50MP ಡ್ಯುಯಲ್ ಕ್ಯಾಮೆರಾ, 6000mAh ಬ್ಯಾಟರಿ: 6,999 ರೂ. ವಿನ ಈ ಫೋನ್ ಖರೀದಿಗೆ ಕ್ಯೂ ಗ್ಯಾರಂಟಿ

|

Updated on: Mar 02, 2024 | 12:04 PM

ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ನಲ್ಲಿನ ಡ್ಯುಯಲ್ ರಿಯರ್ ಕ್ಯಾಮೆರಾ ಘಟಕವು 50-ಮೆಗಾಪಿಕ್ಸೆಲ್ ಪ್ರಾಥಮಿಕ ಸಂವೇದಕ ಮತ್ತು ಕ್ವಾಡ್-LED ರಿಂಗ್ ಫ್ಲ್ಯಾಶ್ ಘಟಕದ ಜೊತೆಗೆ AI-ಬೆಂಬಲಿತ ಸಂವೇದಕವನ್ನು ಒಳಗೊಂಡಿದೆ. ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್ ಮೂಲಕ ಮಾರ್ಚ್ 9 ರಿಂದ ದೇಶದಲ್ಲಿ ಇದು ಮಾರಾಟವಾಗಲಿದೆ.

50MP ಡ್ಯುಯಲ್ ಕ್ಯಾಮೆರಾ, 6000mAh ಬ್ಯಾಟರಿ: 6,999 ರೂ. ವಿನ ಈ ಫೋನ್ ಖರೀದಿಗೆ ಕ್ಯೂ ಗ್ಯಾರಂಟಿ
Infinix Smart 8 Plus
Follow us on

ಬಜೆಟ್ ಬೆಲೆಗೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುವುದರಲ್ಲಿ ಪ್ರಸಿದ್ಧ ಇನ್ಫಿನಿಕ್ಸ್ ಕಂಪನಿ ಎತ್ತಿದ ಕೈ. ಈಗ ಇದೇ ಸಾಲಿನಲ್ಲಿ ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ (infinix smart 8 plus) ಎಂಬ ಫೋನನ್ನು ಕಂಪನಿ ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಫೋನ್ ಬೆಲೆ ಅತಿ ಕಡಿಮೆಯಾಗಿದ್ದರೂ, ಇದರಲ್ಲಿ ಆಕ್ಟಾ-ಕೋರ್ ಮೀಡಿಯಾಟೆಕ್ ಹಿಲಿಯೊ ಚಿಪ್‌ಸೆಟ್ ಮತ್ತು ದೊಡ್ಡ ಬ್ಯಾಟರಿಯೊಂದಿಗೆ ಬರುತ್ತದೆ. ಅಲ್ಲದೆ AI ಬೆಂಬಲಿತ ಡ್ಯುಯಲ್ ಹಿಂಬದಿಯ ಕ್ಯಾಮೆರಾಗಳು ಮತ್ತು ಕಂಪನಿಯ ಮ್ಯಾಜಿಕ್ ರಿಂಗ್ ವೈಶಿಷ್ಟ್ಯವನ್ನು ಹೊಂದಿದೆ. ಹಾಗಾದರೆ ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಸ್ಮಾರ್ಟ್​ಫೋನ್​ನ ಬೆಲೆ ಎಷ್ಟು?, ಏನೆಲ್ಲ ಫೀಚರ್ಸ್ ಇವೆ ಎಂಬುದನ್ನು ನೋಡೋಣ.

ಭಾರತದಲ್ಲಿ ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಬೆಲೆ, ಲಭ್ಯತೆ:

ಗ್ಯಾಲಕ್ಸಿ ವೈಟ್, ಶೈನಿ ಗೋಲ್ಡ್ ಮತ್ತು ಟಿಂಬರ್ ಬ್ಲಾಕ್ ಬಣ್ಣಗಳಲ್ಲಿ ನೀಡಲಾದ ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಭಾರತದಲ್ಲಿ ಸದ್ಯಕ್ಕೆ ಏಕೈಕ 4GB + 128GB ಆಯ್ಕೆಯಲ್ಲಿ ಮಾತ್ರ ರಿಲೀಸ್ ಆಗಿದೆ. ಇದರ ಬೆಲೆ ಕೇವಲ 7,999ರೂ.. ಈ ಫೋನ್ ಅನ್ನು ಬ್ಯಾಂಕ್ ಕೊಡುಗೆಗಳೊಂದಿಗೆ 6,999 ರೂ. ಗೆ ಖರೀದಿಸಬಹುದು. ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್ ಮೂಲಕ ಮಾರ್ಚ್ 9 ರಿಂದ ದೇಶದಲ್ಲಿ ಇದು ಮಾರಾಟವಾಗಲಿದೆ.

ನೋಕಿಯಾದ ಸ್ಟೈಲಿಶ್ ಸ್ಮಾರ್ಟ್​ಫೋನ್ G42 5G ಹೊಸ ವೇರಿಯೆಂಟ್​ನಲ್ಲಿ ರಿಲೀಸ್: ಬೆಲೆ 9999 ರೂ.

ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಫೀಚರ್ಸ್:

ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಸ್ಮಾರ್ಟ್​ಫೋನ್ 6.6-ಇಂಚಿನ HD+ (1,612 x 720 ಪಿಕ್ಸೆಲ್‌ಗಳು) ಡಿಸ್‌ಪ್ಲೇ ಜೊತೆಗೆ 90Hz ರಿಫ್ರೆಶ್ ರೇಟ್, 180Hz ಟಚ್ ಸ್ಯಾಂಪ್ಲಿಂಗ್ ದರ ಮತ್ತು 500 nits ಗರಿಷ್ಠ ಬ್ರೈಟ್‌ನೆಸ್ ಮಟ್ಟವನ್ನು ಹೊಂದಿದೆ. ಇದು 4GB ಯ LPDDR4x RAM ಮತ್ತು 128GB ಆನ್‌ಬೋರ್ಡ್ ಸಂಗ್ರಹಣೆಯೊಂದಿಗೆ 12nm ಮೀಡಿಯಾಟೆಕ್ ಹಿಲಿಯೊ G36 SoC ಅನ್ನು ಹೊಂದಿದೆ. RAM ಅನ್ನು ವಾಸ್ತವಿಕವಾಗಿ ಹೆಚ್ಚುವರಿ 4GB ವರೆಗೆ ವಿಸ್ತರಿಸಬಹುದಾಗಿದೆ, ಸಂಗ್ರಹಣೆಯನ್ನು ಮೈಕ್ರೊ SD ಕಾರ್ಡ್ ಮೂಲಕ 2TB ವರೆಗೆ ವಿಸ್ತರಿಸಬಹುದು. ಇದು ಆಂಡ್ರಾಯ್ಡ್ 13 Go ಆವೃತ್ತಿ ಆಧಾರಿತ XOS 13 ನೊಂದಿಗೆ ರನ್ ಆಗುತ್ತದೆ.

ಕ್ಯಾಮೆರಾ ವಿಚಾರಕ್ಕೆ ಬಂದರೆ, ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ನಲ್ಲಿನ ಡ್ಯುಯಲ್ ರಿಯರ್ ಕ್ಯಾಮೆರಾ ಘಟಕವು 50-ಮೆಗಾಪಿಕ್ಸೆಲ್ ಪ್ರಾಥಮಿಕ ಸಂವೇದಕ ಮತ್ತು ಕ್ವಾಡ್-LED ರಿಂಗ್ ಫ್ಲ್ಯಾಶ್ ಘಟಕದ ಜೊತೆಗೆ AI-ಬೆಂಬಲಿತ ಸಂವೇದಕವನ್ನು ಒಳಗೊಂಡಿದೆ. ಅಂತೆಯೆ 8-ಮೆಗಾಪಿಕ್ಸೆಲ್ ಮುಂಭಾಗದ ಕ್ಯಾಮೆರಾ ಸಂವೇದಕವನ್ನು ಡಿಸ್​ಪ್ಲೇಯ ಮೇಲ್ಭಾಗದಲ್ಲಿ ನೀಡಲಾಗಿದೆ. ಈ ಫೋನ್ ಇನ್ಫಿನಿಕ್ಸ್‌ನ ಮ್ಯಾಜಿಕ್ ರಿಂಗ್ ಅನ್ನು ಸಹ ಬೆಂಬಲಿಸುತ್ತದೆ, ಇದು ಆ್ಯಪಲ್‌ನ ಡೈನಾಮಿಕ್ ಐಲ್ಯಾಂಡ್‌ನಂತೆಯೇ ಇದೆ.

67W SuperVOOC ಚಾರ್ಜರ್, ಬಲಿಷ್ಠ ಪ್ರೊಸೆಸರ್: ರಿಯಲ್ ಮಿ 12+ 5G ಫೋನ್ ಬಿಡುಗಡೆ

ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ 18W ವೈರ್ಡ್ ಫಾಸ್ಟ್ ಚಾರ್ಜಿಂಗ್‌ಗೆ ಬೆಂಬಲದೊಂದಿಗೆ 6,000mAh ಬ್ಯಾಟರಿಯನ್ನು ಪ್ಯಾಕ್ ಮಾಡಿದೆ. ಭದ್ರತೆಗಾಗಿ, ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸಂವೇದಕವಿದೆ. ಈ ಫೋನ್ 4G VoLTE, Wi-Fi, ಬ್ಲೂಟೂತ್ 5.0, GPS, GLONASS ಮತ್ತು USB ಟೈಪ್-C ಸಂಪರ್ಕವನ್ನು ಪಡೆಯುತ್ತದೆ.

ಇನ್ನಷ್ಟು ತಂತ್ರಜ್ಞಾನ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ