iQOO 9 Series: ಬಿಡುಗಡೆ ಆದ ದಿನವೇ ಭಾರತದಲ್ಲಿ ಸಖತ್ ಸದ್ದು ಮಾಡುತ್ತಿದೆ ಐಕ್ಯೂ 9 ಸರಣಿ ಸ್ಮಾರ್ಟ್​ಫೋನ್​

ಐಕ್ಯೂ 9, ಐಕ್ಯೂ 9 ಪ್ರೊ ಮತ್ತು ಐಕ್ಯೂ 9 SE (iQoo 9, iQoo 9 Pro and iQoo 9 SE) ಸ್ಮಾರ್ಟ್‌ಫೋನ್‌ಗಳನ್ನು ಭಾರತದಲ್ಲಿ ಬಿಡುಗಡೆ ಆಗಿದೆ. ಈ ಪೈಕಿ ಐಕ್ಯೂ 9 ಪ್ರೊ ಫೋನಿನ ಲ್ಲಿ ಇತ್ತೀಚೆಗೆ ಘೋಷಿಸಲಾದ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್‌ ಬಲವನ್ನು ಒಳಗೊಂಡಿರುವುದು ವಿಶೇಷ.

iQOO 9 Series: ಬಿಡುಗಡೆ ಆದ ದಿನವೇ ಭಾರತದಲ್ಲಿ ಸಖತ್ ಸದ್ದು ಮಾಡುತ್ತಿದೆ ಐಕ್ಯೂ 9 ಸರಣಿ ಸ್ಮಾರ್ಟ್​ಫೋನ್​
iQOO 9 Series
Follow us
TV9 Web
| Updated By: Vinay Bhat

Updated on: Feb 24, 2022 | 8:13 AM

ಭಾರತೀಯ ಸ್ಮಾರ್ಟ್​ಫೋನ್ (Smartphone) ಮಾರುಕಟ್ಟೆಯಲ್ಲಿ ಅಷ್ಟೇನು ದೊಡ್ಡ ಮಟ್ಟದಲ್ಲಿ ಯಶಸ್ಸು ಸಾಧಿಸದ ಐಕ್ಯೂ (IQoo) ಕಂಪನಿಗೆ ವಿದೇಶದಲ್ಲಿ ಭರ್ಜರಿ ಬೇಡಿಕೆ ಇದೆ. ಇದಕ್ಕಾಗಿಯೆ ತನ್ನ ಹೊಸ ಸ್ಮಾರ್ಟ್​ಫೋನ್​ಗಳನ್ನ ಮೊದಲಿಗೆ ತನ್ನ ದೇಶದಲ್ಲಿ ಬಿಡುಗಡೆ ಮಾಡಿ ನಂತರ ಭಾರತಕ್ಕೆ ಪರಿಚಯಿಸುತ್ತದೆ. ಇದೀಗ ವಿದೇಶದಲ್ಲಿ ಧೂಳೆಬ್ಬಿಸುತ್ತಿರುವ ತನ್ನ ಹೊಸ ಐಕ್ಯೂ 9, ಐಕ್ಯೂ 9 ಪ್ರೊ ಮತ್ತು ಐಕ್ಯೂ 9 SE (iQoo 9 and iQoo 9 Pro) ಸ್ಮಾರ್ಟ್‌ಫೋನ್‌ಗಳನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಪೈಕಿ ಐಕ್ಯೂ 9 ಪ್ರೊ ಫೋನಿನ ಲ್ಲಿ ಇತ್ತೀಚೆಗೆ ಘೋಷಿಸಲಾದ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್‌ ಬಲವನ್ನು ಒಳಗೊಂಡಿರುವುದು ವಿಶೇಷ. ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌, ಎಂದಿನಂತೆ ಬಲಿಷ್ಠ ಬ್ಯಾಟರಿ, ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಇದರಲ್ಲಿದೆ. ಹಾಗಾದ್ರೆ ಈ ಸ್ಮಾರ್ಟ್​ಫೋನಿನ ಇತರೆ ವಿಶೇಷತೆ ಏನು?, ಬೆಲೆ ಎಷ್ಟು ಎಂಬುದನ್ನು ನೋಡೋಣ.

ಐಕ್ಯೂ 9 ಸ್ಮಾರ್ಟ್‌ಫೋನ್‌ 6.56 ಇಂಚಿನ ಫುಲ್‌ HD+ 10 ಬಿಟ್ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಮತ್ತು 300Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಒಳಗೊಂಡಿದೆ. ಇದು ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 888+ SoC ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್‌ 12 ನಲ್ಲಿ ಫನ್‌ಟೌಚ್‌ OS 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ ‘ಗಿಂಬಾಲ್’ ಟೆಕ್ನಾಲಜಿಯೊಂದಿಗೆ 48 ಮೆಗಾಪಿಕ್ಸೆಲ್ ಸೋನಿ IMX598 ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ವೈಡ್-ಆಂಗಲ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಪೋರ್ಟ್ರೇಟ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾಋ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 4,350mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 120W ಫ್ಲ್ಯಾಶ್‌ಚಾರ್ಜ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್, GPS/ A-GPS ಮತ್ತು USB ಟೈಪ್-C ಪೋರ್ಟ್ ಸೇರಿವೆ.

ಬೆಲೆ ಎಷ್ಟು?:

ಐಕ್ಯೂ 9 ಸ್ಮಾರ್ಟ್‌ಫೋನ್‌ 8GB + 128GB ಆಯ್ಕೆಗೆ 42,990ರೂ.ಬೆಲೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 12GB + 256GB ಮಾದರಿಗೆ 46,990ರೂ.ಬೆಲೆ ಪಡೆದುಕೊಂಡಿದೆ. ಈ ಫೋನ್‌ ಆಲ್ಫಾ ಮತ್ತು ಲೆಜೆಂಡ್ ಕಲರ್‌ ಆಯ್ಕೆಗಳಲ್ಲಿ ಬರಲಿದೆ.

ಐಕ್ಯೂ 9 ಪ್ರೊ ಸ್ಮಾರ್ಟ್‌ಫೋನ್‌ 6.78 ಇಂಚಿನ 2K E5 ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 3D ಕರ್ವ್ಡ್ ಪ್ರೊಟೆಕ್ಷನ್‌ ಅನ್ನು ಹೊಂದಿದ್ದು, ಕಡಿಮೆ-ತಾಪಮಾನದ ಪಾಲಿಕ್ರಿಸ್ಟಲಿನ್ ಆಕ್ಸೈಡ್ (LTPO) 2.0 ತಂತ್ರಜ್ಞಾನವನ್ನು ಆಧರಿಸಿದೆ. ಇದು ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್‌ 12 ನಲ್ಲಿ ಫನ್‌ಟೌಚ್‌ OS 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ನೊಂದಿಗೆ ಬರುತ್ತದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್‌ ISOCELL GN5 ಸೆನ್ಸಾರ್‌ ಅನ್ನು ಹೊಂದಿದೆ. ಇದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಹೊಂದಿರುವ ‘ಗಿಂಬಾಲ್’ ತಂತ್ರಜ್ಞಾನವನ್ನು ಹೊಂದಿದೆ. ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 16 ಮೆಗಾಪಿಕ್ಸೆಲ್ ಪೋಟ್ರೇಟ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ. ಈ ಫೋನ್‌ 4,700mAhಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 120W ಫ್ಲ್ಯಾಶ್‌ಚಾರ್ಜ್ ಮತ್ತು 50W ವೈರ್‌ಲೆಸ್ ಫ್ಲ್ಯಾಶ್‌ಚಾರ್ಜ್ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್, GPS/ A-GPS ಮತ್ತು USB ಟೈಪ್-C ಪೋರ್ಟ್ ಹೊಂದಿದೆ. ಈ ಫೋನ್ 3D ಅಲ್ಟ್ರಾಸಾನಿಕ್ ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸಂವೇದಕವನ್ನು ಸಹ ಒಳಗೊಂಡಿದೆ.

ಬೆಲೆ ಎಷ್ಟು?:

ಭಾರತದಲ್ಲಿ ಐಕ್ಯೂ 9 ಪ್ರೊ ಸ್ಮಾರ್ಟ್‌ಫೋನ್‌ ಬೇಸ್ ಮಾಡೆಲ್‌ 8GB RAM + 256GB ಇಂಟರ್‌ ಸ್ಟೋರೇಜ್ ರೂಪಾಂತರದ ಆಯ್ಕೆಗೆ 64,990ರೂ.ಬೆಲೆ ಹೊಂದಿದೆ. ಇನ್ನು ಈ ಫೋನ್ 12GB + 256GB ಮಾದರಿಯ ಆಯ್ಕೆಗೆ 69,990ರೂ.ಬೆಲೆಯನ್ನು ಹೊಂದಿದೆ. ಇದು ಡಾರ್ಕ್ ಕ್ರೂಸ್ ಮತ್ತು ಲೆಜೆಂಡ್ ಕಲರ್‌ ಆಯ್ಕೆಗಳಲ್ಲಿ ಬರಲಿದೆ.

ಐಕ್ಯೂ 9 SE ಸ್ಮಾರ್ಟ್‌ಫೋನ್‌ 6.62 ಇಂಚಿನ ಫುಲ್‌ ಹೆಚ್‌ಡಿ+ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಅಳವಡಿಸಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ IMX598 ಸೆನ್ಸಾರ್‌ ಅನ್ನು ನೀಡಲಾಗಿದೆ. ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ವೈಡ್-ಆಂಗಲ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಪಡೆದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 66W ಫ್ಲ್ಯಾಶ್ ಚಾರ್ಜ್ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್, GPS/ A-GPS ಮತ್ತು USB ಟೈಪ್-C ಪೋರ್ಟ್ ಸೇರಿವೆ.

ಬೆಲೆ ಎಷ್ಟು?:

ಐಕ್ಯೂ 9 SE ಸ್ಮಾರ್ಟ್‌ಫೋನ್‌ 8GB + 128GB ರೂಪಾಂತರದ ಬೆಲೆ 33,990ರೂ.ಆಗಿದೆ. ಇನ್ನು 12GB + 256GB ಆಯ್ಕೆಗೆ 37,990ರೂ.ಬೆಲೆ ಹೊಂದಿದೆ. ಈ ಫೋನ್‌ ಸ್ಪೇಸ್ ಫ್ಯೂಷನ್ ಮತ್ತು ಸನ್ಸೆಟ್ ಸಿಯೆರಾ ಬಣ್ಣಗಳ ಆಯ್ಕೆಯಲ್ಲಿ ಬರಲಿದೆ.

Truth social app: ಫೇಸ್​ಬುಕ್, ಟ್ವಿಟರ್​ಗೆ ಟಕ್ಕರ್ ಕೊಡಲು ಹೊಸ ಆ್ಯಪ್ ಬಿಡುಗಡೆ ಮಾಡಿದ ಟ್ರಂಪ್