AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Infinix Smart 6: ಮೊದಲ ಸೇಲ್ ಕಾಣುತ್ತಿದೆ ಇನ್ಫಿನಿಕ್ಸ್‌ ಸ್ಮಾರ್ಟ್‌ 6 ಸ್ಮಾರ್ಟ್‌ಫೋನ್‌: ಬೆಲೆ ಕೇವಲ 7,499 ರೂ.

ಇತ್ತೀಚೆಗಷ್ಟೆ ಇನ್ಫಿನಿಕ್ಸ್‌ ಮೊಬೈಲ್ ಕಂಪನಿ ಭಾರತದಲ್ಲಿ ತನ್ನ ಹೊಸ ಇನ್ಫಿನಿಕ್ಸ್‌ ಸ್ಮಾರ್ಟ್ 6 (Infinix Smart 6) ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿತ್ತು. ಆಕರ್ಷಕ ಫೀಚರ್ಸ್‌ಗಳಿಂದ ತುಂಬಿಕೊಂಡಿರುವ ಈ ಬಜೆಟ್ ಬೆಲೆಯ ಫೋನ್ ಇದೀಗ ಮಾರಾಟ ಕಾಣುತ್ತಿದೆ.

Infinix Smart 6: ಮೊದಲ ಸೇಲ್ ಕಾಣುತ್ತಿದೆ ಇನ್ಫಿನಿಕ್ಸ್‌ ಸ್ಮಾರ್ಟ್‌ 6 ಸ್ಮಾರ್ಟ್‌ಫೋನ್‌: ಬೆಲೆ ಕೇವಲ 7,499 ರೂ.
Infinix Smart 6
TV9 Web
| Edited By: |

Updated on:May 06, 2022 | 2:34 PM

Share

ಸ್ಮಾರ್ಟ್‌ಫೋನ್ ಕ್ಷೇತ್ರದಲ್ಲಿ ಇನ್ಫಿನಿಕ್ಸ್‌ (Infinix) ಕಂಪನಿ ಕಡಿಮೆ ಬೆಲೆಗೆ ಆಕರ್ಷಕ ಫೋನ್​ಗಳನ್ನು ಬಿಡುಗಡೆ ಮಾಡುವುದಕ್ಕಾಗಿ ಹೆಸರುವಾಸಿ. ಇದಕ್ಕಾಗಿ ಈ ವಲಯದಲ್ಲಿ ಇದು ವಿಶೇಷ ಸ್ಥಾನ ಪಡೆದುಕೊಂಡಿದೆ. ಇತ್ತೀಚೆಗಷ್ಟೆ ಇನ್ಫಿನಿಕ್ಸ್‌ ಮೊಬೈಲ್ ಕಂಪನಿ ಭಾರತದಲ್ಲಿ ತನ್ನ ಹೊಸ ಇನ್ಫಿನಿಕ್ಸ್‌ ಸ್ಮಾರ್ಟ್ 6 (Infinix Smart 6) ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿತ್ತು. ಆಕರ್ಷಕ ಫೀಚರ್ಸ್‌ಗಳಿಂದ ತುಂಬಿಕೊಂಡಿರುವ ಈ ಬಜೆಟ್ ಬೆಲೆಯ ಫೋನ್ ಇದೀಗ ಮಾರಾಟ ಕಾಣುತ್ತಿದೆ. ಪ್ರಸಿದ್ಧ ಇ ಕಾಮರ್ಸ್‌ ತಾಣವಾದ ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ ನಲ್ಲಿ ಮೊದಲ ಸೇಲ್ ಪ್ರಾರಂಭವಾಗಿದೆ. ಈ ಫೋನ್ ಹಿಂಬದಿಯಲ್ಲಿ ಡ್ಯುಯಲ್ ಕ್ಯಾಮೆರಾ ಪಡೆದಿದ್ದು, ಜೊತೆಗೆ 5,000mAh ಸಾಮರ್ಥ್ಯದ ದೀರ್ಘ ಕಾಲದ ಬ್ಯಾಟರಿಯನ್ನು ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ (Smartphone) 2 GB RAM ಮತ್ತು 32 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದಿದೆ. ಹಾಗಾದ್ರೆ ಈ ಫೋನಿನ ಬೆಲೆ, ವಿಶೇಷತೆ ಬಗ್ಗೆ ತಿಳಿದುಕೊಳ್ಳೋಣ.

ಇನ್ಫಿನಿಕ್ಸ್‌ ಸ್ಮಾರ್ಟ್‌ 6 ಸ್ಮಾರ್ಟ್‌ಫೋನ್‌ ಸದ್ಯಕ್ಕೆ ಭಾರತದಲ್ಲಿ ಒಂದು ಸ್ಟೋರೆಜ್ ಆಯ್ಕೆಯಲ್ಲಿ ಮಾತ್ರ ಖರೀದಿಗೆ ಲಭ್ಯವಿದೆ. ಇದರ 2 GB RAM + 32 GB ಇಂಟರ್‌ ಸ್ಟೋರೇಜ್‌ ಮಾದರಿಗೆ ಕೇವಲ 7,499 ರೂ. ನಿಗದಿ ಮಾಡಲಾಗಿದೆ. ಈ ಸ್ಮಾರ್ಟ್‌ಫೋನ್‌ ಹಾರ್ಟ್ ಆಫ್ ಓಷನ್, ಲೈಟ್ ಸೀ ಗ್ರೀನ್, ಪೋಲಾರ್ ಬ್ಲಾಕ್ ಮತ್ತು ಸ್ಟಾರಿ ಪರ್ಪಲ್ ಕಲರ್‌ ಆಯ್ಕೆಗಳಲ್ಲಿ ಸೇಲ್ ಆಗುತ್ತಿದೆ.

ಇದು 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ HD + ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಮೀಡಿಯಾ ಟೆಕ್ ಹಿಲಿಯೊ A22 SoC ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್‌ 11 (Go ಆವೃತ್ತಿ) ಆಧಾರಿತ XOS 7.6 ನಲ್ಲಿ ಕಾರ್ಯನಿರ್ವಹಿಸುತ್ತದೆ. ಮೆಮೊರಿ ಕಾರ್ಡ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಇನ್ಫಿನಿಕ್ಸ್‌ ಸ್ಮಾರ್ಟ್ 6 ಸ್ಮಾರ್ಟ್‌ಫೋನ್‌ ಡ್ಯುಯಲ್ AI ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ ಡಬಲ್ LED ಫ್ಲ್ಯಾಷ್‌ನೊಂದಿಗೆ ಒಳಗೊಂಡಿದೆ. ಇನ್ನು ರಿಯರ್‌ ಕ್ಯಾಮೆರಾ AI HDR, ಬ್ಯೂಟಿ ಮತ್ತು ಪೋರ್ಟ್ರೇಟ್‌ ನಂತಹ ವಿಭಿನ್ನ ಮೋಡ್‌ಗಳನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ AI ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಇನ್ಫಿನಿಕ್ಸ್‌ ಸ್ಮಾರ್ಟ್‌ 6 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಟಾಕ್ ಟೈಮ್ ಜೊತೆಗೆ 31 ಗಂಟೆಗಳ ಬ್ಯಾಟರಿ ಬಾಳಿಕೆ ಮತ್ತು 678 ಗಂಟೆಗಳ ಸ್ಟ್ಯಾಂಡ್‌ಬೈ ಬ್ಯಾಟರಿ ಬಾಳಿಕೆಯನ್ನು ನೀಡುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌ v5.0 ಅನ್ನು ಬೆಂಬಲಿಸುತ್ತದೆ. ಇದಲ್ಲದೆ DTS-HD ಸರೌಂಡ್ ಸೌಂಡ್ ಮತ್ತು ವರ್ಧಿತ ಆಡಿಯೋ ಅನುಭವಕ್ಕಾಗಿ ಬೀಜ್ 2.0 ಅನ್ನು ಅಳವಡಿಸಲಾಗಿದೆ.

ತಂತ್ರಜ್ಞಾನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:34 pm, Fri, 6 May 22

Follow Us
TV9 Web
TV9 Web

TV9 Kannada

Read More
ಜಪಾನ್‌ನಿಂದಲೇ ಆಶಾ ಕಾರ್ಯಕರ್ತೆಯರಿಗೆ ವಿಡಿಯೋ ಕಾಲ್ ಮಾಡಿದ ಸಿಎಂ!
ಜಪಾನ್‌ನಿಂದಲೇ ಆಶಾ ಕಾರ್ಯಕರ್ತೆಯರಿಗೆ ವಿಡಿಯೋ ಕಾಲ್ ಮಾಡಿದ ಸಿಎಂ!
ಜಪಾನ್ ನಗರ ಸಂಚಾರ ಮಾದರಿಗಳತ್ತ ಕರ್ನಾಟಕದ ಚಿತ್ತ
ಜಪಾನ್ ನಗರ ಸಂಚಾರ ಮಾದರಿಗಳತ್ತ ಕರ್ನಾಟಕದ ಚಿತ್ತ
ಅಂಬರೀಷ್ 8ನೇ ವರ್ಷದ ಪುಣ್ಯಸ್ಮರಣೆ; ಅಂಬಿ ಸಮಾಧಿಗೆ ವಿಶೇಷ ಪೂಜೆ
ಅಂಬರೀಷ್ 8ನೇ ವರ್ಷದ ಪುಣ್ಯಸ್ಮರಣೆ; ಅಂಬಿ ಸಮಾಧಿಗೆ ವಿಶೇಷ ಪೂಜೆ
ಬಿಜೆಪಿ ಗೆದ್ದರೆ 5 ಗ್ಯಾರಂಟಿಗಳು ವಾಪಸ್‌: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
ಬಿಜೆಪಿ ಗೆದ್ದರೆ 5 ಗ್ಯಾರಂಟಿಗಳು ವಾಪಸ್‌: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
ಸತ್ತ ಮರಿಯನ್ನೂ ಬಿಟ್ಟುಕೊಡದ ತಾಯಿ ಕೋತಿ: ಮುಂಡರಗಿಯಲ್ಲಿ ಮನಕಲಕುವ ದೃಶ್ಯ
ಸತ್ತ ಮರಿಯನ್ನೂ ಬಿಟ್ಟುಕೊಡದ ತಾಯಿ ಕೋತಿ: ಮುಂಡರಗಿಯಲ್ಲಿ ಮನಕಲಕುವ ದೃಶ್ಯ
ಸಹೋದರನ ಮದುವೆಗೆ ಹಾಜರಾಗಲು ಮಧ್ಯಂತರ ಜಾಮೀನು ಕೋರಿ ಪವಿತ್ರಾ ಗೌಡ ಅರ್ಜಿ
ಸಹೋದರನ ಮದುವೆಗೆ ಹಾಜರಾಗಲು ಮಧ್ಯಂತರ ಜಾಮೀನು ಕೋರಿ ಪವಿತ್ರಾ ಗೌಡ ಅರ್ಜಿ
ಸರ್ಕಾರಿ ಕಾರು, ಗನ್‌ಮ್ಯಾನ್ ದುರ್ಬಳಕೆ: ಗದಗ ಡಿಸಿ ವಿರುದ್ಧ ಮತ್ತೊಂದು ಆರೋಪ
ಸರ್ಕಾರಿ ಕಾರು, ಗನ್‌ಮ್ಯಾನ್ ದುರ್ಬಳಕೆ: ಗದಗ ಡಿಸಿ ವಿರುದ್ಧ ಮತ್ತೊಂದು ಆರೋಪ
ಅಭಿವೃದ್ಧಿ ಬಗ್ಗೆ ಯುವಕನ ಪ್ರಶ್ನೆಗೆ ಶಾಸಕ ಚಂದ್ರಪ್ಪ ಗರಂ: ವಿಡಿಯೋ ವೈರಲ್
ಅಭಿವೃದ್ಧಿ ಬಗ್ಗೆ ಯುವಕನ ಪ್ರಶ್ನೆಗೆ ಶಾಸಕ ಚಂದ್ರಪ್ಪ ಗರಂ: ವಿಡಿಯೋ ವೈರಲ್
ಕಾಶಿಯಿಂದ ಗುಪ್ತಗಾಮಿನಿಯಾಗಿ ಹರಿಯುತ್ತಾಳೆ ಗಂಗೆ! ಕೋಲಾರದ ಅಂತರಗಂಗೆಯ ಮಹಿಮೆ
ಕಾಶಿಯಿಂದ ಗುಪ್ತಗಾಮಿನಿಯಾಗಿ ಹರಿಯುತ್ತಾಳೆ ಗಂಗೆ! ಕೋಲಾರದ ಅಂತರಗಂಗೆಯ ಮಹಿಮೆ
ಬಿಗ್ ಬಾಸ್ ಮನೆಯಲ್ಲಿ ಗುಳ್ಳೆನರಿ ಆಟ ಶುರು; ಸ್ಪರ್ಧಿಗಳಿಗೆ ಶುರುವಾಗಿದೆ ಭಯ
ಬಿಗ್ ಬಾಸ್ ಮನೆಯಲ್ಲಿ ಗುಳ್ಳೆನರಿ ಆಟ ಶುರು; ಸ್ಪರ್ಧಿಗಳಿಗೆ ಶುರುವಾಗಿದೆ ಭಯ