ಸ್ಮಾರ್ಟ್‌ಫೋನ್ (Smartphone) ಮಾರುಕಟ್ಟೆಯಲ್ಲಿ ಹೆಚ್ಚು ಬಜೆಟ್ ಬೆಲೆಯ ಮೊಬೈಲ್ಗಳಿಗೆ (Budget Smartphone) ಹೆಸರುವಾಸಿಯಾಗಿರುವ ಪ್ರಸಿದ್ಧ ಇನ್ಫಿನಿಕ್ಸ್ (Infinix) ಕಂಪನಿ ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಈ ಪೈಕಿ ಕಳೆದ ವಾರವಷ್ಟೆ ಕಂಪನಿ ಹೊಸ ಇನ್ಫಿನಿಕ್ಸ್ ನೋಟ್ 11 (Infinix Note 11) ಮತ್ತು ಇನ್ಫಿನಿಕ್ಸ್ ನೋಟ್ 11ಎಸ್ (Infinix Note 11S) ಸ್ಮಾರ್ಟ್ಫೋನುಗಳನ್ನು ಭಾರತದಲ್ಲಿ ಬಿಡುಗಡೆ ಮಾಡಿತ್ತು. ಈ ಪೈಕಿ ಸದ್ಯ ಇನ್ಫಿನಿಕ್ಸ್ ನೋಟ್ 11S ಸ್ಮಾರ್ಟ್‌ಫೋನ್ ಇದೀಗ ಖರೀದಿಗೆ ಸಿಗುತ್ತಿದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್ಕಾರ್ಟ್ನಲ್ಲಿ (Flipkart) ಇನ್ಫಿನಿಕ್ಸ್ ನೋಟ್ 11S ಸೇಲ್ ಕಾಣುತ್ತಿದೆ. ಪಂಚ್- ಹೋಲ್ ಕಟೌಟ್ ವಿನ್ಯಾಸದ ಡಿಸ್‌ಪ್ಲೇ, 5,000mAh ಸಾಮರ್ಥ್ಯದ ಬ್ಯಾಟರಿಗಳನ್ನು, 33W ವೇಗದ ಚಾರ್ಜಿಂಗ್ ಸೇರಿದಂತೆ ಅನೇಕ ಆಕರ್ಷಕ ಫೀಚರ್ಗಳಿಂದ ಈ ಸ್ಮಾರ್ಟ್‌ಫೋನ್ ಕೂಡಿದೆ. ಜೊತೆಗೆ ಕಡಿಮೆ ಬೆಲೆಗೆ ಖರೀದಿಗೆ ಸಿಗುತ್ತಿದೆ ಎಂಬುದು ವಿಶೇಷ.
ಹೌದು, ಇನ್ಫಿನಿಕ್ಸ್ ನೋಟ್ 11S ಸ್ಮಾರ್ಟ್‌ಫೋನ್ 1,080×2,460 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.95 ಇಂಚಿನ ಫುಲ್ HD+ IPS ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಅನ್ನು ಪಡೆದುಕೊಂಡಿದೆ. ಇದು ವೀಡಿಯೋ ಕರೆ ಹಾಗೂ ವಿಡಿಯೋ ವೀಕ್ಷಣೆಗೆ ಯೋಗ್ಯವಾದ ಮಾದರಿಯನ್ನು ಹೊಂದಿದೆ. ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೋ G96 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದು ಕಂಪನಿಯ XOS 10 ಕಸ್ಟಮ್ ಸ್ಕಿನ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಸ್ಲಾಟ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.
ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ f/1.6 ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದ್ದು, ಇದನ್ನು ಡ್ಯುಯಲ್ LED ಫ್ಲ್ಯಾಷ್‌ನೊಂದಿಗೆ ಅಳವಡಿಸಲಾಗಿದೆ.
5,000mAh ಸಾಮರ್ಥ್ಯದ ಬಲಿಷ್ಠ ಬ್ಯಾಟರಿ ಬ್ಯಾಕಪ್ ಹೊಂದಿದ್ದು, 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್, 3.5 ಎಂಎಂ ಹೆಡ್ಫೋನ್ ಜ್ಯಾಕ್ ಮತ್ತು ಯುಎಸ್ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಈ ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಕೂಡ ಪಡೆದಿವೆ. ಇದರ 6GB RAM ಮತ್ತು 64GB ಸ್ಟೋರೇಜ್ ಆಯ್ಕೆಗೆ 12,999 ರೂ.ನಿಗದಿ ಮಾಡಲಾಗಿದೆ. ಅಂತೆಯೆ 8GB RAM ಮತ್ತು 128GB ಸ್ಟೋರೇಜ್ ಆಯ್ಕೆಗೆ 14,999.ರೂ. ಬೆಲೆ ಹೊಂದಿದೆ.
(Infinix Note 11S smartphone available on Flipkart Price specs and everything you need to know)