AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Infinix Note 12i: ಕೇವಲ 9,999 ರೂ.: ಆಕರ್ಷಕ ಫೀಚರ್​ಗಳ ಇನ್ಫಿನಿಕ್ಸ್‌ ನೋಟ್‌ 12i ಫೋನ್ ಈಗ ಖರೀದಿಗೆ ಲಭ್ಯ

Infinix Note 12i Specs: ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್ ಮೂಲಕ ಇನ್ಫಿನಿಕ್ಸ್‌ ನೋಟ್‌ 12i ಸ್ಮಾರ್ಟ್‌ಫೋನ್‌ ಸೇಲ್ ಕಾಣುತ್ತಿದೆ. ಭಾರತದಲ್ಲಿ ಸದ್ಯಕ್ಕೆ ಒಂದು ಮಾದರಿಯಲ್ಲಷ್ಟೆ ರಿಲೀಸ್ ಆಗಿರುವ ಈ ಫೋನಿನ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯಕ್ಕೆ ಕೇವಲ 9,999 ರೂ. ರಿಲೀಸ್ ಆಗಿರುವ ಈ ಫೋನಿನ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯಕ್ಕೆ ಕೇವಲ 9,999 ರೂ.

Infinix Note 12i: ಕೇವಲ 9,999 ರೂ.: ಆಕರ್ಷಕ ಫೀಚರ್​ಗಳ ಇನ್ಫಿನಿಕ್ಸ್‌ ನೋಟ್‌ 12i ಫೋನ್ ಈಗ ಖರೀದಿಗೆ ಲಭ್ಯ
Infinix Note 12i
Vinay Bhat
| Edited By: |

Updated on:Oct 14, 2026 | 5:23 PM

Share

ಸ್ಮಾರ್ಟ್‌ಫೋನ್ ಕ್ಷೇತ್ರದಲ್ಲಿ ಇನ್ಫಿನಿಕ್ಸ್‌ (Infinix) ಕಂಪನಿ ಕಡಿಮೆ ಬೆಲೆಗೆ ಆಕರ್ಷಕ ಫೋನ್​ಗಳನ್ನು ಬಿಡುಗಡೆ ಮಾಡುವುದಕ್ಕೆ ಎತ್ತಿದ ಕೈ. ಇದಕ್ಕಾಗಿಯೆ ಮಾರುಕಟ್ಟೆಯಲ್ಲಿ ಈ ಕಂಪನಿ ವಿಶೇಷ ಸ್ಥಾನ ಪಡೆದುಕೊಂಡಿದೆ. ಕಳೆದ ವರ್ಷ ಇನ್ಫಿನಿಕ್ಸ್‌ ಮೊಬೈಲ್ ಕಂಪನಿ ಇನ್ಫಿನಿಕ್ಸ್‌ ನೋಟ್‌ 12 ಸರಣಿ (Infinix Note 12 series) ಅನಾವರಣಮಾಡಿತ್ತು. ಇದರಲ್ಲಿ ಇನ್ಫಿನಿಕ್ಸ್‌ ನೋಟ್‌ 12 ಮತ್ತು ಇನ್ಫಿನಿಕ್ಸ್‌ ನೋಟ್‌ 12 ಪ್ರೊ ಸ್ಮಾರ್ಟ್‌ಫೋನ್​ಗಳಿದ್ದವು. ಕಳೆದ ವಾರ ಈ ಸರಣಿಯಲ್ಲಿ ಮುಂದುವರೆದ ಭಾಗವಾಗಿ ಕಂಪನಿ ಹೊಸ ಇನ್ಫಿನಿಕ್ಸ್‌ ನೋಟ್‌ 12ಐ (Infinix Note 12i) ಫೋನನ್ನು ಭಾರತದಲ್ಲಿ ಬಿಡುಗಡೆ ಮಾಡಿತ್ತು. ಇದುಕೂಡ ಒಂದು ಬಜೆಟ್ ಬೆಲೆಯ ಫೋನಾಗಿದ್ದು, ಆಕರ್ಷಕ ಫೀಚರ್​ಗಳಿಂದ ಆವೃತ್ತವಾಗಿದೆ. ಈ ಫೋನ್ ಇದೀಗ ಖರೀದಿಗೆ ಸಿಗುತ್ತಿದೆ.

ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್ ಮೂಲಕ ಇನ್ಫಿನಿಕ್ಸ್‌ ನೋಟ್‌ 12i ಸ್ಮಾರ್ಟ್‌ಫೋನ್‌ ಸೇಲ್ ಕಾಣುತ್ತಿದೆ. ಭಾರತದಲ್ಲಿ ಸದ್ಯಕ್ಕೆ ಒಂದು ಮಾದರಿಯಲ್ಲಷ್ಟೆ ರಿಲೀಸ್ ಆಗಿರುವ ಈ ಫೋನಿನ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯಕ್ಕೆ ಕೇವಲ 9,999 ರೂ. ಬೆಲೆ ನಿಗದಿ ಮಾಡಲಾಗಿದೆ. ಇದು ಫೋರ್ಸ್ ಬ್ಲಾಕ್ ಮತ್ತು ಮೆಟಾವರ್ಸ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗುತ್ತಿದೆ.

ಫೀಚರ್ಸ್ ಏನು?:

ಈ ಸ್ಮಾರ್ಟ್‌ಫೋನ್‌ 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ಪಡೆದುಕೊಂಡಿದ್ದು 180Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಬೆಂಬಲಿಸುತ್ತದೆ. ಮೀಡಿಯಾಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಕ್ಯಾಮೆರಾ ಫೀಚರ್ಸ್ ಬಗ್ಗೆ ನೋಡುವುದಾದರೆ ಇದರ ಹಿಂಭಾಗದಲ್ಲಿ ತ್ರಿವಳಿ ಕ್ಯಾಮೆರಾಗಳನ್ನು ಪಡೆದುಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ f/1.6 ಅಪರ್ಚರ್ ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ QVGA ರೆಸಲ್ಯೂಶನ್‌ ಅನ್ನು ಒಳಗೊಂಡಿದೆ. ಇದರೊಂದಿಗೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಇಷ್ಟೊಂದು ಕಡಿಮೆ ಬೆಲೆಗೆ 50 ಮೆಗಾಫಿಕ್ಸೆಲ್ ಮುಖ್ಯ ಕ್ಯಾಮೆರಾ ಹೊಂದಿರುವ ಕೆಲವೇ ಮೊಬೈಲ್​ಗಳಲ್ಲಿ ಇದುಕೂಡ ಒಂದಾಗಿದೆ.

ಇನ್ನು ಸ್ಮಾರ್ಟ್‌ಫೋನ್ ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, Wi-Fi, ಬ್ಲೂಟೂತ್ 5.0, GPS ಮತ್ತು USB ಟೈಪ್-C ಪೋರ್ಟ್ ಸಪೋರ್ಟ್ ಪಡೆದುಕೊಂಡಿದೆ.

Published On - 6:56 am, Tue, 31 January 23

Follow Us
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
‘ಜೈಲರ್ 2’ ಸಿನಿಮಾನಲ್ಲಿ ನಟಿಸಿರುವ ಕನ್ನಡತಿ ಯಶಸ್ವಿನಿ ದೇವಾಡಿಗ ಜೊತೆ ಮಾತು
‘ಜೈಲರ್ 2’ ಸಿನಿಮಾನಲ್ಲಿ ನಟಿಸಿರುವ ಕನ್ನಡತಿ ಯಶಸ್ವಿನಿ ದೇವಾಡಿಗ ಜೊತೆ ಮಾತು
ಕಿಚ್ಚ ಸುದೀಪ್ ಎದುರಲ್ಲೇ ಬಿಗ್ ಬಾಸ್ ಸ್ಪರ್ಧಿಗಳ ಆರೋಪ, ಪ್ರತ್ಯಾರೋಪ
ಕಿಚ್ಚ ಸುದೀಪ್ ಎದುರಲ್ಲೇ ಬಿಗ್ ಬಾಸ್ ಸ್ಪರ್ಧಿಗಳ ಆರೋಪ, ಪ್ರತ್ಯಾರೋಪ
ಅರಮನೆ ಅಂಗಳದಲ್ಲಿ ಕನ್ನಡಾಂಬೆಗೆ ನಿತ್ಯವೂ ಪೂಜೆ; ಇತಿಹಾಸ ವಿವರಿಸಿದ ಅರ್ಚಕರು
ಅರಮನೆ ಅಂಗಳದಲ್ಲಿ ಕನ್ನಡಾಂಬೆಗೆ ನಿತ್ಯವೂ ಪೂಜೆ; ಇತಿಹಾಸ ವಿವರಿಸಿದ ಅರ್ಚಕರು
ವಿಪಕ್ಷಗಳ ಒಗ್ಗಟ್ಟು ಪ್ರದರ್ಶನ: ರ‍್ಯಾಲಿಯಲ್ಲಿ ಘಟಾನುಘಟಿ ನಾಯಕರು ಭಾಗಿ
ವಿಪಕ್ಷಗಳ ಒಗ್ಗಟ್ಟು ಪ್ರದರ್ಶನ: ರ‍್ಯಾಲಿಯಲ್ಲಿ ಘಟಾನುಘಟಿ ನಾಯಕರು ಭಾಗಿ
ಹಿರೇಮಗಳೂರು ಕೋದಂಡರಾಮ ದೇಗುಲ: ನಿತ್ಯವೂ ಕನ್ನಡದಲ್ಲೇ ಪೂಜೆ, ಮಂತ್ರಘೋಷ!
ಹಿರೇಮಗಳೂರು ಕೋದಂಡರಾಮ ದೇಗುಲ: ನಿತ್ಯವೂ ಕನ್ನಡದಲ್ಲೇ ಪೂಜೆ, ಮಂತ್ರಘೋಷ!
ದೆಹಲಿಯಲ್ಲಿ ಕನ್ನಡ ರಾಜ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಸಿದ್ದರಾಮಯ್ಯ
ದೆಹಲಿಯಲ್ಲಿ ಕನ್ನಡ ರಾಜ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಸಿದ್ದರಾಮಯ್ಯ
ಹಾಸನಾಂಬೆ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಹರಿದು ಬಂದ ಭಕ್ತರು
ಹಾಸನಾಂಬೆ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಹರಿದು ಬಂದ ಭಕ್ತರು
ಮೈಸೂರು:ಕನ್ನಡಾಂಬೆ ಭುವನೇಶ್ವರಿ ದೇಗುಲದ ಬಗ್ಗೆ ನಿಮಗೆಷ್ಟು ಗೊತ್ತು?
ಮೈಸೂರು:ಕನ್ನಡಾಂಬೆ ಭುವನೇಶ್ವರಿ ದೇಗುಲದ ಬಗ್ಗೆ ನಿಮಗೆಷ್ಟು ಗೊತ್ತು?
ಲವ್ ಮಾಡೋದು ಬಿಟ್ಟು ಆಟವಾಡು: ಸುದೀಪ್ ಎದುರಲ್ಲೇ ಸೌಂದರ್ಯಾಗೆ ಕಿರಣ್ ಟೀಕೆ
ಲವ್ ಮಾಡೋದು ಬಿಟ್ಟು ಆಟವಾಡು: ಸುದೀಪ್ ಎದುರಲ್ಲೇ ಸೌಂದರ್ಯಾಗೆ ಕಿರಣ್ ಟೀಕೆ
ಬೆಳಗಾವಿಯಲ್ಲಿ ಕಳೆಗಟ್ಟಿದ ಕನ್ನಡ ಹಬ್ಬ
ಬೆಳಗಾವಿಯಲ್ಲಿ ಕಳೆಗಟ್ಟಿದ ಕನ್ನಡ ಹಬ್ಬ