Infinix Zero 5G 2023: ಭಾರತದಲ್ಲಿ ಬಹುನಿರೀಕ್ಷಿತ ಇನ್ಫಿನಿಕ್ಸ್‌ ಜಿರೋ 5G 2023 ಸ್ಮಾರ್ಟ್​ಫೋನ್ ಬಿಡುಗಡೆ: ಇದರ ಬೆಲೆ ಕೇವಲ …

ಇನ್ಫಿನಿಕ್ಸ್‌ ಜಿರೋ 5ಜಿ 2023 (Infinix Zero 5G 2023) ಸ್ಮಾರ್ಟ್‌ಫೋನ್‌ ಭಾರತದಲ್ಲಿ ಅನಾವರಣಗೊಂಡಿದೆ. ಈ ಫೋನ್ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದ್ದು ಪವರ್ ಫುಲ್ ಬ್ಯಾಟರಿ, ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಪಡೆದುಕೊಂಡಿದೆ.

Infinix Zero 5G 2023: ಭಾರತದಲ್ಲಿ ಬಹುನಿರೀಕ್ಷಿತ ಇನ್ಫಿನಿಕ್ಸ್‌ ಜಿರೋ 5G 2023 ಸ್ಮಾರ್ಟ್​ಫೋನ್ ಬಿಡುಗಡೆ: ಇದರ ಬೆಲೆ ಕೇವಲ ...
Infinix Zero 5G 2023
Follow us
TV9 Web
| Updated By: Vinay Bhat

Updated on:Feb 05, 2023 | 1:15 PM

ಮಾರುಕಟ್ಟೆಯಲ್ಲಿ ಹೆಚ್ಚಾಗಿ ಅಗ್ಗದ ಫೋನ್‌ಗಳಿಗೆ ಹೆಸರುವಾಸಿಯಾಗಿರುವ ಇನ್ಫಿನಿಕ್ಸ್‌ ಕಂಪನಿ ಕಳೆದ ವರ್ಷ ತನ್ನ ಇನ್ಫಿನಿಕ್ಸ್‌ ಜಿರೋ 5ಜಿ (Infinix Zero 5G) ಎಂಬ ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಿತ್ತು. ಇದು ಇನ್ಫಿನಿಕ್ಸ್​ನ ಚೊಚ್ಚಲ 5ಜಿ ಆಗಿದ್ದರಿಂದ ಮಾರುಕಟ್ಟೆಯಲ್ಲಿ ದೊಡ್ಡ ಮಟ್ಟದ ಸದ್ದು ಮಾಡಿತ್ತು. ಇದೀಗ ಈ ಫೋನಿನ ಅಪ್​ಗ್ರೇಡ್ ವರ್ಷನ್ ಇನ್ಫಿನಿಕ್ಸ್‌ ಜಿರೋ 5ಜಿ 2023 (Infinix Zero 5G 2023) ಫೋನನ್ನು ಭಾರತದಲ್ಲಿ ಅನಾವರಣ ಮಾಡಿದೆ. ಈ ಫೋನ್ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದ್ದು ಪವರ್ ಫುಲ್ ಬ್ಯಾಟರಿ, ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಪಡೆದುಕೊಂಡಿದೆ. ಅಲ್ಲದೆ ಸದ್ಯದ ಮಾರುಕಟ್ಟೆಯಲ್ಲಿ ಸೇಲ್ ಆಗುತ್ತಿರುವ ಕಡಿಮೆ ಬೆಲೆಯ 5ಜಿ ಫೋನ್​ಗಳ (5G Phone) ಸಾಲಿಗೆ ಇದುಕೂಡ ಸೇರ್ಪಡೆಯಾಗಿದೆ. ಹಾಗಾದರೆ ಇದರ ಬೆಲೆ ಎಷ್ಟು?, ಏನೆಲ್ಲ ಫೀಚರ್ಸ್ ಪಡೆದುಕೊಂಡಿದೆ ಎಂಬುದನ್ನು ನೋಡೋಣ.

ಬೆಲೆ ಎಷ್ಟು?:

ಈ ಸ್ಮಾರ್ಟ್​ಫೋನ್ ಸದ್ಯಕ್ಕೆ ಒಂದು ಮಾದರಿಯಲ್ಲಷ್ಟೆ ಬಿಡುಗಡೆ ಆಗಿದೆ. ಇದರ 8 GB RAM ಮತ್ತು 128 GB ಸ್ಟೋರೆಜ್ ಸಾಮರ್ಥ್ಯಕ್ಕೆ 17,999 ರೂ. ನಿಗದಿ ಮಾಡಲಾಗಿದೆ. ಇನ್ಫಿನಿಕ್ಸ್‌ ಜಿರೋ 5G 2023 ಫೆಬ್ರವರಿ 11 ರಿಂದ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್ ಮೂಲಕ ಸೇಲ್ ಕಾಣಲಿದೆ.

ಇದನ್ನೂ ಓದಿ
Image
Vivo X90 Series: ಬಲಿಷ್ಠ ಪ್ರೊಸೆಸರ್, ಬೊಂಬಾಟ್ ಕ್ಯಾಮೆರಾ: ವಿವೋದಿಂದ ಆಕರ್ಷಕ ಫೀಚರ್​ನ ಎರಡು ಸ್ಮಾರ್ಟ್​ಫೋನ್ ಬಿಡುಗಡೆ
Image
Oppo Reno 8T 5G: ಬೆರಗುಗೊಳಿಸುವ 108MP ಕ್ಯಾಮೆರಾ: ಭಾರತದಲ್ಲಿ ಒಪ್ಪೋ ರೆನೋ 8T ಸ್ಮಾರ್ಟ್​ಫೋನ್ ಬಿಡುಗಡೆ: ಬೆಲೆ ಎಷ್ಟು?
Image
Tech Tips: ನೀವು ಸ್ಮಾರ್ಟ್​ಫೋನ್​ನಲ್ಲಿರುವ mAadhaar ಆ್ಯಪ್ ಬಳಸಿದ್ದೀರಾ?: ಇದರ ಪ್ರಯೋಜನವೇನು?
Image
Fake App: ಪ್ಲೇ ಸ್ಟೋರ್​ನಿಂದ ಅಪಾಯಕಾರಿ ಆ್ಯಪ್​ಗಳನ್ನು ಕಿತ್ತೆಸೆದ ಗೂಗಲ್: ಇನ್​ಸ್ಟಾಲ್ ಮಾಡಿದ್ರೆ ತಕ್ಷಣ ಡಿಲೀಟ್ ಮಾಡಿ

Coca-Cola Smartphone: ಫೆ. 10ಕ್ಕೆ ಕೋಕಾ-ಕೋಲಾ ಕಂಪನಿಯ ಚೊಚ್ಚಲ ಮೊಬೈಲ್ ರಿಲೀಸ್: ಏನು ಫೀಚರ್ಸ್?

ಏನು ಫೀಚರ್ಸ್:

ಇನ್ಫಿನಿಕ್ಸ್‌ ಜಿರೋ 5G 2023 ಸ್ಮಾರ್ಟ್‌ಫೋನ್‌ 1080 x 2460 ಪಿಕ್ಸೆಲ್ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.78 ಇಂಚಿನ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. 120Hz ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 1080 5G SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್‌ 12ನ ಮೇಲೆ XOS 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿರಲಿದೆ.

ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌, ಮೂರನೇ ಕ್ಯಾಮೆರಾ ಕೂಡ 2 ಮೆಗಾಪಿಕ್ಸೆಲ್‌ ಡೆಪ್ತ್ ಸೆನ್ಸಾರ್‌ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಮುಂಭಾಗ ಡ್ಯುಯೆಲ್ ಫ್ಲ್ಯಾಶ್ ಇರುವುದು ವಿಶೇಷ. 4K ವಿಡಿಯೋ ರೆಕಾರ್ಡಿಂಗ್ ಆಯ್ಕೆ ಕೂಡ ಇದೆ.

ಇನ್ಫಿನಿಕ್ಸ್‌ ಜಿರೋ 5G 2023 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, FM ರೆಡಿಯೋ, ಬ್ಲೂಟೂತ್‌, ಹಾಟ್‌ಸ್ಪಾಟ್‌, ಯುಎಸ್​ಬಿ ಟೈಪ್-C, ವೈಫೈ, 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಹೊಂದಿರಲಿದೆ. ಫಿಂಗರ್​ಪ್ರಿಂಟ್ ಸೆನ್ಸಾರ್ ಆಯ್ಕೆ ಅಳವಡಿಸಲಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:14 pm, Sun, 5 February 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ