Infinix Note 30 5G: ಭಾರತಕ್ಕೆ ಬರುತ್ತಿದೆ 108MP ಕ್ಯಾಮೆರಾದ ಮತ್ತೊಂದು ಸ್ಮಾರ್ಟ್​ಫೋನ್: ಯಾವುದು?, ಬೆಲೆ ಎಷ್ಟು ನೋಡಿ

ಇನ್ಫಿನಿಕ್ಸ್ ಕಂಪನಿ ತನ್ನ ಹೊಸ ಇನ್ಫಿನಿಕ್ಸ್‌ ನೋಟ್‌ 30 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಲು ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಇದೇ ಜೂನ್ 14 ರಂದು ಲಾಂಚ್‌ ಆಗಲಿದೆ.

Infinix Note 30 5G: ಭಾರತಕ್ಕೆ ಬರುತ್ತಿದೆ 108MP ಕ್ಯಾಮೆರಾದ ಮತ್ತೊಂದು ಸ್ಮಾರ್ಟ್​ಫೋನ್: ಯಾವುದು?, ಬೆಲೆ ಎಷ್ಟು ನೋಡಿ
Infinix Note 30 5G
Follow us
Vinay Bhat
|

Updated on:Jun 11, 2023 | 2:15 PM

ಭಾರತದಲ್ಲಿ ಕ್ಯಾಮೆರಾ ಸ್ಮಾರ್ಟ್​ಫೋನ್​ಗಳ (Smartphones) ಹಾವಳಿ ಭರ್ಜರಿ ಆಗಿದೆ. ನಿರಂತರವಾಗಿ ಆಕರ್ಷಕ ಕ್ಯಾಮೆರಾ ಫೋನ್​ಗಳು ಬಿಡುಗಡೆ ಆಗುತ್ತಿದೆ. ಇದೀಗ ಇನ್ಫಿನಿಕ್ಸ್ (Infinix) ಸರದಿ. ಬಜೆಟ್ ಬೆಲೆಗೆ ಆಕರ್ಷಕ ಮೊಬೈಲ್​ಗಳನ್ನು ಬಿಡುಗಡೆ ಮಾಡಿ ಹೆಸರುವಾಸಿ ಆಗಿರುವ ಪ್ರಸಿದ್ಧ ಇನ್ಫಿನಿಕ್ಸ್ ಕಂಪನಿ ತನ್ನ ಹೊಸ ಇನ್ಫಿನಿಕ್ಸ್‌ ನೋಟ್‌ 30 5G (Infinix Note 30 5G ) ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಲು ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಇದೇ ಜೂನ್ 14 ರಂದು ಲಾಂಚ್‌ ಆಗಲಿದೆ. ಈ ಬಗ್ಗೆ ಕಂಪನಿ ಅಧಿಕೃತ ಮಾಹಿತಿ ಹೊರಹಾಕಿದೆ. ವಿಶೇಷ ಎಂದರೆ, ಈ ಫೋನ್ ಬರೋಬ್ಬರಿ 108 ಮೆಗಾಫಿಕ್ಸೆಲ್ ಕ್ಯಾಮೆರಾದ ಆಯ್ಕೆಯನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಕೂಡ ನೀಡಲಾಗಿದೆ.

ಈ ಸ್ಮಾರ್ಟ್​ಫೋನ್​ನ ಬೆಲೆ ಎಷ್ಟಿರಬಹುದು ಎಂಬುದು ಇನ್ನೂ ಬಹಿರಂಗವಾಗಿಲ್ಲ. ಮೂಲಗಳ ಪ್ರಕಾರ 15,000 ರೂ. ಆಸುಪಾಸಿನಲ್ಲಿ ಇರಬಹುದು. 4GB RAM + 128GB ಹಾಗೂ 8GB RAM + 256GB ಸ್ಟೋರೇಜ್ ಆಯ್ಕೆಯಲ್ಲಿ ಅನಾವರಣಗೊಳ್ಳಲಿದೆ. ಇದು ನೀಲಿ, ಕಪ್ಪು ಮತ್ತು ಗೋಲ್ಡ್ ಬಣ್ಣಗಳಲ್ಲಿ ಖರೀದಿಗೆ ಸಿಗಲಿದೆ.

Asus Zenfone 10: ಗೇಮಿಂಗ್ ಪ್ರಿಯರಿಗೆ ಸಂತಸದ ಸುದ್ದಿ: ಬರುತ್ತಿದೆ ಸ್ನ್ಯಾಪ್‌ಡ್ರಾಗನ್‌ 8 ಜೆನ್‌ 2 ಪ್ರೊಸೆಸರ್​​ನ ಹೊಸ ಫೋನ್

ಇದನ್ನೂ ಓದಿ
Image
Tech Tips: ನಿಮ್ಮ ಫೇಸ್​ಬುಕ್ ಪ್ರೊಫೈಲ್ ಯಾರೆಲ್ಲ ನೋಡುತ್ತಿದ್ದಾರೆಂದು ತಿಳಿಯಬೇಕೆ?: ಇಲ್ಲಿದೆ ಟ್ರಿಕ್
Image
Realme 11 Pro+ 5G: 200 ಮೆಗಾಪಿಕ್ಸೆಲ್ ಕ್ಯಾಮೆರಾ ರಿಯಲ್​ಮಿ ಸೂಪರ್ ಸ್ಮಾರ್ಟ್​ಫೋನ್ ಬಿಡುಗಡೆ
Image
OnePlus 10R 5G: ಒನ್​ಪ್ಲಸ್ ಹೊಸ ಸ್ಮಾರ್ಟ್​ಫೋನ್​ ಮೇಲೆ 10 ಸಾವಿರ ಡಿಸ್ಕೌಂಟ್ ಆಫರ್!
Image
Itel S23: 50MP ಕ್ಯಾಮೆರಾ, 5000mAh ಬ್ಯಾಟರಿ: ಕೇವಲ 8,799 ರೂ. ಗೆ ಬಿಡುಗಡೆ ಆಯಿತು ಹೊಸ ಸ್ಮಾರ್ಟ್​​ಫೋನ್

ಫೀಚರ್ಸ್ ಏನಿದೆ?:

ಇನ್ಫಿನಿಕ್ಸ್‌ ನೋಟ್‌ 30 5G ಸ್ಮಾರ್ಟ್‌ಫೋನ್‌ 1,080×2,460 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.78 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 240Hz ಟಚ್ ಸ್ಯಾಪ್ಲಿಂಗ್‌ ರೇಟ್‌ ಮತ್ತು 580 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್​ನಿಂದ ಕೂಡಿದೆ. ಬಲಿಷ್ಠವಾದ ಮೀಡಿಯಾ ಟೆಕ್ ಡೈಮೆನ್ಸಿಟಿ 6080 SoC ಪ್ರೊಸೆಸರ್‌ ವೇಗವನ್ನು ಹೊಂದಿರಲಿದ್ದು, ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಈ ಸ್ಮಾರ್ಟ್‌ಫೋನ್​ನ ಮತ್ತೊಂದು ಹೈಲೇಟ್ ಕ್ಯಾಮೆರಾ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್​ನಿಂದ ಕೂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ ಬರೋಬ್ಬರಿ 108 ಮೆಗಾಪಿಕ್ಸೆಲ್ ಸೆನ್ಸಾರ್​ನದ್ದಾಗಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು AI ಕ್ಯಾಮರಾ ಸೆನ್ಸಾರ್‌ ಅನ್ನು ಒಳಗೊಂಡಿದೆ. ಮುಂಭಾಗ ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಕ್ಯಾಮೆರಾವನ್ನು ಅಳವಡಿಸಲಾಗಿದೆ.

ಇನ್ಫಿನಿಕ್ಸ್‌ ನೋಟ್‌ 30 5G ಸ್ಮಾರ್ಟ್‌ಫೋನ್‌ 45W ವೈರ್ಡ್ ಚಾರ್ಜಿಂಗ್‌ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಕಂಪನಿ ಹೇಳುವ ಪ್ರಕಾರ ಇದು ಕೇವಲ 30 ನಿಮಿಷಗಳಲ್ಲಿ 1% ಯಿಂದ 75% ಬ್ಯಾಟರಿ ಚಾರ್ಜ್ ಮಾಡುತ್ತಂತೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಫೋನ್ 5ಜಿ ಬೆಂಬಲ ಪಡೆದುಕೊಂಡಿದೆ. ಇದರೊಂದಿಗೆ JBL ಸ್ಟಿರಿಯೊ ಸ್ಪೀಕರ್‌ಗಳು, ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್, 3.55 ಎಂಎಂ ಆಡಿಯೋ ಜ್ಯಾಕ್ ನೀಡಲಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:12 pm, Sun, 11 June 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್