋನ್: ಶವೋಮಿ, ರಿಯಲ್ ಮಿಗೆ ಶುರುವಾಗಿದೆ ನಡುಕ

ಇನ್ಫಿನಿಕ್ಸ್‌ ಕಂಪನಿ ಭಾರತದಲ್ಲಿ ಹೊಸ ಇನ್ಫಿನಿಕ್ಸ್‌ ಹಾಟ್‌ 12 (Infinix Hot 12) ಅನ್ನು ಅನಾವರಣ ಮಾಡಿದೆ. ಈ ಫೋನ್ ದೀರ್ಘ ಸಮಯ ಬಾಳಕೆ ಬರುವ ಬರೋಬ್ಬರಿ 6,000mAh ಬ್ಯಾಟರಿ ಸಾಮರ್ಥ್ಯ ಹೊಂದಿದೆ.

Infinix Hot 12: ಕೇವಲ 9,499 ರೂ.ಗೆ ಬಂದಿದೆ ಹೊಸ ಸ್ಮಾರ್ಟ್​ಫೋನ್: ಶವೋಮಿ, ರಿಯಲ್ ಮಿಗೆ ಶುರುವಾಗಿದೆ ನಡುಕ
Infinix Hot 12
Follow us
TV9 Web
| Updated By: Vinay Bhat

Updated on:Aug 18, 2022 | 12:37 PM

ಸ್ಮಾರ್ಟ್‌ಫೋನ್ (Smartphone) ಮಾರುಕಟ್ಟೆಯಲ್ಲಿ ಇನ್ಫಿನಿಕ್ಸ್‌ (Infinix) ಕಂಪನಿ ಕಡಿಮೆ ಬೆಲೆಗೆ ಆಕರ್ಷಕ ಫೋನ್​ಗಳನ್ನು ಬಿಡುಗಡೆ ಮಾಡುವುದಕ್ಕಾಗಿ ಹೆಸರುವಾಸಿ. ಇದಕ್ಕಾಗಿಯೆ ಮಾರುಕಟ್ಟೆಯಲ್ಲಿ ಈ ಕಂಪನಿ ವಿಶೇಷ ಸ್ಥಾನ ಪಡೆದುಕೊಂಡಿದೆ. ಮುಖ್ಯವಾಗಿ ಇನ್ಫಿನಿಕ್ಸ್ ಹಾಟ್ ಸರಣಿಯ ಫೋನಿಗೆ ಭರ್ಜರಿ ಬೇಡಿಕೆ ಇದೆ. ಇದಕ್ಕಾಗಿಯೆ ಈ ಸರಣಿಯಡಿಯಲ್ಲಿ ಕಂಪನಿ ಆಗಾಗ ಫೋನ್​ಗಳನ್ನು ಬಿಡುಗಡೆ ಮಾಡುತ್ತಿದೆ. ಇದೀಗ ಇನ್ಫಿನಿಕ್ಸ್‌ ಕಂಪನಿ ಭಾರತದಲ್ಲಿ ಹೊಸ ಇನ್ಫಿನಿಕ್ಸ್‌ ಹಾಟ್‌ 12 (Infinix Hot 12) ಅನ್ನು ಅನಾವರಣ ಮಾಡಿದೆ. ಈ ಫೋನ್ ದೀರ್ಘ ಸಮಯ ಬಾಳಕೆ ಬರುವ ಬರೋಬ್ಬರಿ 6,000mAh ಬ್ಯಾಟರಿ ಸಾಮರ್ಥ್ಯ ಹೊಂದಿದೆ. ಬಜೆಟ್ ಬೆಲೆಗೆ ಲಭ್ಯವಿರುವ ಈ ಫೋನಿನ ವಿಶೇಷತೆ ಬಗ್ಗೆ ಇಲ್ಲಿದೆ ನೋಡಿ ಮಾಹಿತಿ.

ಭಾರತದಲ್ಲಿ ಇನ್ಫಿನಿಕ್ಸ್‌ ಹಾಟ್‌ 12 ಸ್ಮಾರ್ಟ್‌ಫೋನ್‌ ಸದ್ಯಕ್ಕೆ ಒಂದು ಮಾದರಿಯಲ್ಲಷ್ಟೆ ರಿಲೀಸ್ ಆಗಿದೆ. ಇದರ 4GB RAM + 64GB ಸ್ಟೋರೇಜ್ ಆವೃತ್ತಿಗೆ ಕೇವಲ 9,499ರೂ. ನಿಗದಿ ಮಾಡಲಾಗಿದೆ. ಇದು ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್‌ ಮೂಲಕ ಇದೇ ಆಗಸ್ಟ್ 23 ರಂದು ಮಧ್ಯಾಹ್ನ 12 ಗಂಟೆಯಿಂದ ಸೇಲ್ ಕಾಣಲಿದೆ. ಈ ಫೋನ್ ಟೆಕ್ನೋ, ಶವೋಂಇ, ರಿಯಲ್ ಮಿ, ಪೋಕೋ ಸಂಸ್ಥೆಯೊಂದಿಗೆ ಪೈಪೋಟಿ ನಡೆಸಲಿದೆ.

ಇನ್ಫಿನಿಕ್ಸ್‌ ಹಾಟ್‌ 12 ಸ್ಮಾರ್ಟ್‌ಫೋನ್‌ 6.82 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. 460 ನಿಟ್ಸ್ ಬ್ರೈಟ್‌ನೆಸ್ ಮತ್ತು 1500:1 ಕಾಂಟ್ರಾಸ್ಟ್ ಅನುಪಾತವನ್ನು ಒಳಗೊಂಡಿರುವ ಈ ಫೋನಿನ ಡಿಸ್ ಪ್ಲೇ ಅದ್ಭುತವಾಗಿದೆ. ಮೀಡಿಯಾಟೆಕ್‌ ಹಿಲಿಯೋ G37 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 XOS 7.6 ಬೆಂಬಲವನ್ನು ಪಡೆದುಕೊಂಡಿದೆ.

ಇದನ್ನೂ ಓದಿ
Image
Vivo V25 Pro: ಫಾಸ್ಟ್ ಚಾರ್ಜರ್, ಬೊಂಬಾಟ್ ಕ್ಯಾಮೆರಾ: ಭಾರತದಲ್ಲಿ ವಿವೋ V25 ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆ
Image
BIG NEWS: 7 ಭಾರತೀಯ ಮತ್ತು 1 ಪಾಕಿಸ್ತಾನ ಮೂಲದ YouTube ಚಾನಲ್​ಗಳನ್ನು ಬ್ಯಾನ್ ಮಾಡಿದ ಕೇಂದ್ರ
Image
Laptops under 40000: ಉತ್ತಮ ಮೌಲ್ಯದ ಮತ್ತು ಕೈಗೆಟುಕುವ ಬೆಲೆಯ ಲ್ಯಾಪ್ ಟಾಪ್​ಗಳು ಇಲ್ಲಿದೆ
Image
WhatsApp: ಸ್ಥಳೀಯ ಅಪ್ಲಿಕೇಶನ್ ಪರಿಚಯಿಸಿದ ವಾಟ್ಸಾಪ್! ಶೀಘ್ರದಲ್ಲೇ ಬರಲಿದೆ MacOS

ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು AI ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.

ಇನ್ಫಿನಿಕ್ಸ್‌ ಹಾಟ್‌ 12 ಸ್ಮಾರ್ಟ್‌ಫೋನ್‌ ಬಲಿಷ್ಠವಾದ 6000mAh ಸಾಮರ್ಥ್ಯದ ಬಿಗ್‌ ಬ್ಯಾಟರಿಯನ್ನು ಹೊಂದಿದೆ. ಇದು 18W ಫಾಸ್ಟ್ ಚಾರ್ಜರ್ ಅನ್ನು ಬೆಂಬಲಿಸಲಿದೆ. ವಿಶೇಷವಾಗಿ ಇದು ಪವರ್ ಮ್ಯಾರಥಾನ್ ಟೆಕ್ ಅನ್ನು ಹೊಂದಿದೆ, ಈ ಮೂಲಕ ಬ್ಯಾಟರಿ ಅವಧಿಯನ್ನು 25% ವರೆಗೆ ವಿಸ್ತರಿಸಬಹುದು. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ ಬೆಂಬಲ ಪಡೆದುಕೊಂಡಿಲ್ಲ. ಬದಲಾಗಿ 4G LTE, Wi-Fi, ಬ್ಲೂಟೂತ್ 5.0, GPS/ A-GPS, ಮತ್ತು USB ಟೈಪ್-C ನೀಡಲಾಗಿದೆ.

Published On - 12:37 pm, Thu, 18 August 22

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ