iQoo 9 Pro: ಭಾರತದಲ್ಲಿ ರಿಲೀಸ್ಗೆ ರೆಡಿಯಾದ ಮತ್ತೊಂದು 120W ಫಾಸ್ಟ್ ಚಾರ್ಜಿಂಗ್ ಸ್ಮಾರ್ಟ್‌ಫೋನ್
ಮೂಲತಃ ವಿವೋ ಕಂಪನಿಯ ಸಬ್ ಬ್ರಾಂಡ್ ಆಗಿರುವ ಐಕ್ಯೂ ಸಂಸ್ಥೆ ಐಕ್ಯೂ 9 ಮತ್ತು ಐಕ್ಯೂ 9 ಪ್ರೊ ಎಂಬ ಎರಡು ಫೋನ್ ಅನ್ನು ಅನಾವರಣ ಮಾಡಿತ್ತು. ಈ ಪೈಕಿ ಐಕ್ಯೂ 9 ಪ್ರೊ ಸದ್ಯದಲ್ಲಿ ಭಾರತದಲ್ಲಿ ಬಿಡುಗಡೆ ಆಗಲಿದೆ. ಈ ಫೋನ್ ಕೂಡ 120W ಫಾಸ್ಟ್ ಚಾರ್ಜಿಂಗ್ ಬೆಂಬಲದೊಂದಿಗೆ ದೇಶಕ್ಕೆ ಅಪ್ಪಳಿಸಲಿದೆ.
ಭಾರತದಲ್ಲೀಗ ಬಿಗ್ ಬ್ಯಾಟರಿ, ವೇಗವಾಗಿ ಚಾರ್ಜ್ ಆಗುವ ಮೊಬೈಲ್ಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಹೀಗಾಗಿ ಸ್ಮಾರ್ಟ್‌ಫೋನ್ ಕಂಪನಿ ಇದರ ಕಡೆ ಹೆಚ್ಚು ಗಮನ ಹರಿಸುತ್ತಿದೆ. ಇತ್ತೀಚೆಗಷ್ಟೆ ಶವೋಮಿ ಕಂಪನಿ ಭಾರತದಲ್ಲಿ ಇದೇ ಮೊದಲ ಬಾರಿಗೆ 15 ನಿಮಿಷಗಳಲ್ಲಿ ಫುಲ್ ಚಾರ್ಜ್ ಆಗುವ 120W ಫಾಸ್ಟ್ ಚಾರ್ಜಿಂಗ್ ಸ್ಮಾರ್ಟ್ಫೋನನ್ನು ಪರಿಚಯಿಸಿತ್ತು. ಇದೀಗ ಐಕ್ಯೂ (IQoo) ಸರದಿ. ವರ್ಷದ ಆರಂಭದಲ್ಲಿ ಚೀನಾದಲ್ಲಿ ಬಿಡುಗಡೆ ಮಾಡಿ ಭರ್ಜರಿ ಯಶಸ್ಸು ಕಂಡ ಐಕ್ಯೂ ಕಂಪನಿಯ ಹೊಸ ಐಕ್ಯೂ 9 ಪ್ರೊ (iQoo 9 Pro) ಸ್ಮಾರ್ಟ್‌ಫೋನ್ ಇದೀಗ ಭಾರತಕ್ಕೆ ಕಾಲಿಡಲು ಸಜ್ಜಾಗಿದೆ. ವಿಶೇಷ ಎಂದರೆ ಈ ಫೋನ್ ಕೂಡ 120W ಫಾಸ್ಟ್ ಚಾರ್ಜಿಂಗ್ ಬೆಂಬಲದೊಂದಿಗೆ ದೇಶಕ್ಕೆ ಅಪ್ಪಳಿಸಲಿದೆ. ಇದಿಷ್ಟೇ ಅಲ್ಲದೆ ಐಕ್ಯೂ 9 ಪ್ರೊ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್ ಬಲವನ್ನು ಒಳಗೊಂಡಿರುವುದು ವಿಶೇಷ.
ಮೂಲತಃ ವಿವೋ ಕಂಪನಿಯ ಸಬ್ ಬ್ರಾಂಡ್ ಆಗಿರುವ ಐಕ್ಯೂ ಸಂಸ್ಥೆ ಐಕ್ಯೂ 9 ಮತ್ತು ಐಕ್ಯೂ 9 ಪ್ರೊ ಎಂಬ ಎರಡು ಫೋನ್ ಅನ್ನು ಅನಾವರಣ ಮಾಡಿತ್ತು. ಈ ಪೈಕಿ ಐಕ್ಯೂ 9 ಪ್ರೊ ಸದ್ಯದಲ್ಲಿ ಭಾರತದಲ್ಲಿ ಬಿಡುಗಡೆ ಆಗಲಿದೆ. ಈ ಸ್ಮಾರ್ಟ್‌ಫೋನ್ 3,200 x 1,440 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.78 ಇಂಚಿನ ಕ್ವಾಡ್ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಪಡೆದುಕೊಂಡಿದೆ. ಜೊತೆಗೆ ಈ ಡಿಸ್‌ಪ್ಲೇ 360Hz ಟಚ್ ಸ್ಯಾಪ್ಲಿಂಗ್ ರೇಟ್ ಅನ್ನು ಹೊಂದಿದೆ. ಹಾಗೆಯೇ ಐಕ್ಯೂ 9 ಪ್ರೊ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ.
ವೇಗದ ಪ್ರೊಸೆಸರ್‌ಗೆ ಪೂರಕವಾಗಿ ಈ ಫೋನ್ 12GB RAM ಮತ್ತು 512GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದಿದೆ. ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ವೈಡ್ ಆಂಗಲ್ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 16 ಮೆಗಾ ಪಿಕ್ಸೆಲ್ ಪೋರ್ಟ್ರೇಟ್ ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒದಗಿಸಿದೆ. ಈ ಸ್ಮಾರ್ಟ್‌ಫೋನ್ 4,700mAh ಸಾಮರ್ಥ್ಯದ ಡ್ಯುಯೆಲ್ ಸೆಲ್ ಬ್ಯಾಟರಿಯನ್ನು ಹೊಂದಿದ್ದು, 120W ಆಲ್ಟ್ರಾ- ಫಾಸ್ಟ್ ಚಾರ್ಜಿಂಗ್ ಮತ್ತು 50W ವೈಯರ್ಲೆಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.
ಐಕ್ಯೂ 9 ನಲ್ಲಿ ಏನಿದೆ?:
ಈ ಸ್ಮಾರ್ಟ್‌ಫೋನ್ 1,080×2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.78 ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು 120Hz ರಿಫ್ರೆಶ್ ದರವನ್ನು ಹೊಂದಿದ್ದು, ಅಂಡರ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಅನ್ನು ಬೆಂಬಲಿಸಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ವೈಡ್-ಆಂಗಲ್ ಕ್ಯಾಮೆರಾ 120-ಡಿಗ್ರಿ ಫೀಲ್ಡ್-ಆಫ್-ವ್ಯೂ ಮತ್ತು ಮೂರನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.ಜೊತೆಗೆ ಈ ಸ್ಮಾರ್ಟ್‌ಫೋನ್ 4,700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 120W ವೇಗದ ಚಾರ್ಜಿಂಗ್ ಬೆಂಬಲಿಸುತ್ತದೆ.
Tecno Pova Neo: ಬಜೆಟ್ ಪ್ರಿಯರು ಫುಲ್ ಶಾಕ್: ಈ ಫೋನ್ನಲ್ಲಿ ಇಷ್ಟು ಕಡಿಮೆ ಬೆಲೆಗೆ ಎಷ್ಟೊಂದು ಫೀಚರ್ಸ್