ಸ್ಮಾರ್ಟ್‌ಫೋನ್ ಕ್ಷೇತ್ರದಲ್ಲಿ ಇನ್ಫಿನಿಕ್ಸ್ (Infinix) ಕಂಪನಿ ಕಡಿಮೆ ಬೆಲೆಗೆ ಆಕರ್ಷಕ ಫೋನ್ಗಳನ್ನು ಬಿಡುಗಡೆ ಮಾಡುವುದಕ್ಕಾಗಿ ಹೆಸರುವಾಸಿ. ಇದಕ್ಕಾಗಿಯೆ ಮಾರುಕಟ್ಟೆಯಲ್ಲಿ ಈ ಕಂಪನಿ ವಿಶೇಷ ಸ್ಥಾನ ಪಡೆದುಕೊಂಡಿದೆ. ಇತ್ತೀಚೆಗಷ್ಟೆ ಇನ್ಫಿನಿಕ್ಸ್ ಮೊಬೈಲ್ ಕಂಪನಿ ಭಾರತದಲ್ಲಿ ಇನ್ಫಿನಿಕ್ಸ್ನೋಟ್ 12 ಸರಣಿ (Infinix Note 12 series) ಅನಾವರಣಮಾಡಿತ್ತು. ಇದರಲ್ಲಿ ಇನ್ಫಿನಿಕ್ಸ್ ನೋಟ್ 12 ಮತ್ತು ಇನ್ಫಿನಿಕ್ಸ್ ನೋಟ್ 12 ಪ್ರೊ ಸ್ಮಾರ್ಟ್ಫೋನ್ಗಳಿದ್ದವು. ಇದೀಗ ಇನ್ಫಿನಿಕ್ಸ್ ನೋಟ್ 12 ಸರಣಿಯ ಎರಡೂ ಫೋನ್ಗಳು ಹೊಸ 5G ಅವತಾರದಲ್ಲಿ ಬಿಡುಗಡೆ ಮಾಡಲು ಕಂಪನಿ ಪ್ಲಾನ್ ಮಾಡಿಕೊಂಡಿದೆ. ಈ ಫೋನ್ ಜುಲೈ 8 ಇಂದು ದೇಶದಲ್ಲಿ ರಿಲೀಸ್ ಆಗಲಿದೆ. ವಿಶೇಷ ಎಂದರೆ ಇದುಕೂಡ ಬಜೆಟ್ ಬೆಲೆಯಿಂದಲೇ ಕೂಡಿದೆಯಂತೆ. ಹಾಗಾದ್ರೆ ಈ ಫೋನಿನ ಫೀಚರ್ಸ್ ಏನಿರಬಹುದು ಎಂಬುದನ್ನು ನೋಡೋಣ.
ಇನ್ಫಿನಿಕ್ಸ್ ನೋಟ್ 12 5G ಆವೃತ್ತಿಯ ಬೆಲೆ ಬಹಿರಂಗಹೊಂಡಿಲ್ಲ. ಆದರೆ ಈ ಸ್ಮಾರ್ಟ್‌ಫೋನ್ 4G ಆವೃತ್ತಿಯ ಬೆಲೆಯನ್ನು ನೋಡುವುದಾದರೆ ಇದರ 4GB RAM + 64GB ಸ್ಟೋರೇಜ್ ಮಾದರಿಗೆ 11,499 ರೂ., ಅಂತೆಯೆ 6GB RAM + 128GB ಸ್ಟೋರೇಜ್ ಮಾದರಿಗೆ 12,999 ರೂ. ಬೆಲೆ ಹೊಂದಿದೆ.
ಇನ್ಫಿನಿಕ್ಸ್ ನೋಟ್ 12 5G ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್ ಹಿಲಿಯೋ G88 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಆಧಾರಿತ X OS 10.6 ನಲ್ಲಿ ಕಾರ್ಯನಿರ್ವಹಿಸುತ್ತದೆ.
ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಫಿಕ್ಸೆಲ್ನ ಆಕರ್ಷಕ ಕ್ಯಾಮೆರಾ ಇರುವ ಸಾಧ್ಯತೆ ಇದೆ. 4ಜಿ ಆವೃತ್ತಿಯಲ್ಲಿ 50 ಮೆಗಾಪಿಕ್ಸೆಲ್ ಸೆನ್ಸಾರ್ ನೀಡಲಾಗಿತ್ತು. ಅಂತೆಯೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಲಿದೆ.
ದೀರ್ಘ ಸಮಯ ಬಾಳಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ಫ್ಲಾಶ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 802.11ac, ಬ್ಲೂಟೂತ್, FM ರೇಡಿಯೋ, GPS/ A-GPS, USB ಟೈಪ್-C ನೀಡಲಾಗಿದೆ.