Infinix Smart 6: ಅತಿ ಕಡಿಮೆ ಬೆಲೆಗೆ ಬಿಡುಗಡೆ ಆಯ್ತು ಮತ್ತೊಂದು ಆಕರ್ಷಕ ಸ್ಮಾರ್ಟ್‌ಫೋನ್: ಇಲ್ಲಿದೆ ಮಾಹಿತಿ
ಇನ್ಪಿನಿಕ್ಸ್ ಸ್ಮಾರ್ಟ್ 6 ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6-ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. 16 ಮಿಲಿಯನ್ ಕಲರ್ ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿರುವುದು ವಿಶೇಷ.
ಸ್ಮಾರ್ಟ್‌ಫೋನ್ ಕ್ಷೇತ್ರದಲ್ಲಿ ಇನ್ಫಿನಿಕ್ಸ್ (Infinix) ಕಂಪನಿ ಕಡಿಮೆ ಬೆಲೆಗೆ ಆಕರ್ಷಕ ಫೋನ್ಗಳನ್ನು ಬಿಡುಗಡೆ ಮಾಡುವುದಕ್ಕಾಗಿ ಹೆಸರುವಾಸಿ. ಇದಕ್ಕಾಗಿ ಈ ವಲಯದಲ್ಲಿ ಇದು ವಿಶೇಷ ಸ್ಥಾನ ಪಡೆದುಕೊಂಡಿದೆ. ಸದ್ಯ ಇದೇ ಹಾದಿಯಲ್ಲಿ ಹೊಸ ಇನ್ಪಿನಿಕ್ಸ್ ಸ್ಮಾರ್ಟ್ 6 (Infinix Smart 6) ಫೋನ್ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಅತ್ಯುತ್ತಮ ಡಿಸ್‌ಪ್ಲೇ, ಬಲಿಷ್ಠ ಬ್ಯಾಟರಿ, ಯುನಿಸಾಕ್ ಪ್ರೊಸೆಸರ್ ಸೇರಿದಂತೆ ಅನೇಕ ಆಕರ್ಷಕ ಫೀಚರ್ಗಳಿಂದ ಕೂಡಿದೆ.
ಸದ್ಯಕ್ಕೆ ಇನ್ಫಿನಿಕ್ಸ್ ಸ್ಮಾರ್ಟ್ 6 ಸ್ಮಾರ್ಟ್‌ಫೋನ್ ಒಂದು ಮಾದರಿಯಲ್ಲಷ್ಟೆ ಬಿಡುಗಡೆ ಆಗಿದೆ. 2GB RAM ಮತ್ತು 32GB ಸ್ಟೋರೇಜ್ ಮಾದರಿಯ ಬೆಲೆ $120 ಭಾರತದಲ್ಲಿ ಅಂದಾಜು 9,000 ರೂ. ಅನ್ನು ಇದು ಹೊಂದಿದೆ. ಸದ್ಯ ಈ ಸ್ಮಾರ್ಟ್‌ಫೋನ್ ಅನ್ನು ಸೀಮಿತ ಮಾರುಕಟ್ಟೆಗಳಲ್ಲಿ ಬಿಡುಗಡೆ ಮಾಡಿದೆ.
ಇನ್ಪಿನಿಕ್ಸ್ ಸ್ಮಾರ್ಟ್ 6 ಫೋನ್ 720×1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6-ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. 16 ಮಿಲಿಯನ್ ಕಲರ್ ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿರುವುದು ವಿಶೇಷ. ಯುನಿಸಾಕ್ SC9863A ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 (ಗೋ ಆವೃತ್ತಿ) ಆಧಾರಿತ XOS 7.6 ನಲ್ಲಿ ಕಾರ್ಯನಿರ್ವಹಿಸುತ್ತದೆ.
ಇನ್ನು ಈ ಸ್ಮಾರ್ಟ್‌ಫೋನ್ ಡ್ಯುಯಲ್ ಹಿಂಬದಿಯ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಎರಡನೇ ಕ್ಯಾಮೆರಾ 0.08 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ ಸೆಲ್ಫಿಗಳು ಮತ್ತು ವೀಡಿಯೊ ಕರೆಗಾಗಿ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.
5,000mAh ಸಾಮರ್ಥ್ಯದ ಬಲಿಷ್ಠ ಬ್ಯಾಟರಿ ಬ್ಯಾಕಪ್ ಹೊಂದಿದ್ದು, ಇದಕ್ಕೆ ಪೂರಕವಾಗಿ 10W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಈ ಬ್ಯಾಟರಿಯು 31 ಗಂಟೆಗಳ ಟಾಕ್ ಟೈಮ್ ಮತ್ತು 678 ಗಂಟೆಗಳ ಸ್ಟ್ಯಾಂಡ್‌ಬೈ ಟೈಂ ನೀಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಯಲ್ಲಿ ಮೈಕ್ರೋ-USB ಪೋರ್ಟ್, 3.5 ಹೆಡ್‌ಫೋನ್ ಜ್ಯಾಕ್ ಮತ್ತು ಬ್ಲೂಟೂತ್ ಅನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಹೊಂದಿದೆ. ಇದು ಫೇಸ್ ಐಡಿಗೆ ಬೆಂಬಲವನ್ನು ನೀಡುತ್ತದೆ.
(Infinix Smart 6 The latest budget-friendly phone from Infinix Smart 6 has been launched)