Infinix Zero 5G 2023: 50MP ಕ್ಯಾಮೆರಾ, 5000mAh ಬ್ಯಾಟರಿ: ಇನ್ಫಿನಿಕ್ಸ್​ನಿಂದ ಬಜೆಟ್ ಬೆಲೆಗೆ ಹೊಸ 5G ಫೋನ್ ರಿಲೀಸ್

ಇನ್ಫಿನಿಕ್ಸ್‌ ಜಿರೋ 5G 2023 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.

Infinix Zero 5G 2023: 50MP ಕ್ಯಾಮೆರಾ, 5000mAh ಬ್ಯಾಟರಿ: ಇನ್ಫಿನಿಕ್ಸ್​ನಿಂದ ಬಜೆಟ್ ಬೆಲೆಗೆ ಹೊಸ 5G ಫೋನ್ ರಿಲೀಸ್
Infinix Zero 5G 2023
Follow us
TV9 Web
| Updated By: Vinay Bhat

Updated on: Dec 02, 2022 | 3:02 PM

ಹೆಚ್ಚಾಗಿ ಅಗ್ಗದ ಫೋನ್‌ಗಳಿಗೆ ಹೆಸರುವಾಸಿಯಾಗಿರುವ ಇನ್ಫಿನಿಕ್ಸ್‌ ಕಂಪನಿ ಈ ವರ್ಷದ ಆರಂಭದಲ್ಲಿ ತನ್ನ ಹೊಸ ಇನ್ಫಿನಿಕ್ಸ್‌ ಜಿರೋ 5ಜಿ (Infinix Zero 5G) ಎಂಬ ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಿತ್ತು. ಇದು ಇನ್ಫಿನಿಕ್ಸ್​ನ ಚೊಚ್ಚಲ 5ಜಿ ಆಗಿದ್ದರಿಂದ ಮಾರುಕಟ್ಟೆಯಲ್ಲಿ ದೊಡ್ಡ ಮಟ್ಟದ ಸದ್ದು ಮಾಡಿತ್ತು. ಇದೀಗ ಈ ಫೋನಿನ ಅಪ್​ಗ್ರೇಡ್ ವರ್ಷನ್ ಇನ್ಫಿನಿಕ್ಸ್‌ ಜಿರೋ 5ಜಿ 2023(Infinix Zero 5G 2023)  ಅನಾವರಣಗೊಂಡಿದೆ. ಈ ಫೋನ್ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದ್ದು ಪವರ್ ಫುಲ್ ಬ್ಯಾಟರಿ, ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಪಡೆದುಕೊಂಡಿದೆ. ಅಲ್ಲದೆ ಸದ್ಯದ ಮಾರುಕಟ್ಟೆಯಲ್ಲಿ ಸೇಲ್ ಆಗುತ್ತಿರುವ ಕಡಿಮೆ ಬೆಲೆಯ 5ಜಿ ಫೋನ್​ಗಳ (5G Phone) ಸಾಲಿಗೆ ಇದುಕೂಡ ಸೇರ್ಪಡೆಯಾಗಿದೆ. ಹಾಗಾದರೆ ಇದರ ಬೆಲೆ ಎಷ್ಟು?, ಏನೆಲ್ಲ ಫೀಚರ್ಸ್ ಪಡೆದುಕೊಂಡಿದೆ ಎಂಬುದನ್ನು ನೋಡೋಣ.

ಇನ್ಫಿನಿಕ್ಸ್‌ ಜಿರೋ 5G 2023 ಸ್ಮಾರ್ಟ್‌ಫೋನ್‌ 1080 x 2460 ಪಿಕ್ಸೆಲ್ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.78 ಇಂಚಿನ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. 120Hz ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 1080 5G SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್‌ 12ನ ಮೇಲೆ XOS 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿರಲಿದೆ.

Twitter Character Limit: ಟ್ವಿಟರ್​ ಅಕ್ಷರ ಮಿತಿ 1,000ಕ್ಕೆ ಹೆಚ್ಚಳ; ಎಲಾನ್ ಮಸ್ಕ್ ಸುಳಿವು

ಇದನ್ನೂ ಓದಿ
Image
EXPLAINED: ಕಂಪ್ಯೂಟರ್​ಗೆ ವೈರಸ್ ಹೇಗೆ ಅಟ್ಯಾಕ್ ಆಗುತ್ತದೆ?: ಇದರಿಂದ ಎಚ್ಚರ ವಹಿಸುವುದು ಹೇಗೆ?
Image
Tech Tips: 5G ಬಳಸುವಾಗ ಡೇಟಾ ಸೇವ್ ಮಾಡುವುದು ಹೇಗೆ?; ಇಲ್ಲಿದೆ ನೋಡಿ ಟ್ರಿಕ್ಸ್
Image
Moto X40: ರಿಲೀಸ್​ಗೂ ಮುನ್ನ ಭರ್ಜರಿ ಸದ್ದು ಮಾಡುತ್ತಿದೆ ಮೋಟೋ X40 ಸ್ಮಾರ್ಟ್‌ಫೋನ್‌: ಏನಿದರ ವಿಶೇಷತೆ?
Image
Twitter Followers ನಿಮ್ಮ ಟ್ವಿಟ್ಟರ್​ ಫಾಲೋವರ್ಸ್​ ಸಂಖ್ಯೆ ಕುಸಿಯಬಹುದು: ಎಲಾನ್ ಮಸ್ಕ್ ಎಚ್ಚರಿಕೆ

ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌, ಮೂರನೇ ಕ್ಯಾಮೆರಾ ಕೂಡ 2 ಮೆಗಾಪಿಕ್ಸೆಲ್‌ ಡೆಪ್ತ್ ಸೆನ್ಸಾರ್‌ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಮುಂಭಾಗ ಡ್ಯುಯೆಲ್ ಫ್ಲ್ಯಾಶ್ ಇರುವುದು ವಿಶೇಷ. 4K ವಿಡಿಯೋ ರೆಕಾರ್ಡಿಂಗ್ ಆಯ್ಕೆ ಕೂಡ ಇದೆ.

ಇನ್ಫಿನಿಕ್ಸ್‌ ಜಿರೋ 5G 2023 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, FM ರೆಡಿಯೋ, ಬ್ಲೂಟೂತ್‌, ಹಾಟ್‌ಸ್ಪಾಟ್‌, ಯುಎಸ್​ಬಿ ಟೈಪ್-C, ವೈಫೈ, 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಹೊಂದಿರಲಿದೆ. ಫಿಂಗರ್​ಪ್ರಿಂಟ್ ಸೆನ್ಸಾರ್ ಆಯ್ಕೆ ಅಳವಡಿಸಲಾಗಿದೆ.

ಈ ಸ್ಮಾರ್ಟ್​ಫೋನ್ ಸದ್ಯಕ್ಕೆ ಒಂದು ಮಾದರಿಯಲ್ಲಷ್ಟೆ ಬಿಡುಗಡೆ ಆಗಿದೆ. ಇದರ 8 GB RAM ಮತ್ತು 256 GB ಸ್ಟೋರೆಜ್ ಸಾಮರ್ಥ್ಯಕ್ಕೆ $239, ಅಂದರೆ ಭಾರತದಲ್ಲಿ ಇದರ ಬೆಲೆ 19,499 ರೂ. ಇರಬಹುದು. ಈಗ ವಿದೇಶದಲ್ಲಷ್ಟೆ ಅನಾವರಣಗೊಂಡಿರುವ ಇನ್ಫಿನಿಕ್ಸ್‌ ಜಿರೋ 5G 2023 ಹೊಸ ವರ್ಷಕ್ಕೆ ಭಾರತದಲ್ಲೂ ಬಿಡುಗಡೆ ಆಗುವ ನಿರೀಕ್ಷೆಯಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ