iPhone 14: ಇಂದು ಹೊಸ ಕಲರ್​ನಲ್ಲಿ ಐಫೋನ್ 14, ಐಫೋನ್ 14 ಪ್ಲಸ್ ಬಿಡುಗಡೆ: ಬೆಲೆ ಎಷ್ಟು?

ಕಳೆದ ವರ್ಷ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಿ ಈಗಲೂ ಭರ್ಜರಿ ಸೇಲ್ ಕಾಣುತ್ತಿರುವ ಐಫೋನ್ 14 (iPhone 14) ಮತ್ತು ಐಫೋನ್ 14 ಪ್ಲಸ್ ಸ್ಮಾರ್ಟ್​ಫೋನನ್ನು ಹೊಸ ಬಣ್ಣದಲ್ಲಿ ಮಾರ್ಚ್ 14 ರಂದು ಬಿಡುಗಡೆ ಮಾಡಲು ಕಂಪನಿ ಸಜ್ಜಾಗಿದೆ.

iPhone 14: ಇಂದು ಹೊಸ ಕಲರ್​ನಲ್ಲಿ ಐಫೋನ್ 14, ಐಫೋನ್ 14 ಪ್ಲಸ್ ಬಿಡುಗಡೆ: ಬೆಲೆ ಎಷ್ಟು?
iPhone 14
Follow us
|

Updated on: Mar 14, 2023 | 6:55 AM

ಆ್ಯಪಲ್ (Apple) ಕಂಪನಿಯ ಐಫೋನ್​ಗಳನ್ನು ಬಳಸುತ್ತಿರುವವರ ಸಂಖ್ಯೆ ಇಂದು ಗಣನೀಯವಗಿ ಹೆಚ್ಚಾಗುತ್ತಿದೆ. ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗುತ್ತಿರುವ ಕಂಪನಿ ತನ್ನ ಬಳಕೆದಾರರನ್ನು ವರ್ಷದಿಂದ ವರ್ಷಕ್ಕೆ ಅಧಿಕ ಮಾಡುತ್ತಿದೆ. ಇದೀಗ ಹೊಸ ಪ್ಲಾನ್​​ನೊಂದಿಗೆ ಆ್ಯಪಲ್ ಮತ್ತೆ ಬಂದಿದೆ. ಕಳೆದ ವರ್ಷ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಿ ಈಗಲೂ ಭರ್ಜರಿ ಸೇಲ್ ಕಾಣುತ್ತಿರುವ ಐಫೋನ್ 14 (iPhone 14) ಮತ್ತು ಐಫೋನ್ 14 ಪ್ಲಸ್ ಸ್ಮಾರ್ಟ್​ಫೋನನ್ನು ಹೊಸ ಬಣ್ಣದಲ್ಲಿ ಬಿಡುಗಡೆ ಮಾಡಲು ಕಂಪನಿ ಸಜ್ಜಾಗಿದೆ. ಈ ಎರಡೂ ಫೋನ್ ಹಳದಿ ಬಣ್ಣದಲ್ಲಿ (Yellow Color) ಅನಾವರಣ ಆಗುತ್ತಿದೆ. ಮಾರ್ಚ್ 14 ರಂದು ಇಂದು ಐಫೋನ್ 14 ಮತ್ತು 14 ಪ್ಲಸ್ ಭಾರತದಲ್ಲಿ ಹೊಸ ಬಣ್ಣದೊಂದಿಗೆ ಲಾಂಚ್ ಆಗಲಿದೆ. ಈಗಾಗಲೇ ಇದರ ಪ್ರೀ ಬುಕ್ಕಿಂಗ್ ಕೂಡ ಶುರುವಾಗಿದೆ.

ಆ್ಯಪಲ್‌ನ ಪಿಆರ್‌ ತಂಡವು ಮುಂದಿನ ವಾರ ಉತ್ಪನ್ನ ಬ್ರೀಫಿಂಗ್ ಅನ್ನು ಯೋಜಿಸುತ್ತಿದೆ ಎಂದು ಮ್ಯಾಕ್ ರೂಮೋರ್ಸ್ ವರದಿ ಮಾಡಿದ್ದು, ಈ ವೇಳೆ ಯಾವುದೇ ಹೊಸ ಫೋನ್‌ ಬಗ್ಗೆ ಘೋಷಣೆ ಮಾಡದೆ ಐಫೋನ್‌ 14 ಮತ್ತು 14 ಪ್ಲಸ್ ಅನ್ನು ಹಳದಿ ಬಣ್ಣದಲ್ಲಿ ಪರಿಚಯಿಸುವ ಬಗ್ಗೆ ಉಲ್ಲೇಖಿಸಲಾಗಿದೆ. ಈ ನೀತಿಯು ಐಫೋನ್ 14 ಮಾರಾಟವನ್ನು ಹೆಚ್ಚಿಸುವ ಆ್ಯಪಲ್‌ನ ಕಾರ್ಯತಂತ್ರದ ಭಾಗವಾಗಿದೆ ಎಂದೂ ಸಹ ತಿಳಿದುಬಂದಿದೆ.

ಅಂತೆಯೆ ಆ್ಯಪಲ್​ನ ಮುಂದಿನ ಐಫೋನ್ 15, ಐಫೋನ್ 15 ಪ್ರೋ ಡಾರ್ಕ್​ ಕೆಂಪು ಬಣ್ಣದ ಆಯ್ಕೆಯಲ್ಲಿ ಬರಲು ಸಿದ್ಧವಾಗಿದೆ ಎಂದು ವರದಿಯಾಗಿದೆ. 2021 ರಲ್ಲಿ ಬಿಡುಗಡೆ ಆದ ಐಫೋನ್ 13 ಅನ್ನು ಕಳೆದ ವರ್ಷ ಕಂಪೆನಿಯು ಹೊಸ ರೀತಿಯ ಹಸಿರು ಬಣ್ಣಗಳಲ್ಲಿ ಪರಿಚಯಿಸಿತ್ತು.

ಇದನ್ನೂ ಓದಿ
Image
IQoo Z7i: ಸದ್ದಿಲ್ಲದೆ ಮಾರುಕಟ್ಟೆಗೆ ದಿಢೀರ್ ಹೊಸ ಸ್ಮಾರ್ಟ್​ಫೋನ್ ಪರಿಚಯಿಸಿದ ಐಕ್ಯೂ: ಪ್ರೊಸೆಸರ್ ಕಂಡು ದಂಗಾದ ಟೆಕ್ ಪ್ರಿಯರು
Image
WhatsApp New Feature: ವಾಟ್ಸ್​ಆ್ಯಪ್ ಪ್ರಿಯರಿಗೆ ಬಂಪರ್ ಸುದ್ದಿ: 21 ಹೊಸ ಎಮೋಜಿ ಸೇರ್ಪಡೆ
Image
Moto G72: ನೀವು ಫೋಟೋಗ್ರಫಿ ಮಾಡ್ತೀರಾ?: 108MP ಕ್ಯಾಮೆರಾದ ಈ ಸ್ಮಾರ್ಟ್​ಫೋನ್ ಈಗ ಅತಿ ಕಡಿಮೆ ಬೆಲೆಗೆ ಲಭ್ಯ
Image
Tech Tips: ಆನ್​ಲೈನ್ ಮೂಲಕ ವಿದ್ಯುತ್ ಬಿಲ್ ಪಾವತಿಸುವುದು ಹೇಗೆ?: ಇಲ್ಲಿದೆ ಟಿಪ್ಸ್

Tech Tips: ಆನ್​ಲೈನ್ ಮೂಲಕ ವಿದ್ಯುತ್ ಬಿಲ್ ಪಾವತಿಸುವುದು ಹೇಗೆ?: ಇಲ್ಲಿದೆ ಟಿಪ್ಸ್

ಐಫೋನ್ 14 ಫೀಚರ್ಸ್ ಬಗ್ಗೆ ನೋಡುವುದಾದರೆ, ಇದು ಸೂಪರ್ ರೆಟಿನಾ 6.1 ಇಂಚಿನ XDR OLED ಡಿಸ್‌ಪ್ಲೇ ಹೊಂದಿದ್ದು, 1200nits ಬ್ರೈಟ್ನಸ್‌ ಸಪೋರ್ಟ್‌ ಪಡೆದುಕೊಂಡಿದೆ. A15 ಬಯೋನಿಕ್ ಚಿಪ್ಸೆಟ್ ​ನಿಂದ ಕಾರ್ಯನಿರ್ವಹಿಸುತ್ತದೆ. ಡ್ಯುಯಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಎರಡೂ ಕ್ಯಾಮೆರಾವು 12 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಮುಂಭಾಗದಲ್ಲಿ ಕೂಡ 12 ಮೆಗಾ ಪಿಕ್ಸಲ್‌ನ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇದು 128GB, 256GB ಮತ್ತು 512GB ಸ್ಟೋರೇಜ್‌ ಆಯ್ಕೆಗಳಲ್ಲಿದೆ. ಈ ಫೋನ್ 5G ಕನೆಕ್ಟಿವಿಟಿ ಸೌಲಭ್ಯ ಪಡೆದಿದ್ದು ಇ-ಸಿಮ್ ಆಯ್ಕೆಯನ್ನು ನೀಡಲಾಗಿದೆ.

ಇನ್ನು ಐಫೋನ್ 14 ಪ್ಲಸ್‌ 6.7 ಇಂಚಿನ OLED ಡಿಸ್‌ಪ್ಲೇ ಹೊಂದಿದೆ. ಡ್ಯುಯಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 12 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಮುಂಭಾಗ ಕೂಡ 12 ಮೆಗಾ ಪಿಕ್ಸಲ್‌ನ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ. ಈ ಫೋನ್ ದೀರ್ಘ ಸಮಯ ಬಾಳಿಕೆ ಬರುವ ಬ್ಯಾಟರಿ ಸಾಮರ್ಥ್ಯವನ್ನು ಪಡೆದಿದೆ. ಅಲ್ಲದೆ ತುರ್ತು ಸಂದರ್ಭಕ್ಕೆ Emergency SOS via satellite ಫೀಚರ್ಸ್‌ ನೀಡಲಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ದರ್ಶನ್​ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟಿ ಭಾವನಾ
ದರ್ಶನ್​ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟಿ ಭಾವನಾ
ಆಟೋರಿಕ್ಷಾ ದರವೂ ಹೆಚ್ಚಳವಾಗಲಿದೆಯೇ? ರಾಮಲಿಂಗಾರೆಡ್ಡಿ ಹೇಳುವಂತೆ ಹೌದು!
ಆಟೋರಿಕ್ಷಾ ದರವೂ ಹೆಚ್ಚಳವಾಗಲಿದೆಯೇ? ರಾಮಲಿಂಗಾರೆಡ್ಡಿ ಹೇಳುವಂತೆ ಹೌದು!
ಹೈಕಮಾಂಡ್ ಹೇಳಿದ್ದನ್ನು ರಾಜ್ಯದ ನಾಯಕರಿಗೆ ಜ್ಞಾಪಿಸುತ್ತಿದ್ದೇನೆ: ರಾಜಣ್ಣ
ಹೈಕಮಾಂಡ್ ಹೇಳಿದ್ದನ್ನು ರಾಜ್ಯದ ನಾಯಕರಿಗೆ ಜ್ಞಾಪಿಸುತ್ತಿದ್ದೇನೆ: ರಾಜಣ್ಣ
ಹಾಲಿನ ದರ ಏರಿಕೆ ಹಣ ರೈತರಿಗೆ ಹೋಗೋದು ಬಿಜೆಪಿ ನಾಯಕರಿಗೆ ಇಷ್ಟವಿಲ್ಲ:ಡಿಕೆಶಿ
ಹಾಲಿನ ದರ ಏರಿಕೆ ಹಣ ರೈತರಿಗೆ ಹೋಗೋದು ಬಿಜೆಪಿ ನಾಯಕರಿಗೆ ಇಷ್ಟವಿಲ್ಲ:ಡಿಕೆಶಿ
ಕೆಂಪೇಗೌಡ ಜಯಂತಿ; ನಮ್ಮ ಹೆಸರಿಲ್ಲದಿರುವುದು ದೊಡ್ಡ ವಿಷಯವಲ್ಲ: ಕುಮಾರಸ್ವಾಮಿ
ಕೆಂಪೇಗೌಡ ಜಯಂತಿ; ನಮ್ಮ ಹೆಸರಿಲ್ಲದಿರುವುದು ದೊಡ್ಡ ವಿಷಯವಲ್ಲ: ಕುಮಾರಸ್ವಾಮಿ
ಮುಸ್ಲಿಂ ವೋಟು ವನ್-ಸೈಡೆಡ್ ಆಗಿ ಸಾಗರ್ ಸಿಕ್ಕಿದ್ದು ಅಂತ ಹೇಳಿದ್ದು: ಜಮೀರ್
ಮುಸ್ಲಿಂ ವೋಟು ವನ್-ಸೈಡೆಡ್ ಆಗಿ ಸಾಗರ್ ಸಿಕ್ಕಿದ್ದು ಅಂತ ಹೇಳಿದ್ದು: ಜಮೀರ್
ಉಡುಪಿ: ಬಿರುಸುಗೊಂಡ ಮುಂಗಾರು ಮಳೆ; ಕಾಪು, ಮಲ್ಪೆ ಕಡಲ ಕಿನಾರೆ ಪ್ರಕ್ಷುಬ್ಧ
ಉಡುಪಿ: ಬಿರುಸುಗೊಂಡ ಮುಂಗಾರು ಮಳೆ; ಕಾಪು, ಮಲ್ಪೆ ಕಡಲ ಕಿನಾರೆ ಪ್ರಕ್ಷುಬ್ಧ
ಸಂಸತ್ ಭವನದಲ್ಲಿ ಪರಸ್ಪರ ಕೈ ಕುಲುಕಿದ ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ
ಸಂಸತ್ ಭವನದಲ್ಲಿ ಪರಸ್ಪರ ಕೈ ಕುಲುಕಿದ ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ
‘ದರ್ಶನ್ ಇರುವ ಫ್ಲೋರ್​ನಲ್ಲಿ ಹೆಣ್ಣು ಮಕ್ಕಳು ಇರುವಂತಿರಲಿಲ್ಲ’
‘ದರ್ಶನ್ ಇರುವ ಫ್ಲೋರ್​ನಲ್ಲಿ ಹೆಣ್ಣು ಮಕ್ಕಳು ಇರುವಂತಿರಲಿಲ್ಲ’
ವಿರೋಧ ಪಕ್ಷದ ನಾಯಕ ಆರ್ ಅಶೋಕರನ್ನು ತರಾಟೆಗೆ ತೆಗೆದುಕೊಂಡ ಹೆಚ್ ವಿಶ್ವನಾಥ್
ವಿರೋಧ ಪಕ್ಷದ ನಾಯಕ ಆರ್ ಅಶೋಕರನ್ನು ತರಾಟೆಗೆ ತೆಗೆದುಕೊಂಡ ಹೆಚ್ ವಿಶ್ವನಾಥ್