ಸ್ಮಾರ್ಟ್‌ಫೋನ್ (Smartphone) ಮಾರುಕಟ್ಟೆಯಲ್ಲಿ ಬಜೆಟ್ ಬೆಲೆಯ ಫೋನುಗಳನ್ನು ಬಿಡುಗಡೆ ಮಾಡುವ ಕಂಪನಿಯ ಒಂದು ವರ್ಗವೇ ಇದೆ. ಇದರಲ್ಲಿ ಮುಂಚೂಣಿಯಲ್ಲಿ ಕಾಣಿಸುವುದು ಇನ್ಫಿನಿಕ್ಸ್ (Infinix) ಕಂಪೆನಿ. ಆಕರ್ಷಕ ಫೀಚರ್ಗಳ ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿರುವ ಇನ್ಫಿನಿಕ್ಸ್ ಕಂಪನಿ ಇದೀಗ ಭಾರತದಲ್ಲಿ ಇನ್ಫಿನಿಕ್ಸ್ ಹಾಟ್ 11 2022 (Infinix Hot 11) ಆವೃತ್ತಿಯ ಸ್ಮಾರ್ಟ್ಫೋನನ್ನು ಅನಾವರಣ ಮಾಡಿದೆ. ಇದರಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಇದ್ದು ದೀರ್ಘ ಸಮಯ ಬಾಲಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದೆ. ಹಾಗಾದ್ರೆ ಈ ಫೋನಿನ ಬೆಲೆ ಎಷ್ಟು?, ಏನು ವಿಶೇಷತೆ ನೀಡಲಾಗಿದೆ ಎಂಬುದನ್ನು ನೋಡೊಣ.
ಬೆಲೆ ಎಷ್ಟು?:
ಭಾರತದಲ್ಲಿ ಇನ್ಫಿನಿಕ್ಸ್ ಹಾಟ್ 11 2022 ಸ್ಮಾರ್ಟ್‌ಫೋನ್ ಒಂದು ಸ್ಟೋರೆಜ್ ಆಯ್ಕೆಯಲ್ಲಷ್ಟೆ ಬಿಡುಗಡೆ ಆಗಿದೆ. ಇದರ 4GB RAM ಮತ್ತು 64GB ಸ್ಟೋರೇಜ್ ರೂಪಾಂತರಕ್ಕೆ ಕೇವಲ 8,999 ರೂ. ನಿಗದಿ ಮಾಡಲಾಗಿದೆ. ಅರೋರಾ ಗ್ರೀನ್, ಪೋಲಾರ್ ಬ್ಲ್ಯಾಕ್ ಮತ್ತು ಸನ್‌ಸೆಟ್ ಗೋಲ್ಡ್ ಬಣ್ಣಗಳ ಆಯ್ಕೆಯಲ್ಲಿ ಈ ಫೋನನ್ನು ನಿಮ್ಮದಾಗಿಸಬಹುದು. ಇದೇ ಏಪ್ರಿಲ್ 22 ರಿಂದ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್ ಮೂಲಕ ಖರೀದಿಗೆ ಸಿಗಲಿದೆ.
ಏನು ವಿಶೇಷತೆ?:
ಇನ್ಫಿನಿಕ್ಸ್ ಹಾಟ್ 11 2022 ಸ್ಮಾರ್ಟ್‌ಫೋನ್ 1,080×2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದುಕೊಂಡಿದೆ. ಆಕ್ಟಾ-ಕೋರ್ ಯೂನಿಸೋಕ್ T610 SoC ಪ್ರೊಸೆಸರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ XOS 7.6 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಒಳಗೊಂಡಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ಸಿಗಲಿದೆ.
ಇನ್ನ ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ f/2.0 ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 10W ವೇಗದ ಚಾರ್ಜಿಂಗ್ ಬೆಂಬಲಿಸುತ್ತದೆ. ಹಾಗೆಯೆ ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈಫೈ, ಬ್ಲೂಟೂತ್ v5.1, GPS ಮತ್ತು ಯುಎಸ್‌ಬಿ ಟೈಪ್ C ಪೋರ್ಟ್ ಅನ್ನು ನೀಡಲಾಗಿದ್ದು ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅಳವಡಿಸಲಾಗಿದೆ.
Oppo F21 Pro: ಭರ್ಜರಿ ಫೀಚರ್ಸ್ನ ಬಹುನಿರೀಕ್ಷಿತ ಒಪ್ಪೋ F21 ಪ್ರೊ ಸ್ಮಾರ್ಟ್‌ಫೋನ್ ಮಾರಾಟ ಆರಂಭ
WhatsApp: ವಾಟ್ಸ್ಆ್ಯಪ್ನಲ್ಲಿ ಅಚ್ಚರಿಯ ಫೀಚರ್: ಒಮ್ಮೆಲೆ 32 ಜನರಿಗೆ ಕರೆ ಮಾಡುವ ಅವಕಾಶ