AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tech Tips: ಇನ್​​ಸ್ಟಾಗ್ರಾಮ್​ನಲ್ಲಿ ಫೋಟೋ, ರೀಲ್ಸ್ ಎಷ್ಟು ಗಂಟೆಗೆ ಹಾಕಿದರೆ ಹೆಚ್ಚು ಲೈಕ್ಸ್ ಬರುತ್ತೆ?: ಇಲ್ಲಿದೆ ನೋಡಿ

Instagram Tips and Tricks: ಕೆಲವರು ತಮ್ಮ ಇನ್​ಸ್ಟಾಗ್ರಾಮ್​​ನಲ್ಲಿ ಫೋಟೋ, ವಿಡಿಯೋ ಎಷ್ಟೇ ಹಾಕಿದರೂ ಅದಕ್ಕೆ ಲೈಕ್ಸ್, ಕಮೆಂಟ್ ಬರುವುದೇ ಇಲ್ಲ. ಹಾಗಾದರೆ ನಿಮ್ಮ ಪೋಸ್ಟ್​ಗೆ ಹೆಚ್ಚು ಲೈಕ್ಸ್, ವೀವ್ಸ್, ಕಮೆಂಟ್ ಬರಬೇಕು ಅಂದುಕೊಂಡಿದ್ದರೆ ಇಲ್ಲಿದೆ ನೋಡಿ ಟಿಪ್ಸ್.

Tech Tips: ಇನ್​​ಸ್ಟಾಗ್ರಾಮ್​ನಲ್ಲಿ ಫೋಟೋ, ರೀಲ್ಸ್ ಎಷ್ಟು ಗಂಟೆಗೆ ಹಾಕಿದರೆ ಹೆಚ್ಚು ಲೈಕ್ಸ್ ಬರುತ್ತೆ?: ಇಲ್ಲಿದೆ ನೋಡಿ
Instagram Tips and Tricks
Follow us
TV9 Web
| Updated By: Vinay Bhat

Updated on: Oct 18, 2022 | 2:40 PM

ಇಂದಿನ ದಿನಗಳಲ್ಲಿ ಸಾಮಾಜಿಕ ಜಾಲತಾಣವನ್ನು ಬಳಸುತ್ತಿರುವ ಜನರ ಸಂಖ್ಯೆ ಕೋಟಿಗಟ್ಟಲೆ ಇದೆ. ಮೆಟಾ ಒಡೆತನದ ಫೇಸ್​ಬುಕ್, ವಾಟ್ಸ್​ಆ್ಯಪ್ (WhatsApp) ಮತ್ತು ಇನ್​ಸ್ಟಾಗ್ರಾಮ್ ಟಾಪ್ 3 ಸೋಷಿಯಲ್ ಮೀಡಿಯಾ ಆ್ಯಪ್ ಆಗಿಬಿಟ್ಟಿದೆ. ವಿಶ್ವದಲ್ಲಿ ಈಗ ವಾಟ್ಸ್​ಆ್ಯಪ್ ಬಿಟ್ಟರೆ ಹೆಚ್ಚಿನ ಜನರು ಉಪಯೋಗಿಸುತ್ತಿರುವುದು ಇನ್​ಸ್ಟಾಗ್ರಾಮ್. ಟಿಕ್​ಟಾಕ್ (TikTok) ನಿಷೇಧವಾದ ಬಳಿಕ ಭಾರತದಲ್ಲಿ ಇನ್​ಸ್ಟಾ ಹೆಚ್ಚು ಜನಪ್ರಿಯತೆ ಪಡೆದುಕೊಂಡಿತು. ಇದರಲ್ಲಿರುವ ರೀಲ್ಸ್‌ ಆಯ್ಕೆಗೆ ಜನರು ಮನಸೋತರು. ಟಿಕ್‌ಟಾಕ್‌ ಬಳಿಕ ಈಗ ಹೆಚ್ಚಿನ ಜನರು ಇನ್‌ಸ್ಟಾಗ್ರಾಮ್‌ ರೀಲ್ಸ್​ಗೆ ಅಂಟಿಕೊಂಡು ಬಿಟ್ಟಿದ್ದಾರೆ. ಇದಕ್ಕೆ ತಕ್ಕಂತೆ ಇನ್‌ಸ್ಟಾಗ್ರಾಮ್‌ (Instagram) ತನ್ನ ರೀಲ್ಸ್‌ನಲ್ಲಿ ಹಲವು ಆಕರ್ಷಕ ಫೀಚರ್​ಗಳನ್ನು ಕೂಡ ಪರಿಚಯಿಸುತ್ತಾ ಬರುತ್ತಿದೆ. ಆದರೆ, ಕೆಲವರು ತಮ್ಮ ಇನ್​ಸ್ಟಾದಲ್ಲಿ ಫೋಟೋ, ವಿಡಿಯೋ ಎಷ್ಟೇ ಹಾಕಿದರೂ ಅದಕ್ಕೆ ಲೈಕ್ಸ್, ಕಮೆಂಟ್ ಬರುವುದೇ ಇಲ್ಲ. ಹಾಗಾದರೆ ನಿಮ್ಮ ಪೋಸ್ಟ್​ಗೆ ಹೆಚ್ಚು ಲೈಕ್ಸ್, ವೀವ್ಸ್, ಕಮೆಂಟ್ ಬರಬೇಕು ಅಂದುಕೊಂಡಿದ್ದರೆ ಇಲ್ಲಿದೆ ನೋಡಿ ಟಿಪ್ಸ್.

ನೀವು ಫೇಸ್​ಬುಕ್ ಖಾತೆ ಹೊಂದಿದ್ದರೆ ಮೊದಲು ಇನ್‌ಸ್ಟಾಗ್ರಾಂಗೆ ಲಿಂಕ್ ಮಾಡಿ. ಯಾಕೆಂದರೆ ನೀವು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡ ಚಿತ್ರಗಳು, ವಿಡಿಯೋಗಳಲ್ಲದೆ, ನಿಮ್ಮ ಸ್ಟೋರಿಗಳನ್ನು ಫೇಸ್​ಬುಕ್​ನಲ್ಲಿ ಕೂಡ ಶೇರ್ ಮಾಡಿಕೊಳ್ಳಬಹುದು. ಫೇಸ್​ಬುಕ್ ತಾಣದಲ್ಲಿರುವ ಯಾವುದೇ ಸ್ನೇಹಿತರು ಇನ್​ಸ್ಟಾಗ್ರಾಮ್ ಸೇರಿದಾಗ ನಿಮಗೂ ನೋಟಿಫಿಕೇಶನ್ ಬರುತ್ತಾ ಇರುತ್ತದೆ. ಹೀಗಾಗಿ ಅವರ ಬಳಿ ನಿಮ್ಮನ್ನ ಫಾಲೋ ಮಾಡುವಂತೆ ಕೂಡ ಹೇಳಬಹುದು. ಈಗ ಇನ್​ಸ್ಟಾಗ್ರಾಮ್ ಸಾಕಷ್ಟು ಅಪ್ಡೇಟ್ ಆಗಿದ್ದು, ನೀವು ಯಾವುದೇ ಫೋಟೋ, ವಿಡಿಯೋ ಹಂಚಿಕೊಂಡರೆ ಫೇಸ್​ಬುಕ್​ನಲ್ಲಿ ಅಟೋಮೆಟಿಕ್ ಶೇರ್ ಆಗುವಂತಹ ಆಯ್ಕೆ ಕೂಡ ಇದೆ.

ಇನ್ನು ಇನ್​ಸ್ಟಾಗ್ರಾಮ್​ನಲ್ಲಿ ನೀವು ಯಾವುದೇ ಫೈಲ್ ಅನ್ನು ಶೇರ್ ಮಾಡುವಾಗ ಸರಿಯಾದ ಸಮಯಕ್ಕೆ ಮಾಡಿ. ಒಂದೇ ಬಾರಿಗೆ 2, 3 ವಿಡಿಯೋ ಹಂಚಿಕೊಂಡರೆ ಲೈಕ್ಸ್, ಕಮೆಂಟ್ ಹಾಗೂ ಹೆಚ್ಚು ರೀಚ್ ಕೂಡ ಆಗುವುದಿಲ್ಲ. ಈ ಬಗ್ಗೆ ವೆಬ್ ತಾಣ ಗಿಜ್​ಬಾಟ್ ವರದಿ ಮಾಡಿದ್ದು ಇನ್​ಸ್ಟಾಗ್ರಾಮ್​ನಲ್ಲಿ ಫೋಟೋ, ವಿಡಿಯೋ ಹಂಚಿಕೊಳ್ಳಲು ದಿನದಲ್ಲಿ ಯಾವುದು ಸರಿಯಾದ ಸಮಯ ಎಂದು ಹೇಳಿದೆ.

ಇದನ್ನೂ ಓದಿ
Image
Big Diwali sale: ಫ್ಲಿಪ್​ಕಾರ್ಟ್​ ಬಿಗ್ ದಿವಾಳಿ ಸೇಲ್: ಐಫೋನ್ 13, ಐಫೋನ್ 12 ಮಿನಿ ಅತಿ ಕಡಿಮೆ ಬೆಲೆಗೆ ಲಭ್ಯ
Image
WhatsApp Ban: ಎಚ್ಚರ: ವಾಟ್ಸ್​ಆ್ಯಪ್​ನಲ್ಲಿ ಅತಿ ಹೆಚ್ಚು ಗುಡ್​ ಮಾರ್ನಿಂಗ್ ಮೆಸೇಜ್ ಮಾಡುತ್ತಿದ್ದೀರಾ?: ಅಕೌಂಟ್ ಬ್ಯಾನ್ ಆಗುತ್ತದೆ
Image
Redmi A1+: ಬಜೆಟ್ ಪ್ರಿಯರು ಫಿದಾ ಆಗಿರುವ 6,999 ರೂಪಾಯಿ ರೆಡ್ಮಿ A1+ ಈಗ ಖರೀದಿಗೆ ಲಭ್ಯ
Image
Moto E22s: ಕೇವಲ 8,999 ರೂ. ಗೆ ಮೋಟೋ ಕಂಪನಿಯಿಂದ ಬಂಪರ್ ಫೋನ್ ಬಿಡುಗಡೆ: ಖರೀದಿಗೆ ಕ್ಯೂ ಗ್ಯಾರೆಂಟಿ

ಇವರು ಹೇಳಿರುವ ಪ್ರಕಾರ ಸೋಮವಾರ ಮಧ್ಯಾಹ್ನ 3:30, ಸಂಜೆ 7:30 ಹಾಗೂ ಬೆಳಗ್ಗೆ 7:30 ಉತ್ತಮ ಸಮಯವಂತೆ. ಅಂತೆಯೆ ಮಂಗಳವಾರ ಫೋಟೋ ಅಥವಾ ರೀಲ್ಸ್ ಹಂಚಿಕೊಳ್ಳುವ ಪ್ಲಾನ್​ನಲ್ಲಿದ್ದರೆ ನೀವು 11:30 am, 1:30 am, 6:30 am. ಬುಧವಾರ- 4:30 pm, 5:30 pm, 8:30 am, ಗುರುವಾರ- 6:30 pm, 9:30 am, 4:30 am (ಮುಂದಿನ ದಿನ), ಶುಕ್ರವಾರ- 2:30 pm, 10:30 pm, 12:30 am (ಮುಂದಿನ ದಿನ), ಶನಿವಾರ- 8:30 pm, 4:30 am (ಮುಂದಿನ ದಿನ), 5:30 am (ಮುಂದಿನ ದಿನ), ಭಾನುವಾರ- 4:30 pm, 5:30 pm, 1:30 am (ಮುಂದಿನ ದಿನ).

ಒಂದೇ ರೀತಿಯ ಫೋಟೋವನ್ನು ಪುನಃ ಪೋಸ್ಟ್ ಮಾಡಬೇಡಿ. ಯಾವುದಾದರೂ ಒಂದು ಪೋಟೊ ಚೆನ್ನಾಗಿದ್ದರೆ, ಆ ಫೋಟೋವನ್ನೇ ಹತ್ತು ಬಾರಿ ಇನ್‌ಸ್ಟಾಗ್ರಾಂನಲ್ಲಿ ಫೋಸ್ಟ್ ಮಾಡಬೇಡಿ. ಗಮನ ಸೆಳೆಯುವಂತಹ ಗುಣಮಟ್ಟದ ಚಿತ್ರಗಳನ್ನು ಮಾತ್ರ ಶೇರ್ ಮಾಡಿ. ದಿನಕ್ಕೆ ಹೆಚ್ಚೆಂದರೆ 2 ರಿಂದ 3 ಫೋಟೋಗಳನ್ನು ಶೇರ್ ಮಾಡುವುದು ಉತ್ತಮ.

ಅಂತೆಯೆ ನೀವು ಇನ್ನೊಬ್ಬರಿಗೆ ಲೈಕ್ ಮಾಡಿದರೆ ಮಾತ್ರ ಅವರೂ ನಿಮ್ಮ ಪೋಸ್ಟ್‌ಗಳಿಗೆ ಲೈಕ್ ಒತ್ತುತ್ತಾರೆ. ನಿಮಗೆ ಲೈಕ್ ಬರುವುದು ನಿಮ್ಮನ್ನು ಫಾಲೋ ಮಾಡುವವರಿಂದ ಎಂಬುದು ನೆನಪಿರಲಿ. ನಮಗೆ ಮಾತ್ರ ಲೈಕ್, ಕಾಮೆಂಟ್ ಬರಲ್ಲ ಎಂದು ಹೇಳುವ ನಾವು ಇತರರನ್ನು ಲೈಕ್ ಮಾಡದಿದ್ದರೆ ಹೇಗೆ?. ಹಾಗೆಯೆ ಹ್ಯಾಶ್‌ಟ್ಯಾಗ್ ಬಳಸುವುದು ಮುಖ್ಯ. ಇನ್‌ಸ್ಟಾಗ್ರಾಂನಲ್ಲಿ ಹ್ಯಾಶ್‌ಟ್ಯಾಗ್ ತುಂಬಾ ಮಹತ್ತರ ಪಾತ್ರ ವಹಿಸುತ್ತದೆ. ಪ್ರತಿಯೊಂದು ಫೋಟೋ ಜತೆ ಅದಕ್ಕೆ ತಕ್ಕ ಜನಪ್ರಿಯ ಹ್ಯಾಶ್‌ಟ್ಯಾಗ್‌ಗಳನ್ನು ಬಳಸಿದರೆ ನಿಮ್ಮ ಪೋಸ್ಟ್ ಹೆಚ್ಚು ಜನರಿಗೆ ರೀಚ್ ಆಗುತ್ತದೆ.

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ