ವಿದೇಶಿ ಮೂಲದ ಪ್ರಸಿದ್ಧ ಸ್ಮಾರ್ಟ್‌ಫೋನ್ (Smartphone) ಬ್ರ್ಯಾಂಡ್ ಐಕ್ಯೂ ಭಾರತದಲ್ಲಿ ನಿಧಾನವಾಗಿ ನೆಲೆಯೂರುತ್ತಿದೆ. ಈ ವರ್ಷ ಒಂದರ ಹಿಂದೆ ಒಂದರಂತೆ ತನ್ನ ಸರಣಿಯಲ್ಲಿ ನೂತನ ಫೋನ್ಗಳನ್ನು ಬಿಡುಗಡೆ ಮಾಡುತ್ತಿದೆ. ತನ್ನ ಸ್ಟೈಲಿಶ್ ಲುಕ್ನಿಂದಲೇ ಎಲ್ಲರ ಗಮನ ಸೆಳೆದಿರುವ ಐಕ್ಯೂ ಈ ಹಿಂದೆ ಐಕ್ಯೂ 10 (iQOO 10) ಎಂಬ ಫೋನನ್ನು ಬಿಡುಗಡೆ ಮಾಡಿ ಭಾರೀ ಯಶಸ್ಸು ಸಾಧಿಸಿತ್ತು. ಇದೀಗ ಇದರ ಮುಂದುವರೆದ ಭಾಗವಾಗಿ ಐಕ್ಯೂ ಕಂಪನಿ ಹೊಸ ಐಕ್ಯೂ 11 ಮತ್ತು ಐಕ್ಯೂ 11 ಪ್ರೊ ಎಂಬ ಎರಡು ನೂತನ ಸ್ಮಾರ್ಟ್‌ಫೋನ್ ಬಿಡುಗಡೆಗೆ ತಯಾರಿ ನಡೆಸಿದೆ. ರಿಲೀಸ್ಗೂ ಮುನ್ನವೇ ಸಾಕಷ್ಟು ಸುದ್ದಿಯಾಗಿರುವ ಈ ಮೊಬೈಲ್ ವಿಶೇಷತೆಗಳಿಂದ ಕೂಡಿರಲಿದೆಯಂತೆ. ಡಿಸೆಂಬರ್ ಮೊದಲ ವಾರದಲ್ಲಿ ಐಕ್ಯೂ 11 ಸರಣಿ ಅನಾವರಣಗೊಳ್ಳಲಿದೆ ಎಂದು ಹೇಳಲಾಗಿದೆ. ಹೀಗಿರುವಾಗ ಈ ಫೋನಿನ ಕುರಿತ ಕೆಲವು ಫೀಚರ್ಗಳು ಆನ್ಲೈನ್ನಲ್ಲಿ ಸೋರಿಕೆ ಆಗಿದೆ.
ಲೀಕ್ ಆಗಿರುವ ಮಾಹಿತಿಯ ಪ್ರಕಾರ, ಐಕ್ಯೂ 11 ಸ್ಮಾರ್ಟ್‌ಫೋನ್ 6.78 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಇದು 144Hz ರಿಫ್ರೆಶ್ ರೇಟ್ ಬೆಂಬಲಿಸಲಿದ್ದು, 1500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಒಳಗೊಂಡಿರಲಿದೆ. ಕ್ವಾಲ್ಕಾಮ್ SM8550 ಸ್ನಾಪ್‌ಡ್ರಾಗನ್ 8 Gen 2 ಪ್ರೊಸೆಸರ್ ಹೊಂದಿರುವ ಸಾಧ್ಯತೆ ಇದೆ ಎನ್ನಲಾಗಿದ್ದು, ಆಂಡ್ರಾಯ್ಡ್ 13 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 512GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿರಬಹುದು.
ಐಕ್ಯೂ 11 ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರಲಿದೆ. ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರಲಿದೆ. ಮೂರನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಬರುವ ಸಾಧ್ಯತೆಯಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆಯಂತೆ.
5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 120W ವೇಗದ ಚಾರ್ಜಿಂಗ್‌ಗೆ ಬೆಂಬಲಿಸಲಿದೆ. ಇತ್ತ ಐಕ್ಯೂ 11 ಪ್ರೊ ಸ್ಮಾರ್ಟ್‌ಫೋನ್ ಬರೋಬ್ಬರಿ 200W ವೇಗದ ಚಾರ್ಜಿಂಗ್‌ಗೆ ಬೆಂಬಲವನ್ನು ನೀಡಲಿದೆ ಎನ್ನಲಾಗಿದೆ. ಇದುಕೂಡ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿರಲಿದೆ ಎಂದು ನಿರೀಕ್ಷಿಸಲಾಗಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಬೆಲೆ ಎಷ್ಟಿರಬಹುದು ಎಂಬ ಮಾಹಿತಿ ಇನ್ನೂ ಬಹಿರಂಗವಾಗಿಲ್ಲ.
Published On - 12:33 pm, Sun, 6 November 22