AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Instagram Outage: ಪ್ರಪಂಚದಾದ್ಯಂತ ಇನ್​​ಸ್ಟಾಗ್ರಾಮ್ ಕಾರ್ಯ​ ಸ್ಥಗಿತ, ಅನೇಕರ ಖಾತೆಗಳು ಅಮಾನತು !!

ಇನ್​​ಸ್ಟಾಗ್ರಾಮ್ ಜಗತ್ತಿನಾದ್ಯಂತ ಕೆಲವು ನಿಮಿಷಗಳ ಕಾಲ ಸ್ಥಗಿತಗೊಂಡಿತ್ತು.

Instagram Outage: ಪ್ರಪಂಚದಾದ್ಯಂತ ಇನ್​​ಸ್ಟಾಗ್ರಾಮ್ ಕಾರ್ಯ​ ಸ್ಥಗಿತ, ಅನೇಕರ ಖಾತೆಗಳು ಅಮಾನತು !!
ಇನ್​​ಸ್ಟಾಗ್ರಾಮ್
TV9 Web
| Edited By: ವಿವೇಕ ಬಿರಾದಾರ|

Updated on:Oct 31, 2022 | 10:25 PM

Share

ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ಮೇಟಾ ಕಂಪನಿಯ ಪ್ರಸಿದ್ಧ ಆ್ಯಪ್​​ ಇನ್​​ಸ್ಟಾಗ್ರಾಮ್​ನಲ್ಲಿ (Instagram ) ಲಾಗಿನ್​ ಆಗಲು ಇಂದು (ಅ.31) ಸಾಕಷ್ಟು ಜನರು ​​ಪರದಾಡಿದ್ದಾರೆ. ಇದಕ್ಕೆ ಕಾರಣ ಇನ್​​ಸ್ಟಾಗ್ರಾಮ್ ಜಗತ್ತಿನಾದ್ಯಂತ ಕೆಲವು ನಿಮಿಷಗಳ ಕಾಲ ಸ್ಥಗಿತಗೊಂಡಿತ್ತು. ಇದರಿಂದ ರಾತ್ರಿ 8:43 ನಿಮಿಷಕ್ಕೆ ಹಲವು ಖಾತೆಗಳನ್ನು ಅಮಾನತುಗೊಂಡಿದ್ದವು. ಇದರಿಂದ ಸುಮಾರು 3,000 ಬಳಕೆದಾರರು ತೊಂದರೆ ಅನುಭವಿಸಿದ್ದಾರೆ ಎಂದು ಹೇಳಲಾಗುತ್ತಿದ್ದು, ಈ ಸಂಬಂಧ ಅನೇಕ ದೂರುಗಳು ಬಂದಿವೆ ಎಂದು ಖಾಸಗಿ ಸುದ್ದಿ ಸಂಸ್ಥೆ ಎನ್​ಡಿಟಿವಿ ವರದಿ ಮಾಡಿದೆ.

ಹಲವಾರು ಇನ್​​ಸ್ಟಾಗ್ರಾಮ್ ಬಳಕೆದಾರರು ಅಮಾನತುಗೊಂಡ ತಮ್ಮ ಖಾತೆಗೆ ಮರು ಪ್ರವೇಶಿಸಲು ಇಮೇಲ್ ಐಡಿ ಮತ್ತು ಫೋನ್ ಸಂಖ್ಯೆಯನ್ನು ಇನ್​​ಸ್ಟಾಗ್ರಾಮ್ ಕೇಳುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.

ಈ ಕುರಿತು ಇನ್​​ಸ್ಟಾಗ್ರಾಮ್ ಆಫೀಸಿಯಲ್​ ಅಕೌಂಟ್​​ ಟ್ವೀಟ್​ ಮಾಡಿ ನಿಮ್ಮಲ್ಲಿ ಕೆಲವರು ನಿಮ್ಮ ಇನ್​​ಸ್ಟಾಗ್ರಾಮ್ ಖಾತೆಯನ್ನು ಪ್ರವೇಶಿಸುವಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದ್ದೀರಿ ಎಂದು ನಮಗೆ ತಿಳಿದಿದೆ. ನಾವು ಅದನ್ನು ಪರಿಶೀಲಿಸುತ್ತಿದ್ದೇವೆ ಮತ್ತು ಅನಾನುಕೂಲತೆಗಾಗಿ ಕ್ಷಮೆಯಾಚಿಸುತ್ತೇವೆ” ಎಂದು ಇನ್​​ಸ್ಟಾಗ್ರಾಮ್ ಟ್ವೀಟ್ ಮಾಡಿದೆ.

ಈ ಹಿಂದೆ ಅಕ್ಟೋಬರ್​ 25 ರಂದು ವಾಟ್ಸ್​​ ಆಪ್ ​ಕಾರ್ಯ ಕೂಡ ಕೆಲವು ಗಂಟೆಗಳ ಕಾಲ ಸ್ಥಗಿತಗೊಂಡಿತ್ತು. ಇದರಿಂದ ಸಾಕಷ್ಟು ಜನರು ತೊಂದರೆ ಅನುಭವಿಸಿದ್ದರು. ಇದರಿಂದ ಜಾಗತಿಕವಾಗಿ ಸಾಕಷ್ಟು ಅನುಭವಿಸುವಂತಾಯಿತು ವರದಿಯಾಗಿತ್ತು.

ಮತ್ತಷ್ಟು ತಂತ್ರಜ್ಞಾನದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:25 pm, Mon, 31 October 22

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ