Infinix Note 12 Pro 5G: 108MP ಕ್ಯಾಮೆರಾದ ಇನ್ಫಿನಿಕ್ಸ್​ ನೋಟ್ 12 ಪ್ರೊ ಫೋನ್ ಹೇಗಿದೆ?: ಖರೀದಿಸಬಹುದೇ?

ಇನ್ಫಿನಿಕ್ಸ್ ಕಂಪನಿ ಕಳೆದ ವಾರ ಇನ್ಫಿನಿಕ್ಸ್ ನೋಟ್ 12 ಸರಣಿಯನ್ನು ಬಿಡುಗಡೆ ಮಾಡಿತ್ತು. ಇದರಲ್ಲಿ ಇನ್ಫಿನಿಕ್ಸ್​ ನೋಟ್ 12 5G ಮತ್ತು ಇನ್ಫಿನಿಕ್ಸ್​ ನೋಟ್ 12 ಪ್ರೊ 5G ಫೋನಿದೆ. ಈ ಪೈಕಿ 12 ಪ್ರೊ ಫೋನ್ ಇಂದು ಮೊದಲ ಸೇಲ್ ಕಾಣುತ್ತಿದೆ.

Infinix Note 12 Pro 5G: 108MP ಕ್ಯಾಮೆರಾದ ಇನ್ಫಿನಿಕ್ಸ್​ ನೋಟ್ 12 ಪ್ರೊ ಫೋನ್ ಹೇಗಿದೆ?: ಖರೀದಿಸಬಹುದೇ?
Infinix Note 12 Pro 5G
Follow us
TV9 Web
| Updated By: Vinay Bhat

Updated on:Jul 14, 2022 | 2:47 PM

ಬಜೆಟ್ ಬೆಲೆಗೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಪರಿಚಯಿಸುವುದರಲ್ಲಿ ಇನ್ಫಿನಿಕ್ಸ್ (Infinix)​ ಕಂಪನಿ ಮುಂಚೂಣಿಯಲ್ಲಿದೆ. ಈಗಂತು ಅತ್ಯುತ್ತಮ ಕ್ಯಾಮೆರಾ ಫೋನ್​ಗಳ ಮೇಲೆ ಕಣ್ಣಿಟ್ಟಿರುವ ಇನ್ಫಿನಿಕ್ಸ್​ ಇತ್ತೀಚೆಗಷ್ಟೆ ಬರೋಬ್ಬರಿ 108 ಮೆಗಾಫಿಕ್ಸೆಲ್​ನ ಹೊಸ ಸ್ಮಾರ್ಟ್​​ಫೋನೊಂದನ್ನು ಭಾರತದ ಮಾರುಕಟ್ಟೆಗೆ ಪರಿಚಯಿಸಿತ್ತು. ಹೌದು, ಇನ್ಫಿನಿಕ್ಸ್ ಕಂಪನಿ ಕಳೆದ ವಾರ ಇನ್ಫಿನಿಕ್ಸ್ ನೋಟ್ 12 ಸರಣಿಯನ್ನು (Infinix Note 12 Series) ಬಿಡುಗಡೆ ಮಾಡಿತ್ತು. ಇದರಲ್ಲಿ ಇನ್ಫಿನಿಕ್ಸ್​ ನೋಟ್ 12 5G ಮತ್ತು ಇನ್ಫಿನಿಕ್ಸ್​ ನೋಟ್ 12 ಪ್ರೊ 5G ಫೋನಿದೆ. ಈ ಪೈಕಿ 12 ಪ್ರೊ (Infinix Note 12 Pro 5G) ಫೋನ್ ಇಂದು ಮೊದಲ ಸೇಲ್ ಕಾಣುತ್ತಿದೆ. ಈ ಫೋನ್ 108 ಮೆಗಾಫಿಕ್ಸೆಲ್​ನ ಕ್ಯಾಮೆರಾ ಹೊಂದಿದೆ. ಭರ್ಜರಿ ಬ್ಯಾಟರಿ, ಅತ್ಯುತ್ತಮ ಪ್ರೊಸೆಸರ್‌ ಕೂಡ ನೀಡಲಾಗಿದೆ. ಬೆಲೆ ಕೂಡ ದೊಡ್ಡ ಮಟ್ಟದಲ್ಲಿಲ್ಲ. ಹಾಗಾದ್ರೆ ಈ ಫೋನಿನ ಬೆಲೆ ಎಷ್ಟು?, ಆಫರ್ ಏನಿದೆ?, ಫೀಚರ್ಸ್​ ಏನು? ಎಂಬುದನ್ನು ನೋಡೋಣ.

  1. ಇನ್ಫಿನಿಕ್ಸ್‌ ನೋಟ್‌ 12 ಪ್ರೊ 5G ಸ್ಮಾರ್ಟ್‌ಫೋನ್‌ ಭಾರತದಲ್ಲಿ ಒಂದು ಮಾದರಿಯಲ್ಲಷ್ಟೆ ಬಿಡುಗಡೆ ಆಗಿದೆ. ಇದರ 8GB RAM 128GB ಸ್ಟೋರೆಜ್ ರೂಪಂತರಕ್ಕೆ ಕೇವಲ 17,999 ರೂ. ಬೆಲೆ ನಿಗದಿ ಮಾಡಲಾಗಿದೆ.
  2. ಈ ಫೋನನ್ನು ನೀವು ಇಂದಿನಿಂದ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್ ಮೂಲಕ ಖರೀದಿಗೆ ಲಭ್ಯವಾಗುತ್ತಿದೆ. ಫೋರ್ಸ್​ ಬ್ಲಾಕ್ ಮತ್ತು ಸ್ನೋಫಾಲ್ ವೈಟ್ ಕಲರ್​ನಲ್ಲಿ ಬರುತ್ತಿದೆ.
  3. ಆಕ್ಸಿಸ್‌ ಬ್ಯಾಂಕ್ ಕಾರ್ಡ್‌ಗಳನ್ನು ಬಳಸಿಕೊಂಡು ಪಾವತಿ ಮಾಡುವ ಗ್ರಾಹಕರು 1,500 ರೂ. ಡಿಸ್ಕೌಂಟ್ ಪಡದುಕೊಳ್ಳಬಹುದಾಗಿದೆ. SBI ಕಾರ್ಡ್​ ಮೂಲಕ ಖರೀದಿಸಿದರೆ ಶೇ. 10 ರಷ್ಟು ರಿಯಾಯಿತಿ ನೀಡಲಾಗಿದೆ.
  4. ಇನ್ಫಿನಿಕ್ಸ್‌ 12 ಪ್ರೊ 5G ಸ್ಮಾರ್ಟ್‌ಫೋನ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ.
  5. ಇದನ್ನೂ ಓದಿ
    Image
    Galaxy M13 5G: ಬಜೆಟ್ ಬೆಲೆ, ಬಂಪರ್ ಫೀಚರ್ಸ್: ಬಹುನಿರೀಕ್ಷಿತ ಸ್ಯಾಮ್​ಸಂಗ್ ಗ್ಯಾಲಕ್ಸಿ M13 4G, M13 5G ಸ್ಮಾರ್ಟ್​​ಫೋನ್ ಬಿಡುಗಡೆ
    Image
    Tech Tips: ನಿಮ್ಮ ಸ್ಮಾರ್ಟ್​ಫೋನ್ ಬ್ಯಾಟರಿಯನ್ನು ಇನ್ನಷ್ಟು ಪವರ್​​ಫುಲ್ ಮಾಡಬೇಕೆ?: ಇಲ್ಲಿದೆ ಟಿಪ್ಸ್
    Image
    WhatsApp: ಕೂಡಲೇ ವಾಟ್ಸ್​ಆ್ಯಪ್ ಅಪ್ಡೇಟ್ ಮಾಡಿ: ಬಂದಿದೆ ಬೆರಗುಗೊಳಿಸುವ ಹೊಸ ಫೀಚರ್
    Image
    Nothing Phone 1: ಆಕರ್ಷಕ ವಿನ್ಯಾಸ, ಅದ್ಭುತ ಫೀಚರ್ಸ್​: ಕಡಿಮೆ ಬೆಲೆಯ ನಥಿಂಗ್ ಫೋನ್ 1 ಬಿಡುಗಡೆ
  6. 6nm ಮೀಡಿಯಾ ಟೆಕ್ ಡೈಮೆನ್ಸಿಟಿ 810 5G ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 12 ಮೂಲಕ ಕಾರ್ಯನಿರ್ವಹಿಸುತ್ತದೆ.
  7. ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ ಬರೋಬ್ಬರಿ 108 ಮೆಗಾಪಿಕ್ಸೆಲ್‌ ಸೆನ್ಸಾರ್​​ನಲ್ಲಿದೆ. ಇದು Quad LED ಫ್ಲ್ಯಾಷ್ ಒಳಗೊಂಡಿದೆ. 2 ಮೆಗಾಫಿಕ್ಸೆಲ್​ನ ಸೆಕೆಂಡರಿ ಸೆನ್ಸಾರ್ ಮತ್ತು ನ್ಯಾನೋ ಸೆನ್ಸಾರ್ ನೀಡಲಾಗಿದೆ.
  8. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ ಡ್ಯುಯಲ್ LED ಫ್ಲ್ಯಾಷ್‌ ಹೊಂದಿದೆ.
  9. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದ್ದು ಇದು 33W ಟೈಪ್-ಸಿ ಫಾಸ್ಟ್ ಚಾರ್ಜರ್‌ ಬೆಂಬಲಿಸಲಿದೆ. ಒಂದು ಗಂಟೆ 30 ನಿಮಿಷಗಳ ಚಾರ್ಜ್ ಮಾಡಬಹುದು ಎಂದು ಕಂಪನಿ ಹೇಳಿದೆ.
  10. ಮಾರುಕಟ್ಟೆಯಲ್ಲಿ ಅದ್ಭುತ ಫೀಚರ್ಸ್​​ಗೆ ಲಭ್ಯವಿರುವ ಅತ್ಯಂತ ಕಡಿಮೆ ಬೆಲೆಯ ಫೋನುಗಳಲ್ಲಿ ಇದುಕೂಡ ಒಂದಾಗಿದೆ. ನೀವು ಕ್ಯಾಮೆರಾ ಪ್ರಿಯರಾಗದ್ದಲ್ಲಿ ಈ ಫೋನನ್ನು ಖರೀದಿಸಬಹುದು. ಸಣ್ಣ ಮಟ್ಟದ ಗೇಮಿಂಗ್​ಗೆ ಕೂಡ ಪ್ರಯೋಜನವಾಗಲಿದೆ.

Published On - 2:47 pm, Thu, 14 July 22

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?