ಸ್ಮಾರ್ಟ್‌ಫೋನ್ ಕ್ಷೇತ್ರದಲ್ಲಿ ಇನ್ಫಿನಿಕ್ಸ್ (Infinix) ಕಂಪನಿ ಕಡಿಮೆ ಬೆಲೆಗೆ ಆಕರ್ಷಕ ಫೋನ್ಗಳನ್ನು ಬಿಡುಗಡೆ ಮಾಡುವುದಕ್ಕೆ ಎತ್ತಿದ ಕೈ. ಇದಕ್ಕಾಗಿಯೆ ಮಾರುಕಟ್ಟೆಯಲ್ಲಿ ಈ ಕಂಪನಿ ವಿಶೇಷ ಸ್ಥಾನ ಪಡೆದುಕೊಂಡಿದೆ. ಕಳೆದ ವರ್ಷ ಇನ್ಫಿನಿಕ್ಸ್ ಮೊಬೈಲ್ ಕಂಪನಿ ಇನ್ಫಿನಿಕ್ಸ್ ನೋಟ್ 12 ಸರಣಿ (Infinix Note 12 series) ಅನಾವರಣಮಾಡಿತ್ತು. ಇದರಲ್ಲಿ ಇನ್ಫಿನಿಕ್ಸ್ ನೋಟ್ 12 ಮತ್ತು ಇನ್ಫಿನಿಕ್ಸ್ ನೋಟ್ 12 ಪ್ರೊ ಸ್ಮಾರ್ಟ್ಫೋನ್ಗಳಿದ್ದವು. ಕಳೆದ ವಾರ ಈ ಸರಣಿಯಲ್ಲಿ ಮುಂದುವರೆದ ಭಾಗವಾಗಿ ಕಂಪನಿ ಹೊಸ ಇನ್ಫಿನಿಕ್ಸ್ ನೋಟ್ 12ಐ (Infinix Note 12i) ಫೋನನ್ನು ಭಾರತದಲ್ಲಿ ಬಿಡುಗಡೆ ಮಾಡಿತ್ತು. ಇದುಕೂಡ ಒಂದು ಬಜೆಟ್ ಬೆಲೆಯ ಫೋನಾಗಿದ್ದು, ಆಕರ್ಷಕ ಫೀಚರ್ಗಳಿಂದ ಆವೃತ್ತವಾಗಿದೆ. ಈ ಫೋನ್ ಇದೀಗ ಖರೀದಿಗೆ ಸಿಗುತ್ತಿದೆ.
ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್ ಮೂಲಕ ಇನ್ಫಿನಿಕ್ಸ್ ನೋಟ್ 12i ಸ್ಮಾರ್ಟ್‌ಫೋನ್ ಸೇಲ್ ಕಾಣುತ್ತಿದೆ. ಭಾರತದಲ್ಲಿ ಸದ್ಯಕ್ಕೆ ಒಂದು ಮಾದರಿಯಲ್ಲಷ್ಟೆ ರಿಲೀಸ್ ಆಗಿರುವ ಈ ಫೋನಿನ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯಕ್ಕೆ ಕೇವಲ 9,999 ರೂ. ಬೆಲೆ ನಿಗದಿ ಮಾಡಲಾಗಿದೆ. ಇದು ಫೋರ್ಸ್ ಬ್ಲಾಕ್ ಮತ್ತು ಮೆಟಾವರ್ಸ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗುತ್ತಿದೆ.
Best Smartphones: 20,000 ರೂ. ಒಳಗೆ ಸಿಗುತ್ತಿರುವ ಬಿಗ್ ಬ್ಯಾಟರಿಯ ಬೆಸ್ಟ್ ಸ್ಮಾರ್ಟ್ಫೋನ್ಗಳು ಇಲ್ಲಿದೆ ನೋಡಿ
ಫೀಚರ್ಸ್ ಏನು?:
ಈ ಸ್ಮಾರ್ಟ್‌ಫೋನ್ 1,080×2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಪಡೆದುಕೊಂಡಿದ್ದು 180Hz ಟಚ್ ಸ್ಯಾಂಪ್ಲಿಂಗ್ ರೇಟ್ ಬೆಂಬಲಿಸುತ್ತದೆ. ಮೀಡಿಯಾಟೆಕ್ ಹಿಲಿಯೋ G85 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.
ಕ್ಯಾಮೆರಾ ಫೀಚರ್ಸ್ ಬಗ್ಗೆ ನೋಡುವುದಾದರೆ ಇದರ ಹಿಂಭಾಗದಲ್ಲಿ ತ್ರಿವಳಿ ಕ್ಯಾಮೆರಾಗಳನ್ನು ಪಡೆದುಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ f/1.6 ಅಪರ್ಚರ್ ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ QVGA ರೆಸಲ್ಯೂಶನ್ ಅನ್ನು ಒಳಗೊಂಡಿದೆ. ಇದರೊಂದಿಗೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಇಷ್ಟೊಂದು ಕಡಿಮೆ ಬೆಲೆಗೆ 50 ಮೆಗಾಫಿಕ್ಸೆಲ್ ಮುಖ್ಯ ಕ್ಯಾಮೆರಾ ಹೊಂದಿರುವ ಕೆಲವೇ ಮೊಬೈಲ್ಗಳಲ್ಲಿ ಇದುಕೂಡ ಒಂದಾಗಿದೆ.
ಇನ್ನು ಸ್ಮಾರ್ಟ್‌ಫೋನ್ ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, Wi-Fi, ಬ್ಲೂಟೂತ್ 5.0, GPS ಮತ್ತು USB ಟೈಪ್-C ಪೋರ್ಟ್ ಸಪೋರ್ಟ್ ಪಡೆದುಕೊಂಡಿದೆ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ