ಸ್ಮಾರ್ಟ್‌ಫೋನ್ ಕ್ಷೇತ್ರದಲ್ಲಿ ಇನ್ಫಿನಿಕ್ಸ್ (Infinix) ಕಂಪನಿ ಕಡಿಮೆ ಬೆಲೆಗೆ ಆಕರ್ಷಕ ಫೋನ್ಗಳನ್ನು ಬಿಡುಗಡೆ ಮಾಡುವುದಕ್ಕಾಗಿ ಹೆಸರುವಾಸಿ. ಇದಕ್ಕಾಗಿ ಈ ವಲಯದಲ್ಲಿ ಇದು ವಿಶೇಷ ಸ್ಥಾನ ಪಡೆದುಕೊಂಡಿದೆ. ಇತ್ತೀಚೆಗಷ್ಟೆ ಇನ್ಫಿನಿಕ್ಸ್ ಮೊಬೈಲ್ ಕಂಪನಿ ಭಾರತದಲ್ಲಿ ತನ್ನ ಹೊಸ ಇನ್ಫಿನಿಕ್ಸ್ ಸ್ಮಾರ್ಟ್ 6 (Infinix Smart 6) ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿತ್ತು. ಆಕರ್ಷಕ ಫೀಚರ್ಸ್‌ಗಳಿಂದ ತುಂಬಿಕೊಂಡಿರುವ ಈ ಬಜೆಟ್ ಬೆಲೆಯ ಫೋನ್ ಇದೀಗ ಮಾರಾಟ ಕಾಣುತ್ತಿದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ ನಲ್ಲಿ ಮೊದಲ ಸೇಲ್ ಪ್ರಾರಂಭವಾಗಿದೆ. ಈ ಫೋನ್ ಹಿಂಬದಿಯಲ್ಲಿ ಡ್ಯುಯಲ್ ಕ್ಯಾಮೆರಾ ಪಡೆದಿದ್ದು, ಜೊತೆಗೆ 5,000mAh ಸಾಮರ್ಥ್ಯದ ದೀರ್ಘ ಕಾಲದ ಬ್ಯಾಟರಿಯನ್ನು ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ (Smartphone) 2 GB RAM ಮತ್ತು 32 GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದಿದೆ. ಹಾಗಾದ್ರೆ ಈ ಫೋನಿನ ಬೆಲೆ, ವಿಶೇಷತೆ ಬಗ್ಗೆ ತಿಳಿದುಕೊಳ್ಳೋಣ.
ಇನ್ಫಿನಿಕ್ಸ್ ಸ್ಮಾರ್ಟ್ 6 ಸ್ಮಾರ್ಟ್‌ಫೋನ್ ಸದ್ಯಕ್ಕೆ ಭಾರತದಲ್ಲಿ ಒಂದು ಸ್ಟೋರೆಜ್ ಆಯ್ಕೆಯಲ್ಲಿ ಮಾತ್ರ ಖರೀದಿಗೆ ಲಭ್ಯವಿದೆ. ಇದರ 2 GB RAM + 32 GB ಇಂಟರ್ ಸ್ಟೋರೇಜ್ ಮಾದರಿಗೆ ಕೇವಲ 7,499 ರೂ. ನಿಗದಿ ಮಾಡಲಾಗಿದೆ. ಈ ಸ್ಮಾರ್ಟ್‌ಫೋನ್ ಹಾರ್ಟ್ ಆಫ್ ಓಷನ್, ಲೈಟ್ ಸೀ ಗ್ರೀನ್, ಪೋಲಾರ್ ಬ್ಲಾಕ್ ಮತ್ತು ಸ್ಟಾರಿ ಪರ್ಪಲ್ ಕಲರ್ ಆಯ್ಕೆಗಳಲ್ಲಿ ಸೇಲ್ ಆಗುತ್ತಿದೆ.
ಇದು 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6 ಇಂಚಿನ HD + ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಮೀಡಿಯಾ ಟೆಕ್ ಹಿಲಿಯೊ A22 SoC ಪ್ರೊಸೆಸರ್ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 11 (Go ಆವೃತ್ತಿ) ಆಧಾರಿತ XOS 7.6 ನಲ್ಲಿ ಕಾರ್ಯನಿರ್ವಹಿಸುತ್ತದೆ. ಮೆಮೊರಿ ಕಾರ್ಡ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.
ಇನ್ಫಿನಿಕ್ಸ್ ಸ್ಮಾರ್ಟ್ 6 ಸ್ಮಾರ್ಟ್‌ಫೋನ್ ಡ್ಯುಯಲ್ AI ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ ಡಬಲ್ LED ಫ್ಲ್ಯಾಷ್‌ನೊಂದಿಗೆ ಒಳಗೊಂಡಿದೆ. ಇನ್ನು ರಿಯರ್ ಕ್ಯಾಮೆರಾ AI HDR, ಬ್ಯೂಟಿ ಮತ್ತು ಪೋರ್ಟ್ರೇಟ್ ನಂತಹ ವಿಭಿನ್ನ ಮೋಡ್‌ಗಳನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ AI ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
ಇನ್ಫಿನಿಕ್ಸ್ ಸ್ಮಾರ್ಟ್ 6 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಟಾಕ್ ಟೈಮ್ ಜೊತೆಗೆ 31 ಗಂಟೆಗಳ ಬ್ಯಾಟರಿ ಬಾಳಿಕೆ ಮತ್ತು 678 ಗಂಟೆಗಳ ಸ್ಟ್ಯಾಂಡ್‌ಬೈ ಬ್ಯಾಟರಿ ಬಾಳಿಕೆಯನ್ನು ನೀಡುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್ v5.0 ಅನ್ನು ಬೆಂಬಲಿಸುತ್ತದೆ. ಇದಲ್ಲದೆ DTS-HD ಸರೌಂಡ್ ಸೌಂಡ್ ಮತ್ತು ವರ್ಧಿತ ಆಡಿಯೋ ಅನುಭವಕ್ಕಾಗಿ ಬೀಜ್ 2.0 ಅನ್ನು ಅಳವಡಿಸಲಾಗಿದೆ.
ತಂತ್ರಜ್ಞಾನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:34 pm, Fri, 6 May 22