AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Infinix Note 12 Turbo: ಬಜೆಟ್ ಬೆಲೆಗೆ ಬಂಪರ್ ಫೋನ್: ಇನ್ಫಿನಿಕ್ಸ್‌ ನೋಟ್‌ 12 ಟರ್ಬೋ ಮಾರಾಟ ಆರಂಭ

ಇತ್ತೀಚೆಗಷ್ಟೆ ಇನ್ಫಿನಿಕ್ಸ್‌ ನೋಟ್‌ 12 ಮತ್ತು ಇನ್ಫಿನಿಕ್ಸ್‌ ನೋಟ್‌ 12 ಟರ್ಬೋ ಸ್ಮಾರ್ಟ್‌ಫೋನ್‌ ಆಗಿತ್ತು. ಈ ಎರಡೂ ಸ್ಮಾರ್ಟ್‌ಫೋನ್‌ಗಳ ಪೈಕಿ ಇನ್ಫಿನಿಕ್ಸ್‌ ನೋಟ್‌ 12 ಟರ್ಬೋ ಈಗ ಫ್ಲಿಪ್​ಕಾರ್ಟ್​​ನಲ್ಲಿ (Flipkart) ಖರೀದಿಗೆ ಸಿಗುತ್ತಿದೆ.

Infinix Note 12 Turbo: ಬಜೆಟ್ ಬೆಲೆಗೆ ಬಂಪರ್ ಫೋನ್: ಇನ್ಫಿನಿಕ್ಸ್‌ ನೋಟ್‌ 12 ಟರ್ಬೋ ಮಾರಾಟ ಆರಂಭ
Infinix Note 12 series
Follow us
TV9 Web
| Updated By: Vinay Bhat

Updated on:May 27, 2022 | 4:14 PM

ಸ್ಮಾರ್ಟ್‌ಫೋನ್ ಕ್ಷೇತ್ರದಲ್ಲಿ ಇನ್ಫಿನಿಕ್ಸ್‌ (Infinix) ಕಂಪನಿ ಕಡಿಮೆ ಬೆಲೆಗೆ ಆಕರ್ಷಕ ಫೋನ್​ಗಳನ್ನು ಬಿಡುಗಡೆ ಮಾಡುವುದಕ್ಕಾಗಿ ಹೆಸರುವಾಸಿ. ಇದಕ್ಕಾಗಿಯೆ ಮಾರುಕಟ್ಟೆಯಲ್ಲಿ ಈ ಕಂಪನಿ ವಿಶೇಷ ಸ್ಥಾನ ಪಡೆದುಕೊಂಡಿದೆ. ಇತ್ತೀಚೆಗಷ್ಟೆ ಇನ್ಫಿನಿಕ್ಸ್‌ ಮೊಬೈಲ್ ಕಂಪನಿ ಭಾರತದಲ್ಲಿ ತನ್ನ ಹೊಸ ಇನ್ಫಿನಿಕ್ಸ್‌ ನೋಟ್‌ 12 ಸರಣಿ (Infinix Note 12 series) ಅನ್ನು ಅನಾವರಣ ಮಾಡಿತ್ತು. ಇದರಲ್ಲಿ ಇನ್ಫಿನಿಕ್ಸ್‌ ನೋಟ್‌ 12 ಮತ್ತು ಇನ್ಫಿನಿಕ್ಸ್‌ ನೋಟ್‌ 12 ಟರ್ಬೋ ಸ್ಮಾರ್ಟ್‌ಫೋನ್‌ ಸೇರಿವೆ. ಈ ಎರಡೂ ಸ್ಮಾರ್ಟ್‌ಫೋನ್‌ಗಳ ಪೈಕಿ ಇನ್ಫಿನಿಕ್ಸ್‌ ನೋಟ್‌ 12 ಟರ್ಬೋ ಈಗ ಫ್ಲಿಪ್​ಕಾರ್ಟ್​​ನಲ್ಲಿ (Flipkart) ಖರೀದಿಗೆ ಸಿಗುತ್ತಿದೆ. ಪ್ರಮುಖವಾಗಿ ನೋಟ್‌ 12 ಮತ್ತು ನೋಟ್‌ 12 ಟರ್ಬೋ 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುವ 5,000mAh ಬ್ಯಾಟರಿಯನ್ನು ಹೊಂದಿವೆ. ಹಾಗಾದ್ರೆ ಇದರ ಬೆಲೆ ಎಷ್ಟು ಎಂಬುದನ್ನು ನೋಡೋಣ.

  1. ಇನ್ಫಿನಿಕ್ಸ್‌ ನೋಟ್‌ 12 ಟರ್ಬೋ ಸ್ಮಾರ್ಟ್‌ಫೋನ್‌ ಒಂದೇ ಸ್ಟೋರೆಜ್ ಆಯ್ಕೆ ಹೊಂದಿದೆ. ಇದರ 8GB RAM + 128GB ಕಾನ್ಫಿಗರೇಶನ್‌ಗೆ 14,999 ರೂ. ಬೆಲೆ ಇದೆ. ಇದು ಫೋರ್ಸ್ ಬ್ಲ್ಯಾಕ್, ಸಫೈರ್ ಬ್ಲೂ ಮತ್ತು ಸ್ನೋಫಾಲ್ ಬಣ್ಣದ ಆಯ್ಕೆಗಳಲ್ಲಿ ಬರಲಿದೆ.
  2. ಈ ಫೋನ್ 6.7 ಇಂಚಿನ ಫುಲ್‌ HD+ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,000 ನಿಟ್ಸ್‌ ಬ್ರೈಟ್‌ನೆಸ್‌ ಮತ್ತು 180Hz ಟಚ್ ಸ್ಯಾಂಪ್ಲಿಂಗ್ ರೇಟ್​ನಿಂದ ಕೂಡಿದೆ.
  3. ಇದು ಮೀಡಿಯಾಟೆಕ್‌ ಹಿಲಿಯೋ G96 SoC ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 12 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 128GB ಸ್ಟೋರೇಜ್ ಅನ್ನು ಹೊಂದಿದೆ.
  4. ನೋಟ್‌ 12 ಟರ್ಬೋ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ.
  5. ಇದನ್ನೂ ಓದಿ
    Image
    Galaxy M13: 50MP ಕ್ಯಾಮೆರಾ, 5000mAh ಬ್ಯಾಟರಿ: ಸ್ಯಾಮ್​ಸಂಗ್ ಗ್ಯಾಲಕ್ಸಿ M13 ಸ್ಮಾರ್ಟ್‌ಫೋನ್ ಬಿಡುಗಡೆ
    Image
    ಸದ್ದಿಲ್ಲದೆ ಮಾರುಕಟ್ಟೆಗೆ ಲಗ್ಗೆಯಿಟ್ಟ ಮೋಟೋ E32s: ಏನು ವಿಶೇಷತೆ?, ಬೆಲೆ ಎಷ್ಟು?
    Image
    Infinix Hot 12 Play: 6000mAh ಬ್ಯಾಟರಿಯ ಹೊಸ ಸ್ಮಾರ್ಟ್​​ಫೋನ್ ಬಿಡುಗಡೆ: ಬೆಲೆ ಕೇವಲ 8,499 ರೂ.
    Image
    TRAI: ಟ್ರೂ ಕಾಲರ್​ಗೆ ಬಿಗ್ ಶಾಕ್: ಬರುತ್ತಿದೆ ಇದೇ ಮಾದರಿಯಲ್ಲಿ ಮತ್ತೊಂದು ಹೊಸ ಆ್ಯಪ್
  6. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 24 ಗಂಟೆಗಳವರೆಗೆ ವೀಡಿಯೊ ಪ್ಲೇಬ್ಯಾಕ್ ಅನ್ನು ಬೆಂಬಲಿಸುತ್ತದೆ.
  7. ಇನ್ನು ಇದರ ಜೊತೆ ಬಿಡುಗಡೆ ಆದ ಇನ್ಫಿನಿಕ್ಸ್‌ ನೋಟ್‌ 12 ಸ್ಮಾರ್ಟ್‌ಫೋನ್‌ 6.7 ಇಂಚಿನ ಫುಲ್‌ HD+ ಡಿಸ್‌ಪ್ಲೇಯನ್ನು ಹೊಂದಿದೆ. ಮೀಡಿಯಾಟೆಕ್‌ ಹಿಲಿಯೋ G88 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ.
  8. ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ನೀಡಲಾಗಿದ್ದು ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
  9. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ಫ್ಲಾಶ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi 802.11ac, ಬ್ಲೂಟೂತ್, FM ರೇಡಿಯೋ, GPS/ A-GPS, USB ಟೈಪ್-C ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ.
  10. ಇನ್ಫಿನಿಕ್ಸ್‌ ನೋಟ್‌ 12 ಸ್ಮಾರ್ಟ್‌ಫೋನ್‌ 4GB RAM + 64GB ಸ್ಟೋರೇಜ್ ಮಾದರಿಗೆ 11,499 ರೂ. ನಿಗದಿ ಮಾಡಲಾಗಿದೆ. ಅಂತೆಯೆ 6GB RAM + 128GB ಸ್ಟೋರೇಜ್ ಮಾದರಿಗೆ 12,999 ರೂ. ಬೆಲೆ ಹೊಂದಿದೆ. ಫೋರ್ಸ್ ಬ್ಲ್ಯಾಕ್, ಜ್ಯುವೆಲ್ ಬ್ಲೂ ಮತ್ತು ಸನ್‌ಸೆಟ್ ಗೋಲ್ಡ್ ಬಣ್ಣಗಳ ಆಯ್ಕೆ ನೀಡಲಾಗಿದೆ.

ತಂತ್ರಜ್ಞಾನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:47 am, Fri, 27 May 22

ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ