ಭಾರತೀಯ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಬಜೆಟ್ ಬೆಲೆಯ ಫೋನುಗಳಿಗೆ (Budget Smartphone) ಎಲ್ಲಿಲ್ಲದ ಬೇಡಿಕೆ. ಕಳೆದ ವರ್ಷ 15,000, 10,000 ರೂ. ಗೆ ಆಕರ್ಷಕ ಫೀಚರ್ಗಳ ಫೋನ್ಗಳು ಬಿಡುಗಡೆ ಆಗುತ್ತಿದ್ದರೆ ಈ ವರ್ಷ ಇನ್ನಷ್ಟು ಕಡಿಮೆ ದರಕ್ಕೆ ಮೊಬೈಲ್ ಲಾಂಚ್ ಆಗುತ್ತಿದೆ. ಈ ರೀತಿಯ ಫೋನ್ಗಳನ್ನು ಬಿಡುಗಡೆ ಮಾಡುವುದರಲ್ಲಿ ಇನ್ಫಿನಿಕ್ಸ್ (Infinix) ಎತ್ತಿದ ಕೈ. ಈಗಾಗಲೇ ಬಜೆಟ್ ಬೆಲೆಗೆ ಅನೇಕ ಆಕರ್ಷಕ ಫೋನ್ಗಳನ್ನು ಅನಾವರಣ ಮಾಡಿ ಯಶಸ್ಸು ಕಂಡಿರುವ ಸಂಸ್ಥೆ ಕಳೆದ ವಾರ ಭಾರತದಲ್ಲಿ ಹೊಸದಾಗಿ ಇನ್ಫಿನಿಕ್ಸ್ ಸ್ಮಾರ್ಟ್ 7 ಹೆಚ್ಡಿ (Infinix Smart 7 HD) ಸ್ಮಾರ್ಟ್‌ಫೋನ್ ಅನ್ನು ರಿಲೀಸ್ ಮಾಡಿತ್ತು. ಇದೀಗ ಈ ಫೋನ್ ಖರೀದಿಗೆ ಸಿಗುತ್ತಿದೆ. ಈ ಫೋನಿನ ವಿಶೇಷತೆ ಏನು? ಬೆಲೆ ಎಷ್ಟು? ಎಂಬ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.
ಬೆಲೆ ಎಷ್ಟು?
ಇನ್ಫಿನಿಕ್ಸ್ ಸ್ಮಾರ್ಟ್ 7 HD ಸ್ಮಾರ್ಟ್‌ಫೋನ್ ಭಾರತದಲ್ಲಿ ಒಂದು ಸ್ಟೋರೆಜ್ ಆಯ್ಕೆಯಲ್ಲಿ ಮಾತ್ರ ಬಿಡುಗಡೆ ಆಗಿತ್ತು. ಇದರ 2GB RAM + 64GB ಇಂಟರ್ ಸ್ಟೋರೇಜ್ ಮಾದರಿಗೆ ಕೇವಲ 5,999 ರೂ. ನಿಗದಿ ಮಾಡಲಾಗಿದೆ. ಈ ಸ್ಮಾರ್ಟ್‌ಫೋನ್ ಇಂದಿನಿಂದ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್ಕಾರ್ಟ್ನಲ್ಲಿ ಖರೀದಿಗೆ ಸಿಗಲಿದೆ. ಇಂಕ್ ಬ್ಲಾಕ್, ಜೇಡ್ ವೈಟ್ ಮತ್ತು ಸಿಲ್ಕ್ ಬ್ಲಾಕ್ ಬಣ್ಣಗಳಲ್ಲಿ ಲಭ್ಯವಿದೆ. ಫ್ಲಿಪ್ಕಾರ್ಟ್ ಆ್ಯಕ್ಸಿಸ್ ಬ್ಯಾಂಕ್ ಕಾರ್ಡ್ ಮೂಲಕ ಖರೀದಿಸಿದರೆ ಶೇ. 5 ರಷ್ಟು ಕ್ಯಾಶ್ಬ್ಯಾಕ್ ಆಫರ್ ಸಿಗಲಿದೆ.
ಏನಿದೆ ಫೀಚರ್ಸ್?:
ಇನ್ಫಿನಿಕ್ಸ್ ಸ್ಮಾರ್ಟ್ 7 HD ಫೋನ್ 720 x 1612 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6 ಇಂಚಿನ ಫುಲ್ HD + ಐಪಿಎಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 60Hz ರಿಫ್ರೆಶ್ರೇಟ್ ಅನ್ನು ಒಳಗೊಂಡಿದೆ. 120Hz ಟಚಿಂಗ್ ಸ್ಯಾಂಪಲ್ ರೇಟ್ ಇದೆ. ಆಕ್ಟಾ-ಕೋರ್ ಯುನಿಸಾಕ್ SC9863A1 ಪ್ರೊಸೆಸರ್ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 12 ಆಧಾರಿತ XOS 12 ನಲ್ಲಿ ಕಾರ್ಯನಿರ್ವಹಿಸುತ್ತದೆ. ಮೆಮೊರಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.
ಈ ಸ್ಮಾರ್ಟ್‌ಫೋನ್ ಡ್ಯುಯಲ್ AI ಡ್ಯುಯೆಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ನಲ್ಲಿದೆ. ಜೊತೆಗೆ ಡಬಲ್ LED ಫ್ಲ್ಯಾಷ್ ಒಳಗೊಂಡಿದೆ. ಇದು ಬ್ಯೂಟಿ ಮತ್ತು ಪೋರ್ಟ್ರೇಟ್ ನಂತಹ ವಿಭಿನ್ನ ಮೋಡ್‌ಗಳನ್ನು ಹೊಂದಿದೆ. ಮುಂಭಾಗ ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ 5 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಅಳವಡಿಸಲಾಗಿದ್ದು ಇದುಕೂಡ LED ಫ್ಲ್ಯಾಷ್ನಿಂದ ಕೂಡಿದೆ.
ಇನ್ಫಿನಿಕ್ಸ್ ಸ್ಮಾರ್ಟ್ 7 HD ಸ್ಮಾರ್ಟ್ಫೋನ್ನ ಮತ್ತೊಂದು ಪ್ರಮುಖ ಹೈಲೇಟ್ ಬ್ಯಾಟರ್ ಆಗಿದ್ದು, ಇದು 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಎಷ್ಟು ವೋಲ್ಟ್ ವೇಗದ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ ಎಂಬುದು ತಿಳಿದುಬಂದಿಲ್ಲ. ಈ ಬ್ಯಾಟರಿಯನ್ನು ಒಮ್ಮೆ ಫುಲ್ ಚಾರ್ಜ್ ಮಾಡಿದರೆ 30 ದಿನಗಳ ಸ್ಟ್ಯಾಂಡ್ ಬೈ ಟೈಮ್ ನೀಡಲಿದ್ದು, 50 ಗಂಟೆಗಳ ಕಾಲ ಬ್ಯೂಸಿಕ್ ಪ್ಲೇಬ್ಯಾಕ್ ಸಮಯ ಮತ್ತು 39 ಗಂಟೆಗಳ ಕಾಲ ಕರೆಯಲ್ಲಿ ಮಾತನಾಡಬಹುದು ಎಂದು ಕಂಪನಿ ಹೇಳಿಕೊಂಡಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ಹಾಟ್‌ಸ್ಪಾಟ್, ಬ್ಲೂಟೂತ್ 4.2, GPS ಅನ್ನು ಬೆಂಬಲಿಸುತ್ತದೆ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ