Infinix Note 30 5G: ಇಂದಿನಿಂದ 108MP ಕ್ಯಾಮೆರಾದ ಈ ಫೋನ್ ಖರೀದಿಗೆ ಲಭ್ಯ: ಬೆಲೆ ಕೇವಲ 13,999ರೂ.

ಕಳೆದ ವಾರ ಇನ್ಫಿನಿಕ್ಸ್ ಕಂಪನಿ 108 ಮೆಗಾ ಪಿಕ್ಸೆಲ್ ಕ್ಯಾಮೆರಾ ಆಯ್ಕೆ ಹೊಂದಿರುವ ಇನ್ಫಿನಿಕ್ಸ್ ನೋಟ್ 30 5ಜಿ (Infinix Note 30 5G) ​ಫೋನನ್ನು ಭಾರತದಲ್ಲಿ ಅನಾವರಣ ಮಾಡಿತ್ತು. ಇದೀಗ ಇಂದಿನಿಂದ ಈ ಮೊಬೈಲ್ ಮಾರಾಟ ಕಾಣುತ್ತಿದ್ದು, ಗ್ರಾಹಕರಿಗೆ ಖರೀದಿಗೆ ಸಿಗುತ್ತಿದೆ.

Infinix Note 30 5G: ಇಂದಿನಿಂದ 108MP ಕ್ಯಾಮೆರಾದ ಈ ಫೋನ್ ಖರೀದಿಗೆ ಲಭ್ಯ: ಬೆಲೆ ಕೇವಲ 13,999ರೂ.
infinix note 30 5g
Follow us
Vinay Bhat
|

Updated on: Jun 22, 2023 | 2:11 PM

ಭಾರತದಲ್ಲಿ ಆಕರ್ಷಕ ಕ್ಯಾಮೆರಾಗಳ ಸ್ಮಾರ್ಟ್​ಫೋನ್​ಗಳು (Smartphones) ಒಂದರ ಹಿಂದೆ ಒಂದರಂತೆ ಬಿಡುಗಡೆ ಆಗುತ್ತಿದೆ. ಸ್ಯಾಮ್​ಸಂಗ್, ಒನ್​ಪ್ಲಸ್ (OnePlus), ರಿಯಲ್ ಮಿ ಕಳೆದ ಕೆಲವು ಎರಡು ತಿಂಗಳಲ್ಲಿ ಅದ್ಭುತ ಕ್ಯಾಮೆರಾಗಳ ಫೋನ್​ಗಳನ್ನು ಮಾರುಕಟ್ಟೆಗೆ ಬಿಟ್ಟಿದೆ. ಇದಕ್ಕೆ ಪೈಪೋಟಿ ನೀಡಲು ಕಳೆದ ವಾರ ಇನ್ಫಿನಿಕ್ಸ್ ಕಂಪನಿ ಕೂಡ ತನ್ನ 108 ಮೆಗಾ ಪಿಕ್ಸೆಲ್ ಕ್ಯಾಮೆರಾ ಆಯ್ಕೆ ಹೊಂದಿರುವ ಇನ್ಫಿನಿಕ್ಸ್ ನೋಟ್ 30 5ಜಿ (Infinix Note 30 5G) ಸ್ಮಾರ್ಟ್​ಫೋನನ್ನು ಭಾರತದಲ್ಲಿ ಅನಾವರಣ ಮಾಡಿತ್ತು. ಇದೀಗ ಇಂದಿನಿಂದ ಈ ಮೊಬೈಲ್ ಮಾರಾಟ ಕಾಣುತ್ತಿದ್ದು, ಗ್ರಾಹಕರಿಗೆ ಖರೀದಿಗೆ ಸಿಗುತ್ತಿದೆ. ಹಾಗಾದರೆ, ಈ ಫೋನ್​ನ ಬೆಲೆ ಎಷ್ಟು?, ಏನೆಲ್ಲ ಫೀಚರ್ಸ್ ಇದೆ? ಎಂಬುದನ್ನು ನೋಡೋಣ.

ಬೆಲೆ ಎಷ್ಟು?:

ಇನ್ಫಿನಿಕ್ಸ್‌ ನೋಟ್‌ 30 5G ಎರಡು ಸ್ಟೋರೇಜ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ. ಇದರ 4GB RAM + 128GB ಸ್ಟೋರೇಜ್ ಸಾಮರ್ಥ್ಯಕ್ಕೆ 13,999 ರೂ. ಇದೆ. ಅಂತೆಯೆ 8GB RAM + 256GB ಸ್ಟೋರೇಜ್ ಆಯ್ಕೆಗೆ ಕೇವಲ 14,999 ರೂ. ನಿಗದಿ ಮಾಡಲಾಗಿದೆ. ಇದು ಮ್ಯಾಜಿಕ್ ಬ್ಲ್ಯಾಕ್, ಇಂಟರ್‌ಸ್ಟೆಲ್ಲರ್ ಬ್ಲೂ ಮತ್ತು ಸನ್‌ಸೆಟ್ ಗೋಲ್ಡ್‌ ಕಲರ್‌ ಆಯ್ಕೆಗಳಲ್ಲಿ ಮಾರಾಟ ಕಾಣುತ್ತಿದೆ. ಇಂದು ಮೊದಲ ಸೇಲ್ ಪ್ರಯುಕ್ತ 1,000 ರೂ. ಗಳ ಆಕರ್ಷಕ ಡಿಸ್ಕೌಂಟ್ ಘೋಷಿಸಲಾಗಿದೆ.

ಇದನ್ನೂ ಓದಿ
Image
Zero Electricity Bill: ಮನೆಯ ವಿದ್ಯುತ್ ಬಿಲ್ ಕಡಿಮೆ ಬರಬೇಕೇ?: ಹಾಗಿದ್ರೆ ಹೀಗೆ ಮಾಡಿ
Image
WhatsApp Tricks: ವಾಟ್ಸ್​ಆ್ಯಪ್​ನಿಂದ ಫುಲ್ ಆಗುವ ಫೋನ್ ಸ್ಟೋರೇಜ್ ಅನ್ನು ಸರಿಪಡಿಸುವುದು ಹೇಗೆ?: ಈ ಟ್ರಿಕ್ ಫಾಲೋ ಮಾಡಿ
Image
Samsung Galaxy A73: 10 ಸಾವಿರ ರೂ. ಡಿಸ್ಕೌಂಟ್​ನಲ್ಲಿ ಲಭ್ಯ ಸ್ಯಾಮ್​ಸಂಗ್ ಸ್ಮಾರ್ಟ್​ಫೋನ್
Image
Pebble Cosmos Vogue: ಸ್ಟೈಲಿಶ್ ಆಗಿ ಬರುತ್ತಿದೆ ಹೊಸ ಪೆಬಲ್ ಸ್ಮಾರ್ಟ್​ವಾಚ್

ಕರ್ನಾಟಕದಲ್ಲಿ ಕಾವೇರಿ 2.0 ಜಾರಿ, ಆಸ್ತಿ ನೋಂದಾಣಿ ಸರಳ: ಇದು ಹೇಗೆ ಕಾರ್ಯನಿರ್ವಹಿಸುತ್ತೆ? ಇದರ ಅನುಕೂಲಗಳೇನು?

ಫೀಚರ್ಸ್ ಏನಿದೆ?:

ಇನ್ಫಿನಿಕ್ಸ್‌ ನೋಟ್‌ 30 5G ಸ್ಮಾರ್ಟ್‌ಫೋನ್‌ 1,080 x 2,460 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.78 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಆಯ್ಕೆ ನೀಡಲಾಗಿದೆ. ಇದು 120Hz ರಿಫ್ರೆಶ್​ರೇಟ್ ಹೊಂದಿದ್ದು, 240Hz ಟಚ್ ಸ್ಯಾಪ್ಲಿಂಗ್‌ ರೇಟ್‌ ಒಳಗೊಂಡಿದೆ. ಬೆಲೆಗೆ ತಕ್ಕಂತೆ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6080 SoC ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್‌ 13 ಮೂಲಕ ಕಾರ್ಯನಿರ್ವಹಿಸುತ್ತದೆ. ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 2TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾದ ಆಯ್ಕೆ ಕೂಡ ಇದೆ.

ಈ ಸ್ಮಾರ್ಟ್‌ಫೋನ್​ನ ಪ್ರಮುಖ ಹೈಲೇಟ್ ಕ್ಯಾಮೆರಾ ಆಗಿದ್ದು, ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ ಬರೋಬ್ಬರಿ 108 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಇದರಲ್ಲಿ ಫಿಲ್ಮ್ ಮೋಡ್ ಎಂಬ ವಿಶೇಷ ಆಯ್ಕೆ ಕೂಡ ಇದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಮತ್ತು ಅನಿರ್ದಿಷ್ಟ AI ಕ್ಯಾಮರಾ ಸೆನ್ಸಾರ್‌ ಅನ್ನು ಪಡೆದಿದೆ. ಇದಲ್ಲದೆ ಮುಂಭಾಗ ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಕ್ಯಾಮೆರಾವನ್ನು ಅಳವಡಿಸಲಾಗಿದೆ.

ಇನ್ಫಿನಿಕ್ಸ್‌ ನೋಟ್‌ 30 5G ಸ್ಮಾರ್ಟ್‌ಫೋನ್‌ ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದು 45W ವೈರ್ಡ್ ಚಾರ್ಜಿಂಗ್‌ ಅನ್ನು ಬೆಂಬಲಿಸುತ್ತದೆ. ಕಂಪನಿ ಹೇಳುವ ಪ್ರಕಾರ ಇದು ಕೇವಲ 30 ನಿಮಿಷಗಳಲ್ಲಿ ಶೇ. 1 ರಿಂದ 75 ರಷ್ಟು ಬ್ಯಾಟರಿ ಚಾರ್ಜ್ ಆಗುತ್ತದಂತೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ ಬೆಂಬಲ ಪಡೆದುಕೊಂಡಿದೆ. ಜೆಬಿಎಲ್‌ ಸ್ಟಿರಿಯೊ ಸ್ಪೀಕರ್‌ಗಳು, ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್, 3.55 ಎಂಎಂ ಆಡಿಯೊ ಜ್ಯಾಕ್ ಇದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು