Kannada News Technology Infinix Note 12i 2022 goes official with a 50MP camera and 5000mAh Battery check price and full specs
Infinix Note 12i: ಅತಿ ಕಡಿಮೆ ಬೆಲೆಗೆ ಇನ್ಫಿನಿಕ್ಸ್ ನೋಟ್ 12i 2022 ಸ್ಮಾರ್ಟ್‌ಫೋನ್ ಬಿಡುಗಡೆ: ಏನು ವಿಶೇಷತೆ?
ಈ ವರ್ಷದ ಆರಂಭದಲ್ಲಿ ಇನ್ಫಿನಿಕ್ಸ್ ಮೊಬೈಲ್ ಕಂಪನಿ ಇನ್ಫಿನಿಕ್ಸ್ ನೋಟ್ 12 ಸರಣಿ ಅನಾವರಣಮಾಡಿತ್ತು. ಇದೀಗ ಈ ಸರಣಿಯಲ್ಲಿ ಮುಂದುವರೆದ ಭಾಗವಾಗಿ ಕಂಪನಿ ಹೊಸ ಇನ್ಫಿನಿಕ್ಸ್ ನೋಟ್ 12ಐ 2022 ಫೋನ್ ಬಿಡುಗಡೆ ಮಾಡಿದೆ.
infinix note 12i 2022
Follow us on
ಸ್ಮಾರ್ಟ್‌ಫೋನ್ ಕ್ಷೇತ್ರದಲ್ಲಿ ಇನ್ಫಿನಿಕ್ಸ್ (Infinix) ಕಂಪನಿ ಕಡಿಮೆ ಬೆಲೆಗೆ ಆಕರ್ಷಕ ಫೋನ್ಗಳನ್ನು ಬಿಡುಗಡೆ ಮಾಡುವುದಕ್ಕೆ ಹೆಸರುವಾಸಿ. ಇದಕ್ಕಾಗಿಯೆ ಮಾರುಕಟ್ಟೆಯಲ್ಲಿ ಈ ಕಂಪನಿ ವಿಶೇಷ ಸ್ಥಾನ ಪಡೆದುಕೊಂಡಿದೆ. ಈ ವರ್ಷದ ಆರಂಭದಲ್ಲಿ ಇನ್ಫಿನಿಕ್ಸ್ಮೊಬೈಲ್ ಕಂಪನಿ ಇನ್ಫಿನಿಕ್ಸ್ ನೋಟ್ 12 ಸರಣಿ (Infinix Note 12 series) ಅನಾವರಣಮಾಡಿತ್ತು. ಇದರಲ್ಲಿ ಇನ್ಫಿನಿಕ್ಸ್ ನೋಟ್ 12 ಮತ್ತು ಇನ್ಫಿನಿಕ್ಸ್ ನೋಟ್ 12 ಪ್ರೊ ಸ್ಮಾರ್ಟ್ಫೋನ್ಗಳಿದ್ದವು. ಇದೀಗ ಈ ಸರಣಿಯಲ್ಲಿ ಮುಂದುವರೆದ ಭಾಗವಾಗಿ ಕಂಪನಿ ಹೊಸ ಇನ್ಫಿನಿಕ್ಸ್ ನೋಟ್ 12ಐ 2022 (Infinix Note 12i 2022) ಫೋನ್ ಬಿಡುಗಡೆ ಮಾಡಿದೆ. ಇದುಕೂಡ ಒಂದು ಬಜೆಟ್ ಬೆಲೆಯ ಫೋನಾಗಿದ್ದು, ಆಕರ್ಷಕ ಫೀಚರ್ಗಳಿಂದ ಆವೃತ್ತವಾಗಿದೆ. ಸದ್ಯಕ್ಕೆ ವಿದೇಶದಲ್ಲಿ ರಿಲೀಸ್ ಆಗಿರುವ ಈ ಸ್ಮಾರ್ಟ್‌ಫೋನ್ ಭಾರತಕ್ಕೂ ಕಾಲಿಡಲಿದೆ ಎನ್ನಲಾಗಿದೆ. ಈ ಫೋನಿನ ಬೆಲೆ, ಫೀಚರ್ಸ್ ಕುರಿತ ಮಾಹಿತಿ ಇಲ್ಲಿದೆ.
ಇನ್ಫಿನಿಕ್ಸ್ ನೋಟ್ 12i 2022 ಸ್ಮಾರ್ಟ್‌ಫೋನ್ ಒಟ್ಟು ಎರಡು ಆಯ್ಕೆಯಲ್ಲಿ ಬಿಡುಗಡೆ ಆಗಿದೆ. ಇದು 4GB RAM ಮತ್ತು 64GB ಹಾಗೂ 6GB ಮತ್ತು 128GB ಇಂಟರ್ ಸ್ಟೋರೇಜ್ ಆಯ್ಕೆಯನ್ನು ಹೊಂದಿದೆ.
ಇಂಡೋನೇಷಿಯನ್ ರುಪಿಯಾ ಪ್ರಕಾರ ಈ ಫೋನಿನ ಆರಂಭಿಕ ಬೆಲೆ 2,299,000, ಭಾರತದಲ್ಲಿ ಸುಮಾರು 12,300 ರೂ. ಎನ್ನಬಹುದು.
ಇದನ್ನೂ ಓದಿ
ಈ ಫೋನ್ ಮೆಟಾವರ್ಸ್ ಬ್ಲೂ, ಫೋರ್ಸ್ ಬ್ಲ್ಯಾಕ್ ಮತ್ತು ಆಲ್ಪೈನ್ ವೈಟ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇದರಲ್ಲಿ DTS ಆಡಿಯೋದೊಂದಿಗೆ ಸ್ಟಿರಿಯೊ ಸ್ಪೀಕರ್ ಸೆಟಪ್ ಹೊಂದಿರುವುದು ವಿಶೇಷ.
ಇನ್ಫಿನಿಕ್ಸ್ ನೋಟ್ 12i 2022 ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7-ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ.
ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G85SoC ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಇದಕ್ಕೆ ಪೂರಕವಾಗಿ ಇಂಟಿಗ್ರೇಟೆಡ್ ಮಾಲಿ G52 GPU ಸಪೋರ್ಟ್ ಪಡೆದಿದ್ದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.
ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್, ಇದಲ್ಲದೆ AI ಸೆನ್ಸಾರ್ ಅನ್ನು ಹೊಂದಿದೆ.
ವಿಡಿಯೋ ಕರೆ ಮತ್ತು ಸೆಲ್ಫಿಗಳಿಗಾಗಿ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.
ಇನ್ಫಿನಿಕ್ಸ್ ನೋಟ್ 12i ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು 33W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.
ಕನೆಕ್ಟಿವಿಟಿ ಆಯ್ಕೆಗಳಲ್ಲಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್, 3.5 ಎಂಎಂ ಆಡಿಯೊ ಜಾಕ್ ಮತ್ತು ಡ್ಯುಯಲ್-ಸಿಮ್, ವೈಫೈ, ಬ್ಲೂಟೂತ್ ಮತ್ತು GPS ಸೇರಿವೆ.