AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Infinix HOT 11 2022: 8,999 ರೂಪಾಯಿಯ ಇನ್ಫಿನಿಕ್ಸ್ ಹಾಟ್ 11 2022 ಸ್ಮಾರ್ಟ್​​ಫೋನ್ ಹೇಗಿದೆ?: ಖರೀದಿಸಬಹುದೇ?

ಇನ್ಫಿನಿಕ್ಸ್ ಕಂಪನಿ ಇತ್ತೀಚೆಗಷ್ಟೆ ಭಾರತದಲ್ಲಿ ತನ್ನ ಇನ್ಫಿನಿಕ್ಸ್ ಹಾಟ್ 11 2022 (Infinix Hot 11 2022) ಆವೃತ್ತಿಯ ಸ್ಮಾರ್ಟ್​ಫೋನನ್ನು ಅನಾವರಣ ಮಾಡಿತ್ತು. ಇದರಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿರುವ ಈ ಫೋನ್ ಇದೀಗ ಪ್ರಸಿದ್ಧ ಇ ಕಾಮರ್ಸ್​ ತಾಣವಾದ ಫ್ಲಿಪ್​ಕಾರ್ಟ್​ನಲ್ಲಿ ಮೊದಲ ಸೇಲ್ ನಡೆಯುತ್ತಿದೆ.

Infinix HOT 11 2022: 8,999 ರೂಪಾಯಿಯ ಇನ್ಫಿನಿಕ್ಸ್ ಹಾಟ್ 11 2022 ಸ್ಮಾರ್ಟ್​​ಫೋನ್ ಹೇಗಿದೆ?: ಖರೀದಿಸಬಹುದೇ?
Infinix Hot 11 2022
TV9 Web
| Edited By: |

Updated on: Apr 22, 2022 | 6:13 AM

Share

ಸ್ಮಾರ್ಟ್​ಫೋನ್ (Smartphone) ಮಾರುಕಟ್ಟೆಯಲ್ಲಿ ಬಜೆಟ್ ಬೆಲೆಯ ಫೋನುಗಳನ್ನು ಬಿಡುಗಡೆ ಮಾಡುವ ಕಂಪನಿಯ ಒಂದು ವರ್ಗವೇ ಇದೆ. ಇದರಲ್ಲಿ ಮುಂಚೂಣಿಯಲ್ಲಿ ಕಾಣಿಸುವುದು ಇನ್ಫಿನಿಕ್ಸ್‌ (Infinix) ಕಂಪೆನಿ. ಆಕರ್ಷಕ ಫೀಚರ್​ಗಳ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿರುವ ಇನ್ಫಿನಿಕ್ಸ್ ಕಂಪನಿ ಇತ್ತೀಚೆಗಷ್ಟೆ ಭಾರತದಲ್ಲಿ ತನ್ನ ಇನ್ಫಿನಿಕ್ಸ್ ಹಾಟ್ 11 2022 (Infinix Hot 11 2022) ಆವೃತ್ತಿಯ ಸ್ಮಾರ್ಟ್​ಫೋನನ್ನು ಅನಾವರಣ ಮಾಡಿತ್ತು. ಇದರಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್‌ ಇದ್ದು ದೀರ್ಘ ಸಮಯ ಬಾಲಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರುವ ಈ ಫೋನ್ ಇದೀಗ ಖರೀದಿಗೆ ಸಿಗುತ್ತಿದೆ. ಪ್ರಸಿದ್ಧ ಇ ಕಾಮರ್ಸ್​ ತಾಣವಾದ ಫ್ಲಿಪ್​ಕಾರ್ಟ್​ನಲ್ಲಿ ಈ ಫೋನಿನ ಮೊದಲ ಸೇಲ್ ನಡೆಯುತ್ತಿದೆ. ಹಾಗಾದ್ರೆ ಈ ಫೋನಿನ ಬೆಲೆ ಎಷ್ಟು?, ಬಜೆಟ್ ದರದ ಈ ಫೋನನ್ನು ಖರೀದಿಸಬಹದೇ ಎಂಬುದನ್ನು ನೋಡೋಣ.

ಬೆಲೆ ಎಷ್ಟು-ಖರೀದಿಸಬಹುದೇ?:

ಭಾರತದಲ್ಲಿ ಇನ್ಫಿನಿಕ್ಸ್‌ ಹಾಟ್‌ 11 2022 ಸ್ಮಾರ್ಟ್‌ಫೋನ್‌ ಒಂದು ಸ್ಟೋರೆಜ್ ಆಯ್ಕೆಯಲ್ಲಷ್ಟೆ ಬಿಡುಗಡೆ ಆಗಿದೆ. ಇದರ 4GB RAM ಮತ್ತು 64GB ಸ್ಟೋರೇಜ್ ರೂಪಾಂತರಕ್ಕೆ ಕೇವಲ 8,999 ರೂ. ನಿಗದಿ ಮಾಡಲಾಗಿದೆ. ಅರೋರಾ ಗ್ರೀನ್, ಪೋಲಾರ್ ಬ್ಲ್ಯಾಕ್ ಮತ್ತು ಸನ್‌ಸೆಟ್ ಗೋಲ್ಡ್ ಬಣ್ಣಗಳ ಆಯ್ಕೆಯಲ್ಲಿ ಈ ಫೋನನ್ನು ನಿಮ್ಮದಾಗಿಸಬಹುದು. ಇದೊಂದು ಅತ್ಯುತ್ತಮ ಬಜೆಟ್ ಫೋನ್ ಆಗಿದೆ. ಗೇಮಿಂಗ್ ಪ್ರಿಯರಿಗೆ ಇನ್ಫಿನಿಕ್ಸ್‌ ಹಾಟ್‌ 11 ಇಷ್ಟವಾಗದಿರಬಹುದು. ಡೀಸೆಂಟ್ ಲುಕ್​ನ ಕ್ಯಾಮೆರಾ ಇದೆ. ಬ್ಯಾಟರ್ ಪವರ್ ಅತ್ಯುತ್ತಮವಾಗಿದೆ. ಡಿಸ್ ಪ್ಲೇ ಕೂಡ ದೊಡ್ಡದಿದ್ದು ಸಿನಿಮಾ ವೀಕ್ಷೆಣೆಗೆ ಸೂಕ್ತವಾಗಬಹುದು. ಒಟ್ಟಾರೆ ನೀವೊಂದು ಕಡಿಮೆ ಬೆಲೆಗೆ ಇತ್ತಮ ಫೋನ್​​ನಿಂದ ನಿರೀಕ್ಷಿಸಬಹುದಾದ ಎಲ್ಲ ಫೀಚರ್ಸ್​ ಇದರಲ್ಲಿದೆ.

ಏನು ವಿಶೇಷತೆ?:

ಇನ್ಫಿನಿಕ್ಸ್‌ ಹಾಟ್‌ 11 2022 ಸ್ಮಾರ್ಟ್‌ಫೋನ್‌ 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದುಕೊಂಡಿದೆ. ಆಕ್ಟಾ-ಕೋರ್ ಯೂನಿಸೋಕ್‌ T610 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 11 ನಲ್ಲಿ XOS 7.6 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಒಳಗೊಂಡಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ಸಿಗಲಿದೆ.

ಇನ್ನ ಈ ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ f/2.0 ಲೆನ್ಸ್‌ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 10W ವೇಗದ ಚಾರ್ಜಿಂಗ್ ಬೆಂಬಲಿಸುತ್ತದೆ. ಹಾಗೆಯೆ ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈಫೈ, ಬ್ಲೂಟೂತ್‌ v5.1, GPS ಮತ್ತು ಯುಎಸ್‌ಬಿ ಟೈಪ್ C ಪೋರ್ಟ್ ಅನ್ನು ನೀಡಲಾಗಿದ್ದು ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅಳವಡಿಸಲಾಗಿದೆ.

Oppo F21 Pro 5G: ಒಪ್ಪೋ F21 ಪ್ರೊ 5G ಸ್ಮಾರ್ಟ್‌ಫೋನ್‌ ಮಾರಾಟ ಆರಂಭ: ಈ ಫೋನ್​ನಲ್ಲಿ ಏನೇನಿದೆ ನೋಡಿ

Realme Q5: ಬಜೆಟ್ ಬೆಲೆಗೆ ಬಲಿಷ್ಠ ಸ್ಮಾರ್ಟ್​​ಫೋನ್: ರಿಯಲ್ ಮಿಯಿಂದ ಹೊಸ Q5 ಸರಣಿ ಬಿಡುಗಡೆ

Follow Us
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ