iQoo 11 Series: 200W ಫಾರ್ಸ್ ಚಾರ್ಜರ್: ಐಕ್ಯೂಯಿಂದ ಬರುತ್ತಿದೆ ಐಕ್ಯೂ 11 ಸರಣಿಯ ಸ್ಮಾರ್ಟ್​ಫೋನ್​ಗಳು

ಐಕ್ಯೂ ಕಂಪನಿ ಹೊಸ ಐಕ್ಯೂ 11 ಮತ್ತು ಐಕ್ಯೂ 11 ಪ್ರೊ ಎಂಬ ಎರಡು ನೂತನ ಸ್ಮಾರ್ಟ್‌ಫೋನ್‌ ಬಿಡುಗಡೆಗೆ ತಯಾರಿ ನಡೆಸಿದೆ. ರಿಲೀಸ್​ಗೂ ಮುನ್ನವೇ ಸಾಕಷ್ಟು ಸುದ್ದಿಯಾಗಿರುವ ಈ ಮೊಬೈಲ್ ವಿಶೇಷತೆಗಳಿಂದ ಕೂಡಿರಲಿದೆಯಂತೆ.

iQoo 11 Series: 200W ಫಾರ್ಸ್ ಚಾರ್ಜರ್: ಐಕ್ಯೂಯಿಂದ ಬರುತ್ತಿದೆ ಐಕ್ಯೂ 11 ಸರಣಿಯ ಸ್ಮಾರ್ಟ್​ಫೋನ್​ಗಳು
iQoo 11 Series
Follow us
TV9 Web
| Updated By: Vinay Bhat

Updated on:Nov 06, 2022 | 12:33 PM

ವಿದೇಶಿ ಮೂಲದ ಪ್ರಸಿದ್ಧ ಸ್ಮಾರ್ಟ್​​ಫೋನ್ (Smartphone) ಬ್ರ್ಯಾಂಡ್ ಐಕ್ಯೂ ಭಾರತದಲ್ಲಿ ನಿಧಾನವಾಗಿ ನೆಲೆಯೂರುತ್ತಿದೆ. ಈ ವರ್ಷ ಒಂದರ ಹಿಂದೆ ಒಂದರಂತೆ ತನ್ನ ಸರಣಿಯಲ್ಲಿ ನೂತನ ಫೋನ್​ಗಳನ್ನು ಬಿಡುಗಡೆ ಮಾಡುತ್ತಿದೆ. ತನ್ನ ಸ್ಟೈಲಿಶ್ ಲುಕ್​ನಿಂದಲೇ ಎಲ್ಲರ ಗಮನ ಸೆಳೆದಿರುವ ಐಕ್ಯೂ ಈ ಹಿಂದೆ ಐಕ್ಯೂ 10 (iQOO 10) ಎಂಬ ಫೋನನ್ನು ಬಿಡುಗಡೆ ಮಾಡಿ ಭಾರೀ ಯಶಸ್ಸು ಸಾಧಿಸಿತ್ತು. ಇದೀಗ ಇದರ ಮುಂದುವರೆದ ಭಾಗವಾಗಿ ಐಕ್ಯೂ ಕಂಪನಿ ಹೊಸ ಐಕ್ಯೂ 11 ಮತ್ತು ಐಕ್ಯೂ 11 ಪ್ರೊ ಎಂಬ ಎರಡು ನೂತನ ಸ್ಮಾರ್ಟ್‌ಫೋನ್‌ ಬಿಡುಗಡೆಗೆ ತಯಾರಿ ನಡೆಸಿದೆ. ರಿಲೀಸ್​ಗೂ ಮುನ್ನವೇ ಸಾಕಷ್ಟು ಸುದ್ದಿಯಾಗಿರುವ ಈ ಮೊಬೈಲ್ ವಿಶೇಷತೆಗಳಿಂದ ಕೂಡಿರಲಿದೆಯಂತೆ. ಡಿಸೆಂಬರ್ ಮೊದಲ ವಾರದಲ್ಲಿ ಐಕ್ಯೂ 11 ಸರಣಿ ಅನಾವರಣಗೊಳ್ಳಲಿದೆ ಎಂದು ಹೇಳಲಾಗಿದೆ. ಹೀಗಿರುವಾಗ ಈ ಫೋನಿನ ಕುರಿತ ಕೆಲವು ಫೀಚರ್​ಗಳು ಆನ್​ಲೈನ್​ನಲ್ಲಿ ಸೋರಿಕೆ ಆಗಿದೆ.

ಲೀಕ್ ಆಗಿರುವ ಮಾಹಿತಿಯ ಪ್ರಕಾರ, ಐಕ್ಯೂ 11 ಸ್ಮಾರ್ಟ್‌ಫೋನ್‌ 6.78 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಇದು 144Hz ರಿಫ್ರೆಶ್‌ ರೇಟ್‌ ಬೆಂಬಲಿಸಲಿದ್ದು, 1500 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಒಳಗೊಂಡಿರಲಿದೆ. ಕ್ವಾಲ್ಕಾಮ್ SM8550 ಸ್ನಾಪ್‌ಡ್ರಾಗನ್ 8 Gen 2 ಪ್ರೊಸೆಸರ್‌ ಹೊಂದಿರುವ ಸಾಧ್ಯತೆ ಇದೆ ಎನ್ನಲಾಗಿದ್ದು, ಆಂಡ್ರಾಯ್ಡ್ 13 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 512GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿರಬಹುದು.

ಐಕ್ಯೂ 11 ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿರಲಿದೆ. ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿರಲಿದೆ. ಮೂರನೇ ಕ್ಯಾಮೆರಾ 13 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಬರುವ ಸಾಧ್ಯತೆಯಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆಯಂತೆ.

ಇದನ್ನೂ ಓದಿ
Image
Twitter: ಕೆಲಸ ಕಳೆದುಕೊಂಡ ಟ್ವಿಟರ್​ನ ಅರ್ಧದಷ್ಟು ಸಿಬ್ಬಂದಿ; ಇವರನ್ನು ಮನೆಗೆ ಕಳಿಸುವುದು ಬಿಟ್ಟು ಬೇರೆ ಆಯ್ಕೆಯೇ ಇರಲಿಲ್ಲ ಎಂದ ಎಲಾನ್ ಮಸ್ಕ್
Image
Oppo A98: ಒಪ್ಪೋ ಕಂಪನಿಯ ಚೊಚ್ಚಲ 108MP ಕ್ಯಾಮೆರಾ ಫೋನಿನ ಹೆಸರು ಬಹಿರಂಗ: ಏನು ಗೊತ್ತೇ?
Image
WhatsApp Tricks: ವಾಟ್ಸ್ಆ್ಯಪ್​​ನಲ್ಲಿರುವ ಈ ಅಚ್ಚರಿ ಫೀಚರ್ ಬಳಸಿದ್ದೀರಾ?: ಇಲ್ಲಿದೆ ನೋಡಿ
Image
Tech Tips: ಮೊಬೈಲ್​ಗೆ ಸಿಮ್ ಕಾರ್ಡ್ ಹಾಕುವಾಗ ಈ ಟ್ರಿಕ್ ಮಾಡಿ: ನಿಮ್ಮ ಇಂಟರ್ನೆಟ್ ಹೈ-ಸ್ಪೀಡ್ ಆಗಿರುತ್ತದೆ

5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 120W ವೇಗದ ಚಾರ್ಜಿಂಗ್‌ಗೆ ಬೆಂಬಲಿಸಲಿದೆ. ಇತ್ತ ಐಕ್ಯೂ 11 ಪ್ರೊ ಸ್ಮಾರ್ಟ್‌ಫೋನ್‌ ಬರೋಬ್ಬರಿ 200W ವೇಗದ ಚಾರ್ಜಿಂಗ್‌ಗೆ ಬೆಂಬಲವನ್ನು ನೀಡಲಿದೆ ಎನ್ನಲಾಗಿದೆ. ಇದುಕೂಡ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿರಲಿದೆ ಎಂದು ನಿರೀಕ್ಷಿಸಲಾಗಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಬೆಲೆ ಎಷ್ಟಿರಬಹುದು ಎಂಬ ಮಾಹಿತಿ ಇನ್ನೂ ಬಹಿರಂಗವಾಗಿಲ್ಲ.

Published On - 12:33 pm, Sun, 6 November 22

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್