Infinix Hot 11: ಭಾರತದಲ್ಲಿ ಕೇವಲ 8,999 ರೂ. ಗೆ ಬಿಡುಗಡೆ ಆಯಿತು ಆಕರ್ಷಕ ಫೀಚರ್​ಗಳ ಸ್ಮಾರ್ಟ್​ಫೋನ್

ಇನ್ಫಿನಿಕ್ಸ್ ಹಾಟ್ 11 ಮತ್ತು ಇನ್ಫಿನಿಕ್ಸ್ ಹಾಟ್ 11s ಫೋನುಗಳು ಸದ್ಯಕ್ಕೆ ಒಂದು ಆಯ್ಕೆಯಲ್ಲಿ ಮಾತ್ರ ಖರೀದಿಗೆ ಲಭ್ಯವಾಗುತ್ತಿದೆ. ಈ ಪೈಕಿ ಹಾಟ್ 11 ಸ್ಮಾರ್ಟ್‌ಫೋನಿನ ಬೆಲೆ ಕೇವಲ 8,999 ರೂ.

Infinix Hot 11: ಭಾರತದಲ್ಲಿ ಕೇವಲ 8,999 ರೂ. ಗೆ ಬಿಡುಗಡೆ ಆಯಿತು ಆಕರ್ಷಕ ಫೀಚರ್​ಗಳ ಸ್ಮಾರ್ಟ್​ಫೋನ್
Infinix Hot 11 and Infinix Hot 11S
Follow us
TV9 Web
| Updated By: Vinay Bhat

Updated on: Sep 18, 2021 | 3:34 PM

ಸ್ಮಾರ್ಟ್​ಫೋನ್ (Smartphone) ಮಾರುಕಟ್ಟೆಯಲ್ಲಿ ಬಜೆಟ್ ಬೆಲೆಯ ಫೋನುಗಳನ್ನು ಬಿಡುಗಡೆ ಮಾಡುವ ಕಂಪೆನಿಯ ಒಂದು ವರ್ಗವೇ ಇದೆ. ಇದರಲ್ಲಿ ಮುಂಚೂಣಿಯಲ್ಲಿ ಕಾಣಿಸುವುದು ಇನ್ಫಿನಿಕ್ಸ್‌ (Infinix) ಕಂಪೆನಿ. ಆಕರ್ಷಕ ಫೀಚರ್​ಗಳ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿರುವ ಇನ್ಫಿನಿಕ್ಸ್ ಕಂಪನಿ ಇದೀಗ ಭಾರತದಲ್ಲಿ ಇನ್ಫಿನಿಕ್ಸ್ ಹಾಟ್ 11 (Infinix Hot 11) ಮತ್ತು ಇನ್ಫಿನಿಕ್ಸ್ ಹಾಟ್ 11ಎಸ್ (Infinix Hot 11S) ಎಂಬ ಹೊಸ ಸ್ಮಾರ್ಟ್​ಫೋನನ್ನು ಅನಾವರಣ ಮಾಡಿದೆ. 50 ಮೆಗಾಪಿಕ್ಸೆಲ್ ಕ್ಯಾಮೆರಾ, ಬಂಪರ್ ಬ್ಯಾಟರಿ ಸೇರಿದಂತೆ ಅತ್ಯುತ್ತಮ ಫೀಚರ್​ಗಳು ಈ ಸ್ಮಾರ್ಟ್​ಫೋನ್​ನಲ್ಲಿ ಅಳವಡಿಸಲಾಗಿದೆ. ಹಾಗಾದ್ರೆ ಈ ಎರಡೂ ಫೋನಿನ ವಿಶೇಷತೆ ಏನು, ಬೆಲೆ ಎಷ್ಟು ಎಂಬುದನ್ನು ನೋಡೋಣ.

ಎರಡೂ ಫೋನುಗಳು ಸದ್ಯಕ್ಕೆ ಒಂದು ಆಯ್ಕೆಯಲ್ಲಿ ಮಾತ್ರ ಖರೀದಿಗೆ ಲಭ್ಯವಾಗುತ್ತಿದೆ. ಈ ಪೈಕಿ ಇನ್ಫಿನಿಕ್ಸ್ ಹಾಟ್ 11 ಸ್ಮಾರ್ಟ್‌ಫೋನಿನ 4GB RAM ಮತ್ತು 64GB ಸ್ಟೋರೆಜ್ ಸಾಮರ್ಥ್ಯಕ್ಕೆ ಕೇವಲ 8,999 ರೂ. ನಿಗದಿ ಮಾಡಲಾಗಿದೆ. ಅಂತೆಯೆ ಇನ್ಫಿನಿಕ್ಸ್ ಹಾಟ್ 11S ಫೋನಿನ 4GB RAM ಮತ್ತು 64GB ಸ್ಟೋರೆಜ್ ರೂಪಾಂತರವು 10,999 ರೂ. ಮಾರಾಟ ಆಗಲಿದೆ.

ಈ ಎರಡೂ ಸ್ಮಾರ್ಟ್ ಫೋನ್​ಗಳು ಪ್ರಸಿದ್ಧ ಇ ಕಾಆಮರ್ಸ್ ತಾಣವಾದ ಫ್ಲಿಪ್ ಕಾರ್ಟ್ ಮೂಲಕ ಖರೀದಿಗೆ ಲಭ್ಯವಾಗಲಿದೆ. ಇನ್ಫಿನಿಕ್ಸ್ ಹಾಟ್ 11 ಎಸ್ ಸೆಪ್ಟೆಂಬರ್ 21 ರಂದು ಫಸ್ಟ್‌ ಸೇಲ್‌ ಆರಂಭಿಸಲಿದೆ. ಆದರೆ ಇನ್ಫಿನಿಕ್ಸ್ ಹಾಟ್ 11 ರ ಮಾರಾಟ ದಿನಾಂಕ ಇನ್ನು ನಿಗದಿಯಾಗಿಲ್ಲ.

ಇನ್‌ಫಿನಿಕ್ಸ್ ಹಾಟ್ 11 ಸ್ಮಾರ್ಟ್‌ಫೋನ್‌ 1,080×2,408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6-ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇದಕ್ಕೆ ಮೀಡಿಯಾಟೆಕ್‌ ಹಿಲಿಯೋ G70 SoC ಪ್ರೊಸೆಸರ್‌ ಅಳವಡಿಸಲಾಗಿದ್ದು,, ಆಂಡ್ರಾಯ್ಡ್ 11 ಅನ್ನು ಎಕ್ಸ್‌ಒಎಸ್ 7.6 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಇನ್ನು ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ ಹಾಗೂ ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದ್ದು, ಕ್ವಾಡ್-ಎಲ್ಇಡಿ ಫ್ಲ್ಯಾಷ್‌ ಹೊಂದಿವೆ. ಅಲ್ಲದೆ 8 ಮೆಗಾಪಿಕ್ಸೆಲ್ AI ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 5,200mAh ಬ್ಯಾಟರಿ ಹೊಂದಿದ್ದು, 10W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ಇತ್ತ ಇನ್ಫಿನಿಕ್ಸ್ ಹಾಟ್ 11S ಸ್ಮಾರ್ಟ್‌ಫೋನ್‌ 6.78-ಇಂಚಿನ ಫುಲ್-ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾಟೆಕ್‌ ಹಿಲಿಯೋ G88 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ XOS 7.6 ಸ್ಕಿನ್ ಮೂಲಕ ಕಾರ್ಯನಿರ್ವಹಿಸಲಿದೆ.

ಈ ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2-ಮೆಗಾಪಿಕ್ಸೆಲ್ ಸೆನ್ಸರ್ ಮತ್ತು AI ಕ್ಯಾಮೆರಾ ಹೊಂದಿದೆ. ಇದು 8 ಮೆಗಾಪಿಕ್ಸೆಲ್ ಎಐ ಸೆಲ್ಫಿ ಕ್ಯಾಮೆರಾ ಹೊಂದಿದೆ. ಈ ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಬೆಂಬಲ ನೀಡಲಾಗಿದೆ.

Flipkart: ಕುತೂಹಲ ಸೃಷ್ಟಿಸಿದ ಫ್ಲಿಪ್‌ಕಾರ್ಟ್​ನ ಬಿಗ್ ಬಿಲಿಯನ್ ಡೇಸ್: ಈ ಬಾರಿ ಬಂಪರ್ ಡಿಸ್ಕೌಂಟ್ ಗ್ಯಾರಂಟಿ

WhatsApp: ಐಒಎಸ್‌ ಬಳಕೆದಾರರಿಗೆ ಗುಡ್‌ ನ್ಯೂಸ್‌: ವಾಟ್ಸ್​ಆ್ಯಪ್ ಪರಿಚಯಿಸಿದೆ ಹೊಸ ಫೀಚರ್

(Infinix Hot 11 and Infinix Hot 11S With 50MP Camera Launched in India Sale via Flipkart)

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು