Infinix Note 11: 33W ವೇಗದ ಚಾರ್ಜಿಂಗ್, 50MP ಕ್ಯಾಮೆರಾ: ಮೊದಲ ಸೇಲ್ ಕಾಣುತ್ತಿದೆ ಇನ್ಫಿನಿಕ್ಸ್ ನೋಟ್ 11
ಇನ್ಫಿನಿಕ್ಸ್ ನೋಟ್ 11 ಸ್ಮಾರ್ಟ್‌ಫೋನ್ ಬೆಲೆ 11,999ರೂ. ಆಗಿದೆ. ಇದು 5,000mAh ಸಾಮರ್ಥ್ಯದ ಬಲಿಷ್ಠ ಬ್ಯಾಟರಿಯನ್ನು ಹೊಂದಿದ್ದು, 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.
ಸ್ಮಾರ್ಟ್‌ಫೋನ್ (Smartphone) ಮಾರುಕಟ್ಟೆಯಲ್ಲಿ ಹೆಚ್ಚು ಬಜೆಟ್ ಬೆಲೆಯ ಮೊಬೈಲ್ಗಳಿಗೆ (Budget Smartphone) ಹೆಸರುವಾಸಿಯಾಗಿರುವ ಪ್ರಸಿದ್ಧ ಇನ್ಫಿನಿಕ್ಸ್ (Infinix) ಕಂಪನಿ ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಈ ಪೈಕಿ ಕಳೆದ ವಾರವಷ್ಟೆ ಕಂಪನಿ ಹೊಸ ಇನ್ಫಿನಿಕ್ಸ್ ನೋಟ್ 11 (Infinix Note 11) ಮತ್ತು ಇನ್ಫಿನಿಕ್ಸ್ ನೋಟ್ 11ಎಸ್ (Infinix Note 11S) ಸ್ಮಾರ್ಟ್ಫೋನುಗಳನ್ನು ಭಾರತದಲ್ಲಿ ಬಿಡುಗಡೆ ಮಾಡಿತ್ತು. ಈ ಪೈಕಿ ಸದ್ಯ ಇನ್ಫಿನಿಕ್ಸ್ ನೋಟ್ 11 ಸ್ಮಾರ್ಟ್‌ಫೋನ್ ಇದೀಗ ಖರೀದಿಗೆ ಸಿಗುತ್ತಿದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್ಕಾರ್ಟ್ನಲ್ಲಿ (Flipkart) ಇನ್ಫಿನಿಕ್ಸ್ ನೋಟ್ 11 ಸೇಲ್ ಕಾಣುತ್ತಿದೆ. ಈ ಸ್ಮಾರ್ಟ್‌ಫೋನ್‌ಗಳು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿವೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಪಡೆದುಕೊಂಡಿವೆ.
ಇನ್ಫಿನಿಕ್ಸ್ ನೋಟ್ 11 ಸ್ಮಾರ್ಟ್‌ಫೋನ್ 1,080×2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ ಫುಲ್ HD+ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 180Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಪಡೆದಿದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್ ಹಿಲಿಯೋ G88 SoC ಪ್ರೊಸೆಸರ್ ಬಲವನ್ನು ಪಡೆದಿದ್ದು, ಕಂಪನಿಯ XOS 10 ಕಸ್ಟಮ್ ಸ್ಕಿನ್‌ನೊಂದಿಗೆ ಆಂಡ್ರಾಯ್ಡ್ 11 ನಲ್ಲಿ ಕಾರ್ಯನಿರ್ವಹಿಸುತ್ತದೆ.
ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ f/1.6 ಲೆನ್ಸ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸರ್ ಮತ್ತು AI ಲೆನ್ಸ್‌ನೊಂದಿಗೆ ಬರುತ್ತದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದರಲ್ಲಿ ಡ್ಯುಯಲ್-LED ಫ್ಲ್ಯಾಷ್‌ನೊಂದಿಗೆ ಅಳವಡಿಸಲಾಗಿದೆ.
5,000mAh ಸಾಮರ್ಥ್ಯದ ಬಲಿಷ್ಠ ಬ್ಯಾಟರಿಯನ್ನು ಹೊಂದಿದ್ದು, 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್, 3.5 ಎಂಎಂ ಹೆಡ್ಫೋನ್ ಜ್ಯಾಕ್ ಮತ್ತು ಯುಎಸ್ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಈ ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಕೂಡ ಪಡೆದಿವೆ.
ಭಾರತದಲ್ಲಿ ಇನ್ಫಿನಿಕ್ಸ್ ನೋಟ್ 11 ಸ್ಮಾರ್ಟ್‌ಫೋನ್ ಬೆಲೆ 11,999ರೂ. ಆಗಿದೆ. ಇದು ಸೆಲೆಸ್ಟಿಯಲ್ ಸ್ನೋ, ಗ್ಲೇಸಿಯರ್ ಗ್ರೀನ್ ಮತ್ತು ಗ್ರ್ಯಾಫೈಟ್ ಬ್ಲ್ಯಾಕ್ ಬಣ್ಣಗಳಲ್ಲಿ ಲಭ್ಯವಿದೆ. ಈ ಫೋನ್ ಇಂದಿನಿಂದ (ಡಿಸೆಂಬರ್ 23) ಫ್ಲಿಪ್‌ಕಾರ್ಟ್ ಮೂಲಕ ದೇಶದಲ್ಲಿ ಖರೀದಿಗೆ ಸಿಗುತ್ತಿದೆ.
(Infinix Note 11 50MP Camera 5000mAh battery is all set to go on its first sale today via Flipkart)