iQoo 9 Series: ಮಾರುಕಟ್ಟೆಯಲ್ಲಿ ಧೂಳೆಬ್ಬಿಸುತ್ತಿದೆ ಐಕ್ಯೂ ಬಿಡುಗಡೆ ಮಾಡಿರುವ ಎರಡು ಹೊಸ ಸ್ಮಾರ್ಟ್​ಫೋನ್

iQoo 9 and iQoo 9 Pro: ಐಕ್ಯೂ 9 ಮತ್ತು ಐಕ್ಯೂ 9 ಪ್ರೊ ಸ್ಮಾರ್ಟ್‌ಫೋನ್‌ ಇತ್ತೀಚೆಗೆ ಘೋಷಿಸಲಾದ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್‌ ಬಲವನ್ನು ಒಳಗೊಂಡಿರುವುದು ವಿಶೇಷ. ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌, ಎಂದಿನಂತೆ ಬಲಿಷ್ಠ ಬ್ಯಾಟರಿ, ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಇದರಲ್ಲಿದೆ.

iQoo 9 Series: ಮಾರುಕಟ್ಟೆಯಲ್ಲಿ ಧೂಳೆಬ್ಬಿಸುತ್ತಿದೆ ಐಕ್ಯೂ ಬಿಡುಗಡೆ ಮಾಡಿರುವ ಎರಡು ಹೊಸ ಸ್ಮಾರ್ಟ್​ಫೋನ್
New iQoo 9 and iQoo 9 Pro
Edited By:

Updated on: Jan 07, 2022 | 3:33 PM

ಭಾರತೀಯ ಸ್ಮಾರ್ಟ್​ಫೋನ್ ಮಾರುಕಟ್ಟೆಯಲ್ಲಿ ಅಷ್ಟೇನು ದೊಡ್ಡ ಮಟ್ಟದಲ್ಲಿ ಯಶಸ್ಸು ಸಾಧಿಸದ ಐಕ್ಯೂ (IQoo) ಕಂಪನಿಗೆ ವಿದೇಶದಲ್ಲಿ ಭರ್ಜರಿ ಬೇಡಿಕೆ ಇದೆ. ಇದಕ್ಕಾಗಿಯೆ ತನ್ನ ಹೊಸ ಸ್ಮಾರ್ಟ್​ಫೋನ್​ಗಳನ್ನ ಮೊದಲಿಗೆ ತನ್ನ ದೇಶದಲ್ಲಿ ಬಿಡುಗಡೆ ಮಾಡಿ ನಂತರ ಭಾರತಕ್ಕೆ ಪರಿಚಯಿಸುತ್ತದೆ. ಅದರಂತೆ ಸದ್ಯ ಇದೀಗ ಐಕ್ಯೂ ಕಂಪನಿ ಹೊಸ ಐಕ್ಯೂ 9 ಮತ್ತು ಐಕ್ಯೂ 9 ಪ್ರೊ (iQoo 9 and iQoo 9 Pro) ಸ್ಮಾರ್ಟ್‌ಫೋನ್‌ಗಳನ್ನು ಚೀನಾದಲ್ಲಿ ಲಾಂಚ್‌ ಮಾಡಿದೆ. ಈ ಎರಡೂ ಹೊಸ ಸ್ಮಾರ್ಟ್‌ಫೋನ್‌ಗಳು ಇತ್ತೀಚೆಗೆ ಘೋಷಿಸಲಾದ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್‌ ಬಲವನ್ನು ಒಳಗೊಂಡಿರುವುದು ವಿಶೇಷ. ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌, ಎಂದಿನಂತೆ ಬಲಿಷ್ಠ ಬ್ಯಾಟರಿ, ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಇದರಲ್ಲಿದೆ. ಈ ಫೋನ್ ಸದ್ಯದಲ್ಲೇ ಭಾರತದಲ್ಲೂ ಬಿಡುಗಡೆ ಮಾಡುವುದಾಗಿ ಕಂಪನಿ ಹೇಳಿಕೊಂಡಿದೆ.

ಐಕ್ಯೂ 9 ಸ್ಮಾರ್ಟ್‌ಫೋನ್‌ 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.78 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು 120Hz ರಿಫ್ರೆಶ್ ದರವನ್ನು ಹೊಂದಿದ್ದು, ಅಂಡರ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಅನ್ನು ಬೆಂಬಲಿಸಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ವೈಡ್-ಆಂಗಲ್ ಕ್ಯಾಮೆರಾ 120-ಡಿಗ್ರಿ ಫೀಲ್ಡ್-ಆಫ್-ವ್ಯೂ ಮತ್ತು ಮೂರನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.ಜೊತೆಗೆ ಈ ಸ್ಮಾರ್ಟ್‌ಫೋನ್‌ 4,700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 120W ವೇಗದ ಚಾರ್ಜಿಂಗ್‌ ಬೆಂಬಲಿಸುತ್ತದೆ.

ಐಕ್ಯೂ 9 ಸ್ಮಾರ್ಟ್‌ಫೋನ್‌ ಮೂರು ಮಾದರಿಯಲ್ಲಿ ಮಾರುಕಟ್ಟೆಗೆ ಬಂದಿದೆ. ಇದರ 8GB + 256GB ಸ್ಟೋರೇಜ್ ಮಾದರಿಗೆ RMB 3,999 ಅಂದರೆ ಭಾರತದಲ್ಲಿ ಒದರ ಬೆಲೆ ಅಂದಾಜು 47,000 ರೂ. ಎನ್ನಬಹುದು. ಇದಲ್ಲದೆ 12GB + 256GB ಸ್ಟೋರೇಜ್ ರೂಪಾಂತರದ ಆಯ್ಕೆಗೆ RMB 4,399 (ಅಂದಾಜು 51,600ರೂ) ಮತ್ತು 12GB + 512GB ಸ್ಟೋರೇಜ್ ಕಾನ್ಫಿಗರೇಶನ್ ಬೆಲೆ RMB 4,799 (ಅಂದಾಜು 56,240ರೂ) ಬೆಲೆ ಹೊಂದಿದೆ.

ಐಕ್ಯೂ 9 ಪ್ರೊ ಸ್ಮಾರ್ಟ್‌ಫೋನ್ 3,200×1,440 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.78-ಇಂಚಿನ ಕ್ವಾಡ್‌ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಪಡೆದುಕೊಂಡಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಹಾಗೆಯೇ 12GB RAM ಮತ್ತು 512GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದಿದೆ. ಐಕ್ಯೂ 9ಪ್ರೊ ಸ್ಮಾರ್ಟ್‌ಫೋನ್‌ ಟ್ರಿಪಲ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ವೈಡ್ ಆಂಗಲ್ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 16 ಮೆಗಾಪಿಕ್ಸೆಲ್ ಪೋರ್ಟ್ರೇಟ್ ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒದಗಿಸಿದೆ. ಈ ಸ್ಮಾರ್ಟ್‌ಫೋನ್‌ ಬೆಲೆ ಬೇಸ್‌ ಮಾಡೆಲ್‌ 8GB + 256GB ಸ್ಟೋರೇಜ್ ಆಯ್ಕೆಗೆ RMB 4,999 (ಅಂದಾಜು 58,600ರೂ) ಗೆ ನಿಗದಿಪಡಿಸಲಾಗಿದೆ.

Xiaomi 11i HyperCharge 5G: 120W ಫಾಸ್ಟ್ ಚಾರ್ಜ್: ಭಾರತದಲ್ಲಿ ಅತೀ ವೇಗವಾಗಿ ಚಾರ್ಜ್ ಆಗುವ ಮೊದಲ ಫೋನ್ ರಿಲೀಸ್

Web contact

TV9 Kannada

Read More
Follow Us