Kannada News Technology Infinix Hot 12 Pro now available for purchase in india via Flipkart check offer and specs
Infinix Hot 12 Pro: 50MP ಕ್ಯಾಮೆರಾ, 5000mAh ಬ್ಯಾಟರಿ: ಈ ಫೋನಿನ ಬೆಲೆ ಕೇವಲ 10,999 ರೂ.
ಇನ್ಫಿನಿಕ್ಸ್ ಇತ್ತೀಚೆಗಷ್ಟೆ ಕಂಪನಿ ಭಾರತದಲ್ಲಿ ಇನ್ಫಿನಿಕ್ಸ್ ಹಾಟ್ 12 ಪ್ರೊ (Infinix Hot 12 Pro) ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿತ್ತು. ಈ ಫೋನ್ ಈಗ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್ (Flipkart) ಮೂಲಕ ಮಾರಾಟ ಪ್ರಾರಂಭಿಸಿದೆ.
ಸ್ಮಾರ್ಟ್‌ಫೋನ್ ಕ್ಷೇತ್ರದಲ್ಲಿ ಇನ್ಫಿನಿಕ್ಸ್ (Infinix) ಕಂಪನಿ ಕಡಿಮೆ ಬೆಲೆಗೆ ಆಕರ್ಷಕ ಫೋನ್ಗಳನ್ನು ಬಿಡುಗಡೆ ಮಾಡುವುದಕ್ಕಾಗಿ ಹೆಸರುವಾಸಿ. ಇದಕ್ಕಾಗಿಯೆ ಮಾರುಕಟ್ಟೆಯಲ್ಲಿ ಈ ಕಂಪನಿ ವಿಶೇಷ ಸ್ಥಾನ ಪಡೆದುಕೊಂಡಿದೆ. ಮುಖ್ಯವಾಗಿ ಇನ್ಫಿನಿಕ್ಸ್ ಹಾಟ್ ಸರಣಿಯ ಫೋನಿಗೆ ಭರ್ಜರಿ ಬೇಡಿಕೆ ಇದೆ. ಇದಕ್ಕಾಗಿಯೆ ಇತ್ತೀಚೆಗಷ್ಟೆ ಕಂಪನಿ ಭಾರತದಲ್ಲಿ ಇನ್ಫಿನಿಕ್ಸ್ಹಾಟ್ 12 ಪ್ರೊ (Infinix Hot 12 Pro) ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿತ್ತು. ಈ ಫೋನ್ ಈಗ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್ (Flipkart) ಮೂಲಕ ಮಾರಾಟ ಪ್ರಾರಂಭಿಸಿದೆ. ಇದುಕೂಡ ಒಂದು ಬಜೆಟ್ ಬೆಲೆಯ ಫೋನಾಗಿದ್ದು, 50 ಮೆಗಾ ಪಿಕ್ಸಲ್ ಕ್ಯಾಮೆರಾ 5,000mAh ಸಾಮರ್ಥ್ಯದ ಬ್ಯಾಟರಿ ಸೇರಿದಂತೆ ಆಕರ್ಷಕ ಫೀಚರ್ಗಳನ್ನು ನೀಡಲಾಗಿದೆ.
ಇನ್ಫಿನಿಕ್ಸ್ ಹಾಟ್ 12 ಪ್ರೊ ಸ್ಮಾರ್ಟ್‌ಫೋನ್ ಭಾರತದಲ್ಲಿ ಒಟ್ಟು ಎರಡು ಆಯ್ಕೆಯಲ್ಲಿ ಖರೀದಿಗೆ ಸಿಗುತ್ತಿದೆ. ಇದರ6GB RAM + 64GB ಸ್ಟೋರೇಜ್ ಆಯ್ಕೆಗೆ 10,999 ರೂ. ಮತ್ತು 8GB RAM + 128GB ಸ್ಟೋರೇಜ್ ಮಾಡೆಲ್ ಬೆಲೆ 12,999 ರೂ. ನಿಗದಿ ಮಾಡಲಾಗಿದೆ.
ಮೊದಲ ಸೇಲ್ ಪ್ರಯುಕ್ತ ಈ ಸ್ಮಾರ್ಟ್‌ಫೋನ್ ಮೇಲೆ ಡಿಸ್ಕೌಂಟ್ ಘೋಷಿಸಲಾಗಿದ್ದು, 1,000ರೂ, ರಿಯಾಯಿತಿಯನ್ನು ಪಡೆಯಬಹುದು. ಆದರೆ ಈ ಆಫರ್ ಎಷ್ಟು ದಿನಗಳ ಕಾಲ ಇರಲಿದೆ ಎಂಬುದರ ಬಗ್ಗೆ ಮಾಹಿತಿಯಿಲ್ಲ.
ಇನ್ಫಿನಿಕ್ಸ್ ಹಾಟ್ 12 ಪ್ರೊ ಸ್ಮಾರ್ಟ್‌ಫೋನ್ 6.6 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು 1,612×720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದೆ. 90Hz ರಿಫ್ರೆಶ್ ರೇಟ್ ನೀಡಲಾಗಿದೆ.
ಬೆಲೆಗೆ ತಕ್ಕಂತೆ ಆಕ್ಟಾ ಕೋರ್ 12nm ಯೂನಿಸೋಕ್ T616 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ಆಧಾರಿತ XOS 10.6 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ.
Nokia 2660 Flip: ನೋಕಿಯಾ 2660 ಫ್ಲಿಪ್ ಬಿಡುಗಡೆ: ಡಿಸೈನ್ನಿಂದಲೇ ಗಮನ ಸೆಳೆಯುತ್ತಿದೆ ಈ ಫೋನ್
Raksha Bandhan Gift Ideas: ನಿಮ್ಮ ಸಹೋದರ-ಸಹೋದರಿಯರಿಗೆ ನೀಡಲು ಅತ್ಯುತ್ತಮ ಉಡುಗೊರೆ ಇಲ್ಲಿದೆ ನೋಡಿ
Fake App: ಪ್ಲೇ ಸ್ಟೋರ್ನಲ್ಲಿ ಹಣ ಕದಿಯುವ ಅಪಾಯಕಾರಿ ಆ್ಯಪ್ ಪತ್ತೆ: ಇನ್ಸ್ಟಾಲ್ ಮಾಡಿದ್ರೆ ತಕ್ಷಣ ಡಿಲೀಟ್ ಮಾಡಿ
ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು ಇದರಲ್ಲಿರುವ ಪ್ರೈಮೆರಿ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಜೊತೆಗೆ ಡ್ಯುಯಲ್ LED ಫ್ಲ್ಯಾಷ್ ನೀಡಲಾಗಿದೆ. ಡ್ಯುಯಲ್–ಎಲ್ಇಡಿ ಫ್ಲ್ಯಾಷ್‌ನೊಂದಿಗೆ AI ಬೆಂಬಲಿತ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಇರುವುದು ವಿಶೇಷ.
ಇನ್ಫಿನಿಕ್ಸ್ ಹಾಟ್ 12 ಪ್ರೊ ಸ್ಮಾರ್ಟ್‌ಫೋನ್ ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇದು 45 ದಿನಗಳವರೆಗೆ ಸ್ಟ್ಯಾಂಡ್‌ಬೈ ಟೈಂ ಅನ್ನು ನೀಡಲಿದೆ ಎಂದು ಇನ್ಫಿನಿಕ್ಸ್ ಕಂಪೆನಿ ಹೇಳಿಕೊಂಡಿದೆ.