Infinix Note 12 series: ಡಬಲ್ ಧಮಾಕ: ಬಜೆಟ್ ಬೆಲೆಗೆ ಎರಡು ಆಕರ್ಷಕ ಫೋನ್​ಗಳನ್ನು ರಿಲೀಸ್ ಮಾಡಿದ ಇನ್ಫಿನಿಕ್ಸ್

| Updated By: Vinay Bhat

Updated on: May 21, 2022 | 1:59 PM

Infinix Note 12 and Note 12 Turb: ಭಾರತದ ಮಾರುಕಟ್ಟೆಯಲ್ಲಿ ಹೊಸ ಇನ್ಫಿನಿಕ್ಸ್‌ ನೋಟ್‌ 12 ಸರಣಿ (Infinix Note 12 series) ಅನಾವರಣಗೊಂಡಿದೆ. ಇದರಲ್ಲಿ ಇನ್ಫಿನಿಕ್ಸ್‌ ನೋಟ್‌ 12 ಮತ್ತು ಇನ್ಫಿನಿಕ್ಸ್‌ ನೋಟ್‌ 12 ಟರ್ಬೋ ಸ್ಮಾರ್ಟ್‌ಫೋನ್‌ ಸೇರಿವೆ.

Infinix Note 12 series: ಡಬಲ್ ಧಮಾಕ: ಬಜೆಟ್ ಬೆಲೆಗೆ ಎರಡು ಆಕರ್ಷಕ ಫೋನ್​ಗಳನ್ನು ರಿಲೀಸ್ ಮಾಡಿದ ಇನ್ಫಿನಿಕ್ಸ್
Infinix Note 12 series
Follow us on

ಸ್ಮಾರ್ಟ್‌ಫೋನ್ ಕ್ಷೇತ್ರದಲ್ಲಿ ಇನ್ಫಿನಿಕ್ಸ್‌ (Infinix) ಕಂಪನಿ ಕಡಿಮೆ ಬೆಲೆಗೆ ಆಕರ್ಷಕ ಫೋನ್​ಗಳನ್ನು ಬಿಡುಗಡೆ ಮಾಡುವುದಕ್ಕಾಗಿ ಹೆಸರುವಾಸಿ. ಇದಕ್ಕಾಗಿಯೆ ಮಾರುಕಟ್ಟೆಯಲ್ಲಿ ಈ ಕಂಪನಿ ವಿಶೇಷ ಸ್ಥಾನ ಪಡೆದುಕೊಂಡಿದೆ. ಇತ್ತೀಚೆಗಷ್ಟೆ ಇನ್ಫಿನಿಕ್ಸ್‌ ಮೊಬೈಲ್ ಕಂಪನಿ ಭಾರತದಲ್ಲಿ ತನ್ನ ಹೊಸ ಇನ್ಫಿನಿಕ್ಸ್‌ ಸ್ಮಾರ್ಟ್ 6 (Infinix Smart 6) ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿ ಭಾರೀ ಸದ್ದು ಮಾಡಿತ್ತು. ಇದೀಗ ದೇಶಕ್ಕೆ ಮತ್ತೊಂದು ಹೊಸ ಮೊಬೈಲ್ ಅನ್ನು ಪರಿಚಯಿಸುತ್ತಿದೆ. ಸದ್ಯ ಭಾರತದ ಮಾರುಕಟ್ಟೆಯಲ್ಲಿ ಹೊಸ ಇನ್ಫಿನಿಕ್ಸ್‌ ನೋಟ್‌ 12 ಸರಣಿ (Infinix Note 12 series) ಅನಾವರಣಗೊಂಡಿದೆ. ಇದರಲ್ಲಿ ಇನ್ಫಿನಿಕ್ಸ್‌ ನೋಟ್‌ 12 ಮತ್ತು ಇನ್ಫಿನಿಕ್ಸ್‌ ನೋಟ್‌ 12 ಟರ್ಬೋ ಸ್ಮಾರ್ಟ್‌ಫೋನ್‌ ಸೇರಿವೆ. ಈ ಎರಡೂ ಸ್ಮಾರ್ಟ್‌ಫೋನ್‌ಗಳು ಬಜೆಟ್ ಬೆಲೆಗೆ ಲಭ್ಯವಿದೆ ಎಂಬುದು ವಿಶೇಷ. ಪ್ರಮುಖವಾಗಿ ನೋಟ್‌ 12 ಮತ್ತು ನೋಟ್‌ 12 ಟರ್ಬೋ 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುವ 5,000mAh ಬ್ಯಾಟರಿಯನ್ನು ಹೊಂದಿವೆ. ಹಾಗಾದ್ರೆ ಇದರ ಬೆಲೆ ಎಷ್ಟು ಎಂಬುದನ್ನು ನೋಡೋಣ.

  1. ಇನ್ಫಿನಿಕ್ಸ್‌ ನೋಟ್‌ 12 ಸ್ಮಾರ್ಟ್‌ಫೋನ್‌ 4GB RAM + 64GB ಸ್ಟೋರೇಜ್ ಮಾದರಿಗೆ 11,499 ರೂ. ನಿಗದಿ ಮಾಡಲಾಗಿದೆ. ಅಂತೆಯೆ 6GB RAM + 128GB ಸ್ಟೋರೇಜ್ ಮಾದರಿಗೆ 12,999 ರೂ. ಬೆಲೆ ಹೊಂದಿದೆ. ಫೋರ್ಸ್ ಬ್ಲ್ಯಾಕ್, ಜ್ಯುವೆಲ್ ಬ್ಲೂ ಮತ್ತು ಸನ್‌ಸೆಟ್ ಗೋಲ್ಡ್ ಬಣ್ಣಗಳ ಆಯ್ಕೆ ನೀಡಲಾಗಿದೆ.
  2. ಇನ್ಫಿನಿಕ್ಸ್‌ ನೋಟ್‌ 12 ಟರ್ಬೋ ಸ್ಮಾರ್ಟ್‌ಫೋನ್‌ ಒಂದೇ ಸ್ಟೋರೆಜ್ ಆಯ್ಕೆ ಹೊಂದಿದೆ. ಇದರ 8GB RAM + 128GB ಕಾನ್ಫಿಗರೇಶನ್‌ಗೆ 14,999 ರೂ. ಬೆಲೆ ಇದೆ. ಇದು ಫೋರ್ಸ್ ಬ್ಲ್ಯಾಕ್, ಸಫೈರ್ ಬ್ಲೂ ಮತ್ತು ಸ್ನೋಫಾಲ್ ಬಣ್ಣದ ಆಯ್ಕೆಗಳಲ್ಲಿ ಬರಲಿದೆ. ಎರಡೂ ಫೋನ್ ಮೇ 27 ಮತ್ತು ಮೇ 28 ರಿಂದ ಫ್ಲಿಪ್‌ಕಾರ್ಟ್‌ನಲ್ಲಿ ಲಭ್ಯವಿರುತ್ತವೆ.
  3. ಇನ್ಫಿನಿಕ್ಸ್‌ ನೋಟ್‌ 12 ಸ್ಮಾರ್ಟ್‌ಫೋನ್‌ 6.7 ಇಂಚಿನ ಫುಲ್‌ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್‌ ಹಿಲಿಯೋ G88 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್‌ 11 ಆಧಾರಿತ X OS 10.6 ನಲ್ಲಿ ಕಾರ್ಯನಿರ್ವಹಿಸುತ್ತದೆ.
  4. ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
  5. ಇದನ್ನೂ ಓದಿ
    Tech Tips: ಈ ಆ್ಯಪ್ ಇನ್​ಸ್ಟಾಲ್ ಮಾಡಿದ್ರೆ ನಿಮ್ಮ ಫೋನ್ ಬ್ಯಾಟರಿ ಖಾಲಿ ಆಗೋದೆ ಇಲ್ಲ
    Vivo Y75: ಬಜೆಟ್ ಬೆಲೆಗೆ ಬಂಪರ್ ಫೋನ್: ಭಾರತದಲ್ಲಿ ವಿವೋ Y75 ಸ್ಮಾರ್ಟ್​​ಫೋನ್ ರಿಲೀಸ್
    OnePlus Nord 2T 5G: ಒನ್‌ಪ್ಲಸ್‌ ನಾರ್ಡ್ 2T 5G ಬಿಡುಗಡೆ: ಟೆಕ್ ಪ್ರಿಯರ ಹುಬ್ಬೇರುವಂತೆ ಮಾಡಿದೆ ಈ ಫೋನ್
    Oppo Reno 8 Series: ಕ್ಯಾಮೆರಾ ಪ್ರಿಯರ ನಿದ್ದೆ ಕೆಡಿಸಿದ ಒಪ್ಪೋ ರೆನೋ 8 ಸರಣಿ: ಇದರಲ್ಲಿ ಅಂಥದ್ದೇನಿದೆ ನೋಡಿ
  6. ದೀರ್ಘ ಸಮಯ ಬಾಳಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ಫ್ಲಾಶ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi 802.11ac, ಬ್ಲೂಟೂತ್, FM ರೇಡಿಯೋ, GPS/ A-GPS, USB ಟೈಪ್-C ನೀಡಲಾಗಿದೆ.
  7. ಇನ್ನು ಇನ್ಫಿನಿಕ್ಸ್‌ ನೋಟ್‌ 12 ಟರ್ಬೋ 6.7 ಇಂಚಿನ ಫುಲ್‌ HD+ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾಟೆಕ್‌ ಹಿಲಿಯೋ G96 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 12 ನಲ್ಲಿ ಕಾರ್ಯನಿರ್ವಹಿಸುತ್ತದೆ.
  8. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 24 ಗಂಟೆಗಳವರೆಗೆ ವೀಡಿಯೊ ಪ್ಲೇಬ್ಯಾಕ್ ಅನ್ನು ಬೆಂಬಲಿಸುತ್ತದೆ.

ತಂತ್ರಜ್ಞಾನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:59 pm, Sat, 21 May 22