Infinix Note 11: ಇನ್ಫಿನಿಕ್ಸ್‌ ಕಂಪನಿಯಿಂದ ಬರುತ್ತಿದೆ ಬಜೆಟ್ ಬೆಲೆಯ ಮತ್ತೊಂದು ಸ್ಮಾರ್ಟ್​ಫೋನ್

| Updated By: Vinay Bhat

Updated on: Dec 05, 2021 | 12:48 PM

ಡಿಸೆಂಬರ್ ತಿಂಗಳಲ್ಲಿ ಇನ್ಫಿನಿಕ್ಸ್‌ ನೋಟ್‌ 11 ರಿಲೀಸ್ ಆಗಲಿದೆ ಎಂದಷ್ಟೆ ಕಂಪನಿ ತಿಳಿಸಿದೆ. ಇನ್ನೂ ಅಧಿಕೃತ ದಿನಾಂಕ ಪ್ರಕಟ ಮಾಡಿಲ್ಲ. ಈ ಸ್ಮಾರ್ಟ್‌ಫೋನ್‌ನ ಬೆಲೆ 12,499 ರೂ. ಆಗಿರಲಿದೆ ಎಂದು ಹೇಳಲಾಗಿದೆ.

Infinix Note 11: ಇನ್ಫಿನಿಕ್ಸ್‌ ಕಂಪನಿಯಿಂದ ಬರುತ್ತಿದೆ ಬಜೆಟ್ ಬೆಲೆಯ ಮತ್ತೊಂದು ಸ್ಮಾರ್ಟ್​ಫೋನ್
Infinix Note 11
Follow us on

ಸ್ಮಾರ್ಟ್​ಫೋನ್ ಮಾರುಕಟ್ಟೆಯಲ್ಲಿ ಬಜೆಟ್ ಬೆಲೆಯ ಮೊಬೈಲ್​ಗಳಿಂದಲೇ ಸಾಕಷ್ಟು ಪ್ರಸಿದ್ದಿ ಪಡೆದಿರುವ ಇನ್ಫಿನಿಕ್ಸ್‌ ಕಂಪನಿ (Infinix) ಇದೀಗ ತನ್ನ ಹೊಸ ಇನ್ಫಿನಿಕ್ಸ್‌ ನೋಟ್‌ 11 (Infinix Note 11) ಅನ್ನು ಬಿಡುಗಡೆ ಮಾಡಲು ತಯಾರಾಗಿದೆ. ಇದೇ ತಿಂಗಳಲ್ಲಿ ಈ ಸ್ಮಾರ್ಟ್​ಫೋನ್ ವಿಶೇಷವಾಗಿ ಫ್ಲಿಪ್‌ಕಾರ್ಟ್‌ನಲ್ಲಿ ಅನಾವರಣಗೊಳ್ಳಿದೆಯಂತೆ. ಈ ಸ್ಮಾರ್ಟ್‌ಫೋನ್‌ (Smartphone) 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಮೀಡಿಯಾಟೆಕ್‌ ಹಿಲಿಯೋ ಪ್ರೊಸೆಸರ್‌, ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಸೇರಿದಂತೆ ಅನೇಕ ಫೀಚರ್​ಗಳಿಂದ ಕೂಡಿದೆ.

ಡಿಸೆಂಬರ್ ತಿಂಗಳಲ್ಲಿ ಇನ್ಫಿನಿಕ್ಸ್‌ ನೋಟ್‌ 11 ರಿಲೀಸ್ ಆಗಲಿದೆ ಎಂದಷ್ಟೆ ಕಂಪನಿ ತಿಳಿಸಿದೆ. ಇನ್ನೂ ಅಧಿಕೃತ ದಿನಾಂಕ ಪ್ರಕಟ ಮಾಡಿಲ್ಲ. ಈ ಸ್ಮಾರ್ಟ್‌ಫೋನ್‌ನ ಬೆಲೆ 12,499 ರೂ. ಆಗಿರಲಿದೆ ಎಂದು ಹೇಳಲಾಗಿದೆ. ಈ ಮೂಲಕ ಇನ್ಫಿನಿಕ್ಸ್​ನಿಂದ ಬಜೆಟ್ ಬೆಲೆಗೆ ಮತ್ತೊಂದು ಅತ್ಯುತ್ತಮ ಸ್ಮಾರ್ಟ್​ಫೋನ್ ಬರುವುದು ಖಚಿತವಾಗುದೆ.

ಈ ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7-ಇಂಚಿನ FHD+ ವಿವಿಡ್ AMOLED ಡಿಸ್ಪ್ಲೇಯನ್ನು ಹೊಂದಿದೆಯಂತೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದಿದೆ. ಇದಲ್ಲದೆ ಈ ಡಿಸ್‌ಪ್ಲೇ 393 ppi ಸಾಂದ್ರತೆ ಹೊಂದಿದ್ದು, 60Hz ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದೆ. ಮೀಡಿಯಾಟೆಕ್‌ ಹಿಲಿಯೋ G88 ಪ್ರೊಸೆಸರ್‌ನಿಂದ ಚಾಲಿತವಾಗುವ ನಿರೀಕ್ಷೆಯಿದೆ. ಇದು ಆಂಡ್ರಾಯ್ಡ್‌ 11 ನಲ್ಲಿ ರನ್ ಆಗುತ್ತದೆ ಎನ್ನಲಾಗಿದೆ.

ಇನ್ಫಿನಿಕ್ಸ್‌ ನೋಟ್‌ 11 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ ಕ್ವಾಡ್ LED ಜೊತೆಗೆ 50-ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ f/2.4 ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ QVGA ಸೆನ್ಸಾರ್‌ ಪಡೆದುಕೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.

ಈ ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ USB ಟೈಪ್ C 2.0, USB ಆನ್ ದಿ ಗೋ ಅನ್ನು ಬೆಂಬಲಿಸಲಿದೆ. ಇದರೊಂದಿಗೆ ಫಿಂಗರ್‌ಪ್ರಿಂಟ್ (ಸೈಡ್-ಮೌಂಟೆಡ್), ಅಕ್ಸೆಲೆರೊಮೀಟರ್, ಗೈರೊ ಸೆನ್ಸಾರ್‌, ಪ್ರಾಕ್ಸಿಮಿಟಿ ಸೆನ್ಸಾರ್​ನಿಂದ ಆವೃತವಾಗಿದೆ.

Jio Cashback Offer: ಬೆಲೆ ಏರಿಕೆ ಬೆನ್ನಲ್ಲೇ ಆಫರ್​ಗಳ ಸುರಿಮಳೆ: ಏರ್ಟೆಲ್ ಬಳಿಕ ಜಿಯೋದಿಂದ ಬಂಪರ್ ಆಫರ್ ಘೋಷಣೆ

(Infinix Note 11 Infinix is all set to launch a new smartphone in the Indian market)