Infinix Hot 12 Pro: 50MP ಕ್ಯಾಮೆರಾ, 5000mAh ಬ್ಯಾಟರಿ: ಈ ಫೋನಿನ ಬೆಲೆ ಕೇವಲ 10,999 ರೂ.
ಇನ್ಫಿನಿಕ್ಸ್ ಇತ್ತೀಚೆಗಷ್ಟೆ ಕಂಪನಿ ಭಾರತದಲ್ಲಿ ಇನ್ಫಿನಿಕ್ಸ್ ಹಾಟ್ 12 ಪ್ರೊ (Infinix Hot 12 Pro) ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿತ್ತು. ಈ ಫೋನ್ ಈಗ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್ (Flipkart) ಮೂಲಕ ಮಾರಾಟ ಪ್ರಾರಂಭಿಸಿದೆ.
ಸ್ಮಾರ್ಟ್‌ಫೋನ್ ಕ್ಷೇತ್ರದಲ್ಲಿ ಇನ್ಫಿನಿಕ್ಸ್ (Infinix) ಕಂಪನಿ ಕಡಿಮೆ ಬೆಲೆಗೆ ಆಕರ್ಷಕ ಫೋನ್ಗಳನ್ನು ಬಿಡುಗಡೆ ಮಾಡುವುದಕ್ಕಾಗಿ ಹೆಸರುವಾಸಿ. ಇದಕ್ಕಾಗಿಯೆ ಮಾರುಕಟ್ಟೆಯಲ್ಲಿ ಈ ಕಂಪನಿ ವಿಶೇಷ ಸ್ಥಾನ ಪಡೆದುಕೊಂಡಿದೆ. ಮುಖ್ಯವಾಗಿ ಇನ್ಫಿನಿಕ್ಸ್ ಹಾಟ್ ಸರಣಿಯ ಫೋನಿಗೆ ಭರ್ಜರಿ ಬೇಡಿಕೆ ಇದೆ. ಇದಕ್ಕಾಗಿಯೆ ಇತ್ತೀಚೆಗಷ್ಟೆ ಕಂಪನಿ ಭಾರತದಲ್ಲಿ ಇನ್ಫಿನಿಕ್ಸ್ ಹಾಟ್ 12 ಪ್ರೊ (Infinix Hot 12 Pro) ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿತ್ತು. ಈ ಫೋನ್ ಈಗ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್ (Flipkart) ಮೂಲಕ ಮಾರಾಟ ಪ್ರಾರಂಭಿಸಿದೆ. ಇದುಕೂಡ ಒಂದು ಬಜೆಟ್ ಬೆಲೆಯ ಫೋನಾಗಿದ್ದು, 50 ಮೆಗಾ ಪಿಕ್ಸಲ್ ಕ್ಯಾಮೆರಾ 5,000mAh ಸಾಮರ್ಥ್ಯದ ಬ್ಯಾಟರಿ ಸೇರಿದಂತೆ ಆಕರ್ಷಕ ಫೀಚರ್ಗಳನ್ನು ನೀಡಲಾಗಿದೆ.
- ಇನ್ಫಿನಿಕ್ಸ್ ಹಾಟ್ 12 ಪ್ರೊ ಸ್ಮಾರ್ಟ್‌ಫೋನ್ ಭಾರತದಲ್ಲಿ ಒಟ್ಟು ಎರಡು ಆಯ್ಕೆಯಲ್ಲಿ ಖರೀದಿಗೆ ಸಿಗುತ್ತಿದೆ. ಇದರ6GB RAM + 64GB ಸ್ಟೋರೇಜ್ ಆಯ್ಕೆಗೆ 10,999 ರೂ. ಮತ್ತು 8GB RAM + 128GB ಸ್ಟೋರೇಜ್ ಮಾಡೆಲ್ ಬೆಲೆ 12,999 ರೂ. ನಿಗದಿ ಮಾಡಲಾಗಿದೆ.
- ಮೊದಲ ಸೇಲ್ ಪ್ರಯುಕ್ತ ಈ ಸ್ಮಾರ್ಟ್‌ಫೋನ್ ಮೇಲೆ ಡಿಸ್ಕೌಂಟ್ ಘೋಷಿಸಲಾಗಿದ್ದು, 1,000ರೂ, ರಿಯಾಯಿತಿಯನ್ನು ಪಡೆಯಬಹುದು. ಆದರೆ ಈ ಆಫರ್ ಎಷ್ಟು ದಿನಗಳ ಕಾಲ ಇರಲಿದೆ ಎಂಬುದರ ಬಗ್ಗೆ ಮಾಹಿತಿಯಿಲ್ಲ.
- ಇನ್ಫಿನಿಕ್ಸ್ ಹಾಟ್ 12 ಪ್ರೊ ಸ್ಮಾರ್ಟ್‌ಫೋನ್ 6.6 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು 1,612×720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದೆ. 90Hz ರಿಫ್ರೆಶ್ ರೇಟ್ ನೀಡಲಾಗಿದೆ.
- ಬೆಲೆಗೆ ತಕ್ಕಂತೆ ಆಕ್ಟಾ ಕೋರ್ 12nm ಯೂನಿಸೋಕ್ T616 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ಆಧಾರಿತ XOS 10.6 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ.
- ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು ಇದರಲ್ಲಿರುವ ಪ್ರೈಮೆರಿ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಜೊತೆಗೆ ಡ್ಯುಯಲ್ LED ಫ್ಲ್ಯಾಷ್ ನೀಡಲಾಗಿದೆ. ಡ್ಯುಯಲ್–ಎಲ್ಇಡಿ ಫ್ಲ್ಯಾಷ್‌ನೊಂದಿಗೆ AI ಬೆಂಬಲಿತ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಇರುವುದು ವಿಶೇಷ.
- ಇನ್ಫಿನಿಕ್ಸ್ ಹಾಟ್ 12 ಪ್ರೊ ಸ್ಮಾರ್ಟ್‌ಫೋನ್ ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇದು 45 ದಿನಗಳವರೆಗೆ ಸ್ಟ್ಯಾಂಡ್‌ಬೈ ಟೈಂ ಅನ್ನು ನೀಡಲಿದೆ ಎಂದು ಇನ್ಫಿನಿಕ್ಸ್ ಕಂಪೆನಿ ಹೇಳಿಕೊಂಡಿದೆ.
- ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, WCDMA, GSM, Wi-Fi 802.11 a/b/g/n, ಬ್ಲೂಟೂತ್ v5, ಮತ್ತು GPS/ A-GPS ಬೆಂಬಲಿಸಲಿದೆ. ಬಯೋಮೆಟ್ರಿಕ್ ದೃಢೀಕರಣಕ್ಕಾಗಿ ಫಿಂಗರ್‌ಪ್ರಿಂಟ್ ಸೆನ್ಸಾರ್ ಅಳವಡಿಸಲಾಗಿದೆ.
ಇದನ್ನೂ ಓದಿ