AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

iQoo 11 Series: ಟೆಕ್ ಮಾರುಕಟ್ಟೆಯಲ್ಲಿ ರೋಚಕತೆ ಸೃಷ್ಟಿಸಿದ ಐಕ್ಯೂ 11 ಸರಣಿ: ಏನಿದೆ ವಿಶೇಷತೆ?

ಐಕ್ಯೂ 11 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 120W ವೇಗದ ಚಾರ್ಜಿಂಗ್‌ಗೆ ಬೆಂಬಲಿಸಲಿದೆ. ಇತ್ತ ಐಕ್ಯೂ 11 ಪ್ರೊ ಸ್ಮಾರ್ಟ್‌ಫೋನ್‌ ಬರೋಬ್ಬರಿ 200W ವೇಗದ ಚಾರ್ಜಿಂಗ್‌ಗೆ ಬೆಂಬಲವನ್ನು ನೀಡಲಿದೆ ಎನ್ನಲಾಗಿದೆ.

iQoo 11 Series: ಟೆಕ್ ಮಾರುಕಟ್ಟೆಯಲ್ಲಿ ರೋಚಕತೆ ಸೃಷ್ಟಿಸಿದ ಐಕ್ಯೂ 11 ಸರಣಿ: ಏನಿದೆ ವಿಶೇಷತೆ?
iQoo 11 Series
TV9 Web
| Edited By: |

Updated on:Nov 19, 2022 | 1:43 PM

Share

ವಿದೇಶಿ ಮೂಲದ ಪ್ರಸಿದ್ಧ ಸ್ಮಾರ್ಟ್​​ಫೋನ್ (Smartphone) ಬ್ರ್ಯಾಂಡ್ ಐಕ್ಯೂ ಭಾರತದಲ್ಲಿ ನಿಧಾನವಾಗಿ ನೆಲೆಯೂರುತ್ತಿದೆ. ಈ ವರ್ಷ ಒಂದರ ಹಿಂದೆ ಒಂದರಂತೆ ತನ್ನ ಸರಣಿಯಲ್ಲಿ ನೂತನ ಫೋನ್​ಗಳನ್ನು ಬಿಡುಗಡೆ ಮಾಡುತ್ತಿದೆ. ತನ್ನ ಸ್ಟೈಲಿಶ್ ಲುಕ್​ನಿಂದಲೇ ಎಲ್ಲರ ಗಮನ ಸೆಳೆದಿರುವ ಐಕ್ಯೂ ಈ ಹಿಂದೆ ಐಕ್ಯೂ 10 (iQOO 10) ಎಂಬ ಫೋನನ್ನು ಬಿಡುಗಡೆ ಮಾಡಿ ಭಾರೀ ಯಶಸ್ಸು ಸಾಧಿಸಿತ್ತು. ಇದೀಗ ಇದರ ಮುಂದುವರೆದ ಭಾಗವಾಗಿ ಐಕ್ಯೂ ಕಂಪನಿ ಹೊಸ ಐಕ್ಯೂ 11 ಮತ್ತು ಐಕ್ಯೂ 11 ಪ್ರೊ ಎಂಬ ಎರಡು ನೂತನ ಸ್ಮಾರ್ಟ್‌ಫೋನ್‌ ಬಿಡುಗಡೆಗೆ ತಯಾರಿ ನಡೆಸಿದೆ. ರಿಲೀಸ್​ಗೂ ಮುನ್ನವೇ ಸಾಕಷ್ಟು ಸುದ್ದಿಯಾಗಿರುವ ಈ ಮೊಬೈಲ್ ವಿಶೇಷತೆಗಳಿಂದ ಕೂಡಿರಲಿದೆಯಂತೆ. ಡಿಸೆಂಬರ್ ಮೊದಲ ವಾರದಲ್ಲಿ ಐಕ್ಯೂ 11 ಸರಣಿ ಅನಾವರಣಗೊಳ್ಳಲಿದೆ ಎಂದು ಹೇಳಲಾಗಿದೆ. ಹೀಗಿರುವಾಗ ಈ ಫೋನಿನ ಕುರಿತ ಕೆಲವು ಫೀಚರ್​ಗಳು ಆನ್​ಲೈನ್​ನಲ್ಲಿ ಸೋರಿಕೆ ಆಗಿದೆ.

ಲೀಕ್ ಆಗಿರುವ ಮಾಹಿತಿಯ ಪ್ರಕಾರ, ಐಕ್ಯೂ 11 ಸ್ಮಾರ್ಟ್‌ಫೋನ್‌ 6.78 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಇದು 144Hz ರಿಫ್ರೆಶ್‌ ರೇಟ್‌ ಬೆಂಬಲಿಸಲಿದ್ದು, 1500 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಒಳಗೊಂಡಿರಲಿದೆ. ಕ್ವಾಲ್ಕಾಮ್ SM8550 ಸ್ನಾಪ್‌ಡ್ರಾಗನ್ 8 Gen 2 ಪ್ರೊಸೆಸರ್‌ ಹೊಂದಿರುವ ಸಾಧ್ಯತೆ ಇದೆ ಎನ್ನಲಾಗಿದ್ದು, ಆಂಡ್ರಾಯ್ಡ್ 13 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 512GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿರಬಹುದು.

ಐಕ್ಯೂ 11 ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿರಲಿದೆ. ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿರಲಿದೆ. ಮೂರನೇ ಕ್ಯಾಮೆರಾ 13 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಬರುವ ಸಾಧ್ಯತೆಯಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆಯಂತೆ.

ಇದನ್ನೂ ಓದಿ
Image
Facebook: ಡಿ. 1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ಧರ್ಮದ ಮಾಹಿತಿಗೆ ಅನುಮತಿಯಿಲ್ಲ
Image
New Twitter Policy: ದ್ವೇಷ ಹರಡುವ ಸಂದೇಶಗಳಿಗೆ ಕಡಿವಾಣ; ಹೊಸ ಟ್ವಿಟರ್ ನೀತಿಯ ವಿವರ ಇಲ್ಲಿದೆ
Image
OnePlus 10 Pro 5G: ಧಮಾಕ ಆಫರ್: 32 ನಿಮಿಷದಲ್ಲಿ ಫುಲ್ ಚಾರ್ಜ್ ಆಗುವ ಈ ಫೋನ್ ಕಡಿಮೆ ಬೆಲೆಗೆ ಲಭ್ಯ
Image
ಡೇಟಾ ಸಂರಕ್ಷಣಾ ಮಸೂದೆ ಪರಿಷ್ಕರಿಸಿದ ಕೇಂದ್ರ: ನಿಬಂಧನೆಗಳನ್ನು ಉಲ್ಲಂಘಿಸಿದರೆ ಭಾರೀ ದಂಡ

5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 120W ವೇಗದ ಚಾರ್ಜಿಂಗ್‌ಗೆ ಬೆಂಬಲಿಸಲಿದೆ. ಇತ್ತ ಐಕ್ಯೂ 11 ಪ್ರೊ ಸ್ಮಾರ್ಟ್‌ಫೋನ್‌ ಬರೋಬ್ಬರಿ 200W ವೇಗದ ಚಾರ್ಜಿಂಗ್‌ಗೆ ಬೆಂಬಲವನ್ನು ನೀಡಲಿದೆ ಎನ್ನಲಾಗಿದೆ. ಇದುಕೂಡ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿರಲಿದೆ ಎಂದು ನಿರೀಕ್ಷಿಸಲಾಗಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಬೆಲೆ ಎಷ್ಟಿರಬಹುದು ಎಂಬ ಮಾಹಿತಿ ಇನ್ನೂ ಬಹಿರಂಗವಾಗಿಲ್ಲ. ಆದರೆ, ಈ ಫೋನ್‌ ಐಲ್ ಆಫ್ ಮ್ಯಾನ್ ಮತ್ತು ಟ್ರ್ಯಾಕ್ ಆವೃತ್ತಿಯ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಸಿಗಲಿದೆಯಂತೆ.

Published On - 1:43 pm, Sat, 19 November 22

Follow Us
TV9 Web
TV9 Web

TV9 Kannada

Read More
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್