iQOO Z7: ಕೇವಲ ಫೋಟೋದಿಂದಲೇ ರೋಚಕತೆ ಸೃಷ್ಟಿಸಿದ ಐಕ್ಯೂ ಕಂಪನಿಯ ಹೊಸ ಸ್ಮಾರ್ಟ್​ಫೋನ್: ಯಾವುದು?

ಕಳೆದ ವಾರವಷ್ಟೆ ಐಕ್ಯೂ ನಿಯೋ 7 (iQOO Neo 7) ಎಂಬ ಹೊಸ ಸ್ಮಾರ್ಟ್​ಫೋನ್ ಅನ್ನು ಭಾರತದಲ್ಲಿ ರಿಲೀಸ್ ಮಾಡಿ ಸದ್ದು ಮಾಡಿದ್ದ ಕಂಪನಿ ಇದೀಗ ಮತ್ತೊಂದು ಸ್ಮಾರ್ಟ್​ಫೋನ್​ನ ಫೋಟೋವನ್ನು ರಿವೀಲ್ ಮಾಡಿ ಕುತೂಹಲ ಹೆಚ್ಚಿಸುವಂತೆ ಮಾಡಿದೆ. ಈ ಫೋನಿನ ಹೆಸರು ಐಕ್ಯೂ Z7 (iQOO Z7) ಆಗಿದೆ.

iQOO Z7: ಕೇವಲ ಫೋಟೋದಿಂದಲೇ ರೋಚಕತೆ ಸೃಷ್ಟಿಸಿದ ಐಕ್ಯೂ ಕಂಪನಿಯ ಹೊಸ ಸ್ಮಾರ್ಟ್​ಫೋನ್: ಯಾವುದು?
iQOO Z7
Follow us
Vinay Bhat
|

Updated on:Feb 26, 2023 | 11:43 AM

ಸ್ಮಾರ್ಟ್​​ಫೋನ್ (Smartphone) ಮಾರುಕಟ್ಟೆಯಲ್ಲಿ ವಿಶೇಷ ಸ್ಥಾನ ಸಂಪಾದಿಸಿರುವ ವಿವೋ ಒಡೆತನದ ಐಕ್ಯೂ ಕಂಪನಿ ವಿಭಿನ್ನ ಮಾದರಿಯ ಫೋನ್​ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಕಳೆದ ವಾರವಷ್ಟೆ ಐಕ್ಯೂ ನಿಯೋ 7 (iQOO Neo 7) ಎಂಬ ಹೊಸ ಸ್ಮಾರ್ಟ್​ಫೋನ್ ಅನ್ನು ಭಾರತದಲ್ಲಿ ರಿಲೀಸ್ ಮಾಡಿ ಸದ್ದು ಮಾಡಿದ್ದ ಕಂಪನಿ ಇದೀಗ ಮತ್ತೊಂದು ಸ್ಮಾರ್ಟ್​ಫೋನ್​ನ ಫೋಟೋವನ್ನು ರಿವೀಲ್ ಮಾಡಿ ಕುತೂಹಲ ಹೆಚ್ಚಿಸುವಂತೆ ಮಾಡಿದೆ. ಈ ಫೋನಿನ ಹೆಸರು ಐಕ್ಯೂ Z7 (iQOO Z7) ಆಗಿದೆ. ಮುಂದಿನ ತಿಂಗಳು ಈ ಫೋನ್ ಭಾರತದಲ್ಲಿ ಲಾಂಚ್ ಆಗುವ ನಿರೀಕ್ಷೆ ಇದ್ದು, ಇದು ಐಕ್ಯೂ Z6 ನ ಉತ್ತರಾಧಿಕಾರಿಯಾಗಿದೆ ಎಂದು ಹೇಳಲಾಗಿದೆ. ಐಕ್ಯೂ Z6 ಜೊತೆಗೆ ಐಕ್ಯೂ Z6x ಫೋನ್ ಕೂಡ ಬಿಡುಗಡೆ ಆಗಲಿದೆ ಎಂದು ಹೇಳಲಾಗಿದೆ.

ಐಕ್ಯೂ Z6 ಸ್ಮಾರ್ಟ್​ಫೋನ್ ಬಗ್ಗೆ ಹೆಚ್ಚಿನ ಮಾಹಿತಿ ಏನೂ ಬಹಿರಂಗವಾಗಿಲ್ಲ. ರಿವೀಲ್ ಆಗಿರುವ ಫೋಟೋದ ಪ್ರಕಾರ ಈ ಚಿತ್ರ ಮುಸುಕಿನಿಂದ ಮುಚ್ಚಿಕೊಂಡಿದೆ. ಹಾಗೆಯೇ ಬ್ಯಾಗ್ರೌಂಡ್‌ನಲ್ಲಿ ಪತ್ತೆ ಮಾಡಲು ಕಷ್ಟವಾಗುವಂತೆ ತುಂಬಾ ಕೌಶಲ್ಯದಿಂದ Z7 ಎಂದು ಬರೆಯಲಾಗಿದೆ. ಜೊತೆಗೆ ಈ ಚಿತ್ರದಲ್ಲಿ ಫೋನ್‌ನ ರಿಯರ್‌ ಭಾಗ ಮಾತ್ರ ಕಾಣಿಸುತ್ತಿದೆ. ಈ ಫೋನ್‌ ಟೀಲ್ ಬಣ್ಣದಲ್ಲಿ ಕಾಣಿಸಿಕೊಂಡಿದೆ. ಇದರ ಬೆಲೆ ಎಷ್ಟಿರಬಹುದು ಎಂಬ ಮಾಹಿತಿ ಬಹಿರಂಗವಾಗಿಲ್ಲ.

Tech Tips: ಸ್ಮಾರ್ಟ್​ಫೋನ್ ಡಿಸ್ ಪ್ಲೇ ಮೇಲೆ ಸ್ಕ್ರಾಚ್​ಗಳಿದ್ದರೆ ಸುಲಭವಾಗಿ ಹೇಗೆ ತೆಗೆಯುವುದು?

ಇದನ್ನೂ ಓದಿ
Image
Tech Tips: ನಿಮ್ಮ ಸ್ಮಾರ್ಟ್​ಫೋನ್ ಚಾರ್ಜ್​ಗೆ ಹಾಕಿದಾಗ ಬಿಸಿಯಾಗುತ್ತಾ?: ನಿರ್ಲಕ್ಷಿಸದಿರಿ
Image
Tech Tips: ಯೂಟ್ಯೂಬ್​ನಲ್ಲಿ​ ವಿಡಿಯೋ ನೋಡುವಾಗ ಜಾಹೀರಾತು ಬಾರದಂತೆ ಹೇಗೆ ಮಾಡುವುದು?
Image
Gadget Review: ಎಚ್​ಪಿ ಸ್ಮಾರ್ಟ್​ ಟ್ಯಾಂಕ್ 580 ಪ್ರಿಂಟರ್​- ಇಲ್ಲಿದೆ ಮಾಹಿತಿ
Image
Realme GT 3: 10 ನಿಮಿಷಗಳ ಒಳಗೆ ಫುಲ್ ಚಾರ್ಜ್: ಮಾರುಕಟ್ಟೆಗೆ ಅಪ್ಪಳಿಸಲು ತಯಾರಾದ ರಿಯಲ್‌ ಮಿ GT 3 ಫೋನ್

ಐಕ್ಯೂ ನಿಯೋ 7 ಹೇಗಿದೆ?:

ಭಾರತದಲ್ಲಿ ಮೊನ್ನೆಯಷ್ಟೆ ಅನಾವರಣಗೊಂಡ ಐಕ್ಯೂ ನಿಯೋ 7 ಸ್ಮಾರ್ಟ್‌ಫೋನ್ 6.78 ಇಂಚಿನ ಫುಲ್‌ HD+ ಡಿಸ್‌ಪ್ಲೇ ಹೊಂದಿದೆ. 120Hz ರಿಫ್ರೆಶ್ ರೇಟ್​ನಿಂದ ಕೂಡಿದೆ. ಮೀಡಿಯಾ ಟೆಕ್ ಡೈಮೆನ್ಸಿಟಿ 8200+ SoC ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ ಪ್ರಮುಖ SoC 4nm ಪ್ರಕ್ರಿಯೆಯನ್ನು ಆಧರಿಸಿದ್ದು, ಅತ್ಯಂತ ವೇಗವನ್ನು ಪಡೆದುಕೊಂಡಿರುವುದರಿಂದ ಗೇಮಿಂಗ್​ಗೆ ಹೇಳಿ ಮಾಡಿಸಿದ್ದಾಗಿದೆ.

ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್​ನ OIS ಕ್ಯಾಮೆರಾ ನೀಡಲಾಗಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೊ ಲೆನ್ಸ್ ಇದೆ. 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಅಳವಡಿಸಲಾಗಿದೆ. ಈ ಫೋನಿನ ಮತ್ತೊಂದು ಪ್ರಮುಖ ಫೀಚರ್ ಬ್ಯಾಟರಿ ಮತ್ತು ಫಾಸ್ಟ್ ಚಾರ್ಜಿಂಗ್. ಇದರಲ್ಲಿ ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದೆ. ಇದು 120W ಫ್ಲ್ಯಾಶ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಕೇವಲ 10 ನಿಮಿಷಗಳಲ್ಲಿ ಶೇ. 50 ರಷ್ಟು ಚಾರ್ಜ್ ಫುಲ್ ಆಗುತ್ತದೆ ಎಂದು ಕಂಪನಿ ಹೇಳಿದೆ.

ಐಕ್ಯೂ ನಿಯೋ 7 ಸ್ಮಾರ್ಟ್​ಫೋನ್ ಭಾರತದಲ್ಲಿ ಒಟ್ಟು ಎರಡು ಸ್ಟೋರೇಜ್ ಆಯ್ಕೆಯಲ್ಲಿ ಬಿಡುಗಡೆ ಆಗಿತ್ತು. ಇದರ 8GB RAM ಹಾಗೂ 128GB ಆಂತರಿಕ ಸಂಗ್ರಹಣೆಯ ವೇರಿಯಂಟ್‌ಗೆ 29,999 ರೂ. ನಿಗದಿ ಮಾಡಲಾಗಿದೆ. ಅಂತೆಯೆ 12GB RAM + 256GB ವೇರಿಯಂಟ್‌ಗೆ 33,999 ರೂ. ಇದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:43 am, Sun, 26 February 23

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್