ಸ್ಮಾರ್ಟ್‌ಫೋನ್ (Smartphone) ಮಾರುಕಟ್ಟೆಯಲ್ಲಿ ಹೆಚ್ಚು ಬಜೆಟ್ ಬೆಲೆಯ ಮೊಬೈಲ್ಗಳಿಗೆ (Budget Smartphone) ಹೆಸರುವಾಸಿಯಾಗಿರುವ ಪ್ರಸಿದ್ಧ ಇನ್ಫಿನಿಕ್ಸ್ (Infinix) ಕಂಪನಿ ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಈ ಪೈಕಿ ಕಳೆದ ವಾರವಷ್ಟೆ ಕಂಪನಿ ಹೊಸ ಇನ್ಫಿನಿಕ್ಸ್ ನೋಟ್ 11 (Infinix Note 11) ಮತ್ತು ಇನ್ಫಿನಿಕ್ಸ್ ನೋಟ್ 11ಎಸ್ (Infinix Note 11S) ಸ್ಮಾರ್ಟ್ಫೋನುಗಳನ್ನು ಭಾರತದಲ್ಲಿ ಬಿಡುಗಡೆ ಮಾಡಿತ್ತು. ಈ ಪೈಕಿ ಸದ್ಯ ಇನ್ಫಿನಿಕ್ಸ್ ನೋಟ್ 11 ಸ್ಮಾರ್ಟ್‌ಫೋನ್ ಇದೀಗ ಖರೀದಿಗೆ ಸಿಗುತ್ತಿದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್ಕಾರ್ಟ್ನಲ್ಲಿ (Flipkart) ಇನ್ಫಿನಿಕ್ಸ್ ನೋಟ್ 11 ಸೇಲ್ ಕಾಣುತ್ತಿದೆ. ಈ ಸ್ಮಾರ್ಟ್‌ಫೋನ್‌ಗಳು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿವೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಪಡೆದುಕೊಂಡಿವೆ.
ಇನ್ಫಿನಿಕ್ಸ್ ನೋಟ್ 11 ಸ್ಮಾರ್ಟ್‌ಫೋನ್ 1,080×2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ ಫುಲ್ HD+ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 180Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಪಡೆದಿದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್ ಹಿಲಿಯೋ G88 SoC ಪ್ರೊಸೆಸರ್ ಬಲವನ್ನು ಪಡೆದಿದ್ದು, ಕಂಪನಿಯ XOS 10 ಕಸ್ಟಮ್ ಸ್ಕಿನ್‌ನೊಂದಿಗೆ ಆಂಡ್ರಾಯ್ಡ್ 11 ನಲ್ಲಿ ಕಾರ್ಯನಿರ್ವಹಿಸುತ್ತದೆ.
ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ f/1.6 ಲೆನ್ಸ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸರ್ ಮತ್ತು AI ಲೆನ್ಸ್‌ನೊಂದಿಗೆ ಬರುತ್ತದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದರಲ್ಲಿ ಡ್ಯುಯಲ್-LED ಫ್ಲ್ಯಾಷ್‌ನೊಂದಿಗೆ ಅಳವಡಿಸಲಾಗಿದೆ.
5,000mAh ಸಾಮರ್ಥ್ಯದ ಬಲಿಷ್ಠ ಬ್ಯಾಟರಿಯನ್ನು ಹೊಂದಿದ್ದು, 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್, 3.5 ಎಂಎಂ ಹೆಡ್ಫೋನ್ ಜ್ಯಾಕ್ ಮತ್ತು ಯುಎಸ್ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಈ ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಕೂಡ ಪಡೆದಿವೆ.
ಭಾರತದಲ್ಲಿ ಇನ್ಫಿನಿಕ್ಸ್ ನೋಟ್ 11 ಸ್ಮಾರ್ಟ್‌ಫೋನ್ ಬೆಲೆ 11,999ರೂ. ಆಗಿದೆ. ಇದು ಸೆಲೆಸ್ಟಿಯಲ್ ಸ್ನೋ, ಗ್ಲೇಸಿಯರ್ ಗ್ರೀನ್ ಮತ್ತು ಗ್ರ್ಯಾಫೈಟ್ ಬ್ಲ್ಯಾಕ್ ಬಣ್ಣಗಳಲ್ಲಿ ಲಭ್ಯವಿದೆ. ಈ ಫೋನ್ ಇಂದಿನಿಂದ (ಡಿಸೆಂಬರ್ 23) ಫ್ಲಿಪ್‌ಕಾರ್ಟ್ ಮೂಲಕ ದೇಶದಲ್ಲಿ ಖರೀದಿಗೆ ಸಿಗುತ್ತಿದೆ.
(Infinix Note 11 50MP Camera 5000mAh battery is all set to go on its first sale today via Flipkart)