iQOO 9 Series: ವಿದೇಶದಲ್ಲಿ ಕ್ಯೂ ನಿಂತು ಖರೀದಿಸುತ್ತಿರುವ ಈ ಫೋನ್ ಇಂದು ಭಾರತದಲ್ಲಿ ಬಿಡುಗಡೆ

TV9 Digital Desk

| Edited By: Vinay Bhat

Updated on: Feb 23, 2022 | 6:26 AM

iQoo 9 and iQoo 9 Pro India Launch: ವಿದೇಶದಲ್ಲಿ ಧೂಳೆಬ್ಬಿಸುತ್ತಿರುವ ಹೊಸ ಐಕ್ಯೂ 9 ಮತ್ತು ಐಕ್ಯೂ 9 ಪ್ರೊ ಸ್ಮಾರ್ಟ್‌ಫೋನ್‌ಗಳನ್ನು ಭಾರತದಲ್ಲಿ ಬಿಡುಗಡೆ ಮಾಡಲು ಐಕ್ಯೂ ಸಜ್ಜಾಗಿದೆ ನಿಂತಿದೆ. ಈ ಎರಡು ಫೋನುಗಳು ಇಂದು ದೇಶದಲ್ಲಿ ಅನಾವರಣಗೊಳ್ಳುತ್ತಿದೆ.

iQOO 9 Series: ವಿದೇಶದಲ್ಲಿ ಕ್ಯೂ ನಿಂತು ಖರೀದಿಸುತ್ತಿರುವ ಈ ಫೋನ್ ಇಂದು ಭಾರತದಲ್ಲಿ ಬಿಡುಗಡೆ
New iQoo 9 and iQoo 9 Pro

ಭಾರತೀಯ ಸ್ಮಾರ್ಟ್​ಫೋನ್ ಮಾರುಕಟ್ಟೆಯಲ್ಲಿ ಅಷ್ಟೇನು ದೊಡ್ಡ ಮಟ್ಟದಲ್ಲಿ ಯಶಸ್ಸು ಸಾಧಿಸದ ಐಕ್ಯೂ (IQoo) ಕಂಪನಿಗೆ ವಿದೇಶದಲ್ಲಿ ಭರ್ಜರಿ ಬೇಡಿಕೆ ಇದೆ. ಇದಕ್ಕಾಗಿಯೆ ತನ್ನ ಹೊಸ ಸ್ಮಾರ್ಟ್​ಫೋನ್​ಗಳನ್ನ ಮೊದಲಿಗೆ ತನ್ನ ದೇಶದಲ್ಲಿ ಬಿಡುಗಡೆ ಮಾಡಿ ನಂತರ ಭಾರತಕ್ಕೆ ಪರಿಚಯಿಸುತ್ತದೆ. ಇದೀಗ ವಿದೇಶದಲ್ಲಿ ಧೂಳೆಬ್ಬಿಸುತ್ತಿರುವ ತನ್ನ ಹೊಸ ಐಕ್ಯೂ 9 ಮತ್ತು ಐಕ್ಯೂ 9 ಪ್ರೊ (iQoo 9 and iQoo 9 Pro) ಸ್ಮಾರ್ಟ್‌ಫೋನ್‌ಗಳನ್ನು ಭಾರತದಲ್ಲಿ ಬಿಡುಗಡೆ ಮಾಡಲು ಸಜ್ಜಾಗಿದೆ ನಿಂತಿದೆ. ಈ ಎರಡು ಫೋನುಗಳು ಇಂದು ದೇಶದಲ್ಲಿ ಅನಾವರಣಗೊಳ್ಳುತ್ತಿದೆ. ಇದು ಇತ್ತೀಚೆಗೆ ಘೋಷಿಸಲಾದ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್‌ ಬಲವನ್ನು ಒಳಗೊಂಡಿರುವುದು ವಿಶೇಷ. ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌, ಎಂದಿನಂತೆ ಬಲಿಷ್ಠ ಬ್ಯಾಟರಿ, ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಇದರಲ್ಲಿದೆ. ಈ ಸ್ಮಾರ್ಟ್​ಫೋನಿನ (Smartphone) ಖಚಿತ ಫೀಚರ್ ಬಗ್ಗೆ ಕಂಪನಿ ತಿಳಿಸಿಲ್ಲವಾದರೂ ಮೂಲಗಳ ಪ್ರಕಾರ ತಿಳಿದು ಬಂದ ಮಾಹಿತಿ ಇಲ್ಲಿದೆ.

ಐಕ್ಯೂ 9 ಸ್ಮಾರ್ಟ್‌ಫೋನ್‌ 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.78 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು 120Hz ರಿಫ್ರೆಶ್ ದರವನ್ನು ಹೊಂದಿದ್ದು, ಅಂಡರ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಅನ್ನು ಬೆಂಬಲಿಸಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ವೈಡ್-ಆಂಗಲ್ ಕ್ಯಾಮೆರಾ 120-ಡಿಗ್ರಿ ಫೀಲ್ಡ್-ಆಫ್-ವ್ಯೂ ಮತ್ತು ಮೂರನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.ಜೊತೆಗೆ ಈ ಸ್ಮಾರ್ಟ್‌ಫೋನ್‌ 4,700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 120W ವೇಗದ ಚಾರ್ಜಿಂಗ್‌ ಬೆಂಬಲಿಸುತ್ತದೆ.

ಐಕ್ಯೂ 9 ಸ್ಮಾರ್ಟ್‌ಫೋನ್‌ ಮೂರು ಮಾದರಿಯಲ್ಲಿ ಈ ಹಿಂದೆ ಚೀನಾದಲ್ಲಿ ಅನಾವರಣಗೊಂಡಿತ್ತು. ಇದರ 8GB + 256GB ಸ್ಟೋರೇಜ್ ಮಾದರಿಗೆ RMB 3,999 ಅಂದರೆ ಭಾರತದಲ್ಲಿ ಒದರ ಬೆಲೆ ಅಂದಾಜು 47,000 ರೂ. ಎನ್ನಬಹುದು. ಇದಲ್ಲದೆ 12GB + 256GB ಸ್ಟೋರೇಜ್ ರೂಪಾಂತರದ ಆಯ್ಕೆಗೆ RMB 4,399 (ಅಂದಾಜು 51,600ರೂ) ಮತ್ತು 12GB + 512GB ಸ್ಟೋರೇಜ್ ಕಾನ್ಫಿಗರೇಶನ್ ಬೆಲೆ RMB 4,799 (ಅಂದಾಜು 56,240ರೂ) ಬೆಲೆ ಹೊಂದಿದೆ.

ಐಕ್ಯೂ 9 ಪ್ರೊ ಸ್ಮಾರ್ಟ್‌ಫೋನ್ 3,200×1,440 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.78-ಇಂಚಿನ ಕ್ವಾಡ್‌ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಪಡೆದುಕೊಂಡಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಹಾಗೆಯೇ 12GB RAM ಮತ್ತು 512GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದಿದೆ. ಐಕ್ಯೂ 9ಪ್ರೊ ಸ್ಮಾರ್ಟ್‌ಫೋನ್‌ ಟ್ರಿಪಲ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ವೈಡ್ ಆಂಗಲ್ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 16 ಮೆಗಾಪಿಕ್ಸೆಲ್ ಪೋರ್ಟ್ರೇಟ್ ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒದಗಿಸಿದೆ. ಈ ಸ್ಮಾರ್ಟ್‌ಫೋನ್‌ ಬೆಲೆ ಬೇಸ್‌ ಮಾಡೆಲ್‌ 8GB + 256GB ಸ್ಟೋರೇಜ್ ಆಯ್ಕೆಗೆ ಚೀನಾದಲ್ಲಿ RMB 4,999 (ಅಂದಾಜು 58,600ರೂ).

ಇದೇ ಮೊದಲ ಬಾರಿಗೆ ಕೇವಲ 14,999 ರೂ. ಗೆ ಸೇಲ್ ಕಾಣುತ್ತಿದೆ Poco M4 Pro 5G ಸ್ಮಾರ್ಟ್‌ಫೋನ್‌

32 ನಿಮಿಷ-ಫುಲ್ ಚಾರ್ಜ್: ಮಾರುಕಟ್ಟೆಯಲ್ಲಿ ಧೂಳೆಬ್ಬಿಸುತ್ತಿರುವ OnePlus Nord CE 2 5G ಖರೀದಿಗೆ ಲಭ್ಯ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada